ಸರಳವಾಗಿ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ

ಸಿರವಾರ.ಅ.31.ಪ್ರಸ್ತುತ ದಿನಗಳಲ್ಲಿ ಕೋವಿಡ್‌ ದಿನೇ ದಿನೇ ವ್ಯಾಪಕವಾಗಿ ಹರಡುತ್ತಿರುವುದರಿಂದ ಈ ಬಾರಿ ವಾಲ್ಮೀಕಿ ಜಯಂತಿಯನ್ನು ಅತ್ಯಂತ ಶಾಂತಿ ಹಾಗೂ ಸರಳ ರೀತಿಯಲ್ಲಿ ಆಚರಿಸಲಾಯಿತು.
ತಾಲ್ಲೂಕಿನ ಗಣದಿನ್ನಿ ಗ್ರಾಮದಲ್ಲಿ ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಅಂಗವಾಗಿ ಗ್ರಾಮದಲ್ಲಿ ನೂತನ ವಾಲ್ಮೀಕಿ ವೃತ್ತ ಸ್ಥಾಪಿಸುವ ಮೂಲಕ ಜಯಂತಿ ಆಚರಿಸಲಾಯಿತು.
ಗ್ರಾಮದ ಹಿರಿಯ ಮುಖಂಡರು ಮಹರ್ಷಿ ವಾಲ್ಮೀಕಿ ಭಾವಚಿತ್ರಕ್ಕೆ ಆರತಿ ಬೆಳಗಿ ಪುಷ್ಪಾರ್ಚನೆ ಮಾಡುವ ಮೂಲಕ ಶನಿವಾರ ಜಯಂತಿಯನ್ನು ಸರಳವಾಗಿ ಆಚರಿಸಲಾಯಿತು.
ಈ ಸಂದರ್ಭದಲ್ಲಿ ವಾಲ್ಮೀಕಿ ಸಮುದಾಯದ ಹಿರಿಯ ಮುಖಂಡರು ಹಾಗೂ ಯುವಕರು ಉಪಸ್ಥಿತರಿದ್ದರು.