ಸರಳವಾಗಿ ಡಾ.ಬಾಬು ಜಗಜೀವನರಾಂರವರ ಜಯಂತಿ ಆಚರಣೆ

ಕಲಬುರಗಿ.ಏ.5: ವಿಧಾನಸಭಾ ಚುನಾವಣೆ ನೀತಿ ಸಂಹಿತೆ ಜಾರಿಯಲ್ಲಿರುವ ಪ್ರಯುಕ್ತ ಬುಧುವಾರಂದು ನಗರದ ಟೌನ್ ಹಾಲ್‍ನಲ್ಲಿರುವ ಹಸಿರು ಕ್ರಾಂತಿಯ ಹರಿಕಾರ, ಭಾರತದ ಮಾಜಿ ಉಪ ಪ್ರಧಾನಮಂತ್ರಿಗಳಾದ ಡಾ.ಬಾಬು ಜಗಜೀವನರಾಂ ರವರ ಪ್ರತಿಮೆಗೆ ಜಿಲ್ಲಾಧಿಕಾರಿ ಯಶವಂತ್ ವಿ ಗುರುಕರ್ ಪೂಜೆ ಸಲ್ಲಿಸಿ ಮಾಲಾರ್ಪಣೆ ಮಾಡುವ ಮೂಲಕ ಸರಳವಾಗಿ ಜಯಂತಿಯನ್ನು ಆಚರಿಸಲಾಯಿತು.

ಕಲಬುರಗಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಸಮಾಜ ಕಲ್ಯಾಣ ಇಲಾಖೆ ಹಾಗೂ ಮಹಾನಗರ ಪಾಲಿಕೆ ಇವುಗಳ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಳ್ಳಲಾದ ಜಯಂತಿ ಕಾರ್ಯಕ್ರಮದಲ್ಲಿ ಕಲಬುರಗಿ ನಗರ ಪೊಲೀಸ್ ಆಯುಕ್ತ ಚೇತನ್ ಆರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಇಶಾ ಪಂತ್, ಡಿ.ಸಿ.ಪಿ. ಅಡ್ಡೂರ ಶ್ರೀನಿವಾಸಲು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಗಿರೀಶ್ ಡಿ ಬದೋಲೆ, ಮಹಾನಗರ ಪಾಲಿಕೆ ಆಯುಕ್ತ ಭುವನೇಶ್ ದೇವಿದಾಸ್ ಪಾಟೀಲ್ ಹಾಗೂ ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕಿ ಪಿ. ಶುಭ ಸೇರಿದಂತೆ ಸಮಾಜದ ಮುಖಂಡರು ಉಪಸ್ಥಿತರಿದ್ದರು.