ಸರಳವಾಗಿ ದೇವರ ದಾಸಿಮಯ್ಯ ಜಯಂತಿ ಆಚರಣೆ

ಕಲಬುರಗಿ.ಏ.17: ಕೋವಿಡ್ ಹಿನ್ನೆಲೆ ಶನಿವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ವತಿಯಿಂದ ದೇವರ ದಾಸಿಮಯ್ಯ ಜಯಂತಿಯನ್ನು ಸರಳವಾಗಿ ಆಚರಿಸಲಾಯಿತು.
ಅಪರ ಜಿಲ್ಲಾಧಿಕಾರಿ ಡಾ. ಶಂಕರ ವಣಿಕ್ಯಾಳ ಅವರು ದೇವರ ದಾಸಿಮಯ್ಯ ಅವರ ಭಾವಚಿತ್ರಕ್ಕೆ ಪುμÁ್ಪರ್ಚನೆ ಮಾಡಿ ಗೌರವ ಸಲ್ಲಿಸಿದರು.
ಈ ಸಂದರ್ಭದಲ್ಲಿ ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕ ದತ್ತಪ್ಪ ಸಾಗನೂರ ಹಾಗೂ ನೇಕಾರ ಸಮಾಜದ ರಾಜ್ಯಾಧ್ಯಕ್ಷ ಚಂದ್ರಶೇಖರ ಸುಲ್ತಾನಾಪುರ, ಸಹ ಕಾರ್ಯದರ್ಶಿ ಭೀಮಾಶಂಕರ ರಾಜಾಗೊಂಡೆ, ನೇಕಾರ ಸಮಾಜದ ಜಿಲ್ಲೆ ಘಟಕದ ಉಪಾಧ್ಯಕ್ಷ ಮಲ್ಲಿನಾಥ ಲಕ್ಕಮಣ್ಣ, ಶ್ರೀಶೈಲ್ ರಾಜಶೇಖರ ಬುಳ್ಳ ಮತ್ತಿತರರು ಉಪಸ್ಥಿತರಿದ್ದರು.