ಸರಳವಾಗಿ ಶ್ರೀ ಅಗ್ನಿಬನ್ನಿರಾಯ ಜಯಂತಿ ಆಚರಣೆ

ಕಲಬುರಗಿ:ಮಾ.28:ಲೋಕಸಭಾ ಚುನಾವಣೆ ನೀತಿ ಸಂಹಿತೆ ಜಾರಿಯಲ್ಲಿರುವ ಹಿನ್ನೆಲೆಯಲ್ಲಿ ಜಿಲ್ಲಾಡಳಿತದಿಂದ ಶ್ರೀ ಅಗ್ನಿಬನ್ನಿರಾಯ ಜಯಂತಿಯನ್ನು ಗುರುವಾರ ಕಲಬುರಗಿ ನಗರದ ಡಾ. ಎಸ್.ಎಂ. ಪಂಡಿತ ರಂಗಮಂದಿರದಲ್ಲಿ ಸರಳವಾಗಿ ಆಚರಿಸಲಾಯಿತು.
ಕಲಬುರಗಿ ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಹಾಗೂ ಮಹಾನಗರ ಪಾಲಿಕೆ ಕಲಬುರಗಿ ಇವುಗಳ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡಿದ್ದ ಜಯಂತ್ಯೋತ್ಸವ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಕಚೇರಿಯ ಶಿಷ್ಠಾಚಾರ ತಹಶೀಲ್ದಾರ ಸೈಯದ್ ನಿಸಾರ್ ಅಹ್ಮದ್ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕ ದತ್ತಪ್ಪ ಸಾಗನೂರ ಅವರು ಶ್ರೀ ಅಗ್ನಿಬನ್ನಿರಾಯರವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಗೌರವ ನಮನ ಸಲ್ಲಿಸಿದರು.