ಸರಳವಾಗಿ ಮಹಾಯೋಗಿ ವೇಮನ ಜಯಂತಿ ಆಚರಣೆಗೆ ನಿರ್ಧಾರ

ಕಲಬುರಗಿ.ಜ.13:ಕೋವಿಡ್-19 ಹಿನ್ನೆಲೆಯಲ್ಲಿ ಇದೇ ಜನವರಿ 19 ರಂದು ಮಹಾಯೋಗಿ ವೇಮನ ಅವರ ಜಯಂತಿಯನ್ನು ಸರಳವಾಗಿ ಆಚರಿಸಲು ಅಪರ ಜಿಲ್ಲಾಧಿಕಾರಿ ಡಾ.ಶಂಕರ ವಣಿಕ್ಯಾಳ ಅವರ ಅಧ್ಯಕ್ಷತೆಯಲ್ಲಿ ಜರುಗಿದ ಪೂರ್ವಭಾವಿ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಯಿತು.
ಇತ್ತೀಚಿಗೆ ಜಿಲ್ಲಾಧಿಕಾರಿ ಸಭಾಂಗಣದಲ್ಲಿ ಜರುಗಿದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿ, ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆಯಿಂದ ಮಹಾಯೋಗಿ ವೇಮನ ಜಯಂತಿಯನ್ನು ಇದೇ ಜನವರಿ 19 ರಂದು ಬೆಳಿಗ್ಗೆ 9.30 ಗಂಟೆಗೆ ಕಲಬುರಗಿ ಜಿಲ್ಲಾಧಿಕಾರಿ ಸಭಾಂಗಣದಲ್ಲಿ ವೇಮನ ಅವರ ಭಾವಚಿತ್ರಕ್ಕೆ ಪುμÁ್ಪರ್ಚನೆ ಮಾಡುವ ಸರಳವಾಗಿ ಆಚರಿಸಲಾಗುತ್ತದೆ ಎಂದರು.
ಈ ಜಯಂತಿ ಸಂದರ್ಭದಲ್ಲಿ ಮೆರವಣಿಗೆಗೆ ಅವಕಾಶ ಇರುವುದಿಲ್ಲ. ಸಮಾಜದ ಮುಖಂಡರ ಸಮ್ಮುಖದಲ್ಲಿ ಕೋವಿಡ್-19 ಸುರಕ್ಷತಾ ಕ್ರಮದೊಂದಿಗೆ ಸರಳವಾಗಿ ಆಚರಿಸಬೇಕು. ಎಲ್ಲರೂ ಕಡ್ಡಾಯವಾಗಿ ಮಾಸ್ಕ ಧರಿಸಬೇಕು ಹಾಗೂ ಸ್ಯಾನಿಟೈಜರ್ ಉಪಯೋಗಿಸಬೇಕು.
ಸಭೆಯಲ್ಲಿ ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕ ದತ್ತಪ್ಪ ಸಾಗನೂರ, ಸಮಾಜದ ಮುಖಂಡರು ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.