ಸರಣಿ ಅಪಘಾತ: ಇಬ್ಬರ ಸಾವು

ಹಿರಿಯೂರು.ನ೧೪: ತಾಲ್ಲೂಕಿನ ಪಟ್ರೇಹಳ್ಳಿ ಸಮೀಪ ರಾಷ್ಟ್ರೀಯ ಹೆದ್ದಾರಿ ನಾಲ್ಕರಲ್ಲಿ ಸಂಭವಿಸಿದ ಸರಣಿ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಮೃತರನ್ನು ಹಾವೇರಿಯ ಲತಾ (೨೮) ಮತ್ತು ಬೆಂಗಳೂರಿನ ಅತ್ತಿಬೆಲೆ ನಿವಾಸಿ ಟಾಟಾ ಏಸ್ ಚಾಲಕ ಶಶಿಕುಮಾರ್ (೨೬) ಎಂದು ಗುರುತಿಸಲಾಗಿದ್ದು ಇಬ್ಬರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ.
ಶ್ರುತಿ (೦೩), ಜ್ಯೋತಿ (೨೫), ಜಾಗೃತಿ (೦೪), ದ್ಯಾಮಣ್ಣ (೨೪) ವರ್ಷ ಎಂಬುವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಚಿಕಿತ್ಸೆಗಾಗಿ ಇವರನ್ನು ನಗರದ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿದೆ.
ಹೆದ್ದಾರಿಯ ಗ್ರೀನ್ ಲ್ಯಾಂಡ್ ಹೋಟೆಲ್ ಸಮೀಪದಲ್ಲಿ ರಾತ್ರಿ ಈ ಅಪಘಾತ ಸಂಭವಿಸಿದೆ.
ಖಾಸಗಿ ಬಸ್, ಇಂಡಿಕಾ ಕಾರು, ಮಾರುತಿ ಆಮ್ನಿ, ಕ್ಯಾಂಟರ್ ಹಾಗೂ ಟಾಟಾ ಏಸ್ ನಡುವೆ ಸರಣಿ ಅಪಘಾತ ಸಂಭವಿಸಿದೆ. ಓಮಿನಿ ಕಾರು ಹಾಗೂ ಟಾಟಾ ಏಸ್ ವಾಹನದಲ್ಲಿ ಇದ್ದವರು ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
೧೪ಹೆಚ್-೫