ಸರಳವಾಗಿ ಭಗವಾನ್ ಮಹಾವೀರರ ಜಯಂತಿ ಆಚರಣೆ

ಚಿತ್ರದುರ್ಗ,ಏ.25: ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಂಯುಕ್ತಾಶ್ರಯದಲ್ಲಿ ಏಪ್ರಿಲ್ 25 ರಂದು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಭಗವಾನ್ ಮಹಾವೀರರ ಜಯಂತಿಯನ್ನು ಕೋವಿಡ್ ಹಿನ್ನಲೆಯಲ್ಲಿ ಸರಳವಾಗಿ ಆಚರಿಸಲಾಯಿತು. ಈ ವೇಳೆ ಭಗವಾನ್ ಮಹಾವೀರರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಲಾಯಿತು.
  ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕರಾದ ಧನಂಜಯ ಮಾತನಾಡಿ ಜೈನಧರ್ಮ ತ್ಯಾಗ ಪ್ರಧಾನವಾದ ಧರ್ಮವಾಗಿದ್ದು ಇದರ ಪ್ರಥಮ ತೀರ್ಥಂಕರರಾದ ಭಗವಾನ್ ಋಷಭದೇವರಿಂದ ಪ್ರಾರಂಭವಾಗಿದ್ದು ಭಗವಾನ್ ಮಹಾವೀರರು 24 ನೇ ತೀರ್ಥಂಕರರಾಗಿದ್ದರು. ಇವರು ಅಹಿಂಸೆ, ಸತ್ಯ, ಅಚೌರ್ಯ, ಬ್ರಹ್ಮಚರ್ಯ ಹಾಗೂ ಅಪರಿಗ್ರಹ ಎಂಬ ಪಂಚಶೀಲ ತತ್ವಗಳನ್ನು ಬೋಧಿಸಿದರು. ಈ ತತ್ವಗಳನ್ನು ನಾವೆಲ್ಲರೂ ಪಾಲಿಸುವ ಮೂಲಕ ಆದರ್ಶ ಸಮಾಜ ನಿರ್ಮಾಣ ಮಾಡೋಣ ಎಂದು ತಿಳಿಸಿದರು.
 ಜಯಂತಿಯಲ್ಲಿ ಜೈನ ಸಂಘದ ಅಧ್ಯಕ್ಷರಾದ ಪ್ರಥ್ವಿರಾಜ್, ಪದಾಧಿಕಾರಿಗಳಾದ ಪ್ರೇಮಚಂದ್, ರಂಜಿತ್‍ಕುಮಾರ್ ಉಪಸ್ಥಿತರಿದ್ದರು. ರಂಗಕರ್ಮಿ ಕೆ.ಪಿ.ಎಂ.ಗಣೇಶಯ್ಯ ನಿರೂಪಿಸಿದರು.