ಸರಳವಾಗಿ ಶ್ರೀ ಶಂಕರಾಚಾರ್ಯರ ಜಯಂತ್ಯೋತ್ಸವ ಆಚರಣೆ

ಕಲಬುರಗಿ,ಏ.25:ವಿಧಾನಸಭಾ ಸಾರ್ವತ್ರಿಕ ಚುನಾವಣೆ-2023ರ ನೀತಿ ಸಂಹಿತೆ ಜಾರಿಯಲ್ಲಿರುವ ಹಿನ್ನೆಲೆಯಲ್ಲಿ ಕಲಬುರಗಿ ಜಿಲ್ಲಾಡಳಿತದಿಂದ ಶ್ರೀ ಶಂಕರಾಚಾರ್ಯರ ಜಯಂತಿಯನ್ನು ಮಂಗಳವಾರ ಕಲಬುರಗಿ ನಗರದ ಡಾ. ಎಸ್.ಎಂ. ಪಂಡಿತ ರಂಗಮಂದಿರದಲ್ಲಿ ಸರಳವಾಗಿ ಆಚರಿಸಲಾಯಿತು.
ಕಲಬುರಗಿ ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಹಾಗೂ ಮಹಾನಗರ ಪಾಲಿಕೆ ಕಲಬುರಗಿ ಇವುಗಳ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡಿದ್ದ ಶಂಕರಾಚಾರ್ಯರ ಜಯಂತ್ಯೋತ್ಸವ ಕಾರ್ಯಕ್ರಮದಲ್ಲಿ ಕಲಬುರಗಿ ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಪ್ರಭಾರಿ ಸಹಾಯಕ ನಿರ್ದೇಶಕಿ ಜಗದೀಶ್ವರಿ ಶಿವಕೇರಿ ಸೇರಿದಂತೆ ಅತಿಥಿ ಗಣ್ಯರು ಶ್ರೀ ಶಂಕರಾಚಾರ್ಯರ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಗೌರವ ನಮನ ಸಲ್ಲಿಸಿದರು. ಕಾರ್ಯಕ್ರಮದಲ್ಲಿ ಮೋಹಿನಿ ಜಿಡಗೆಕಾರ್ ಅವರು ಉಪನ್ಯಾಸ ನೀಡಿದರು.
ಈ ಸಂದರ್ಭದಲ್ಲಿ ಶೈಂಗೇರಿ ಮಠದ ಧರ್ಮಾಧಿಕಾರಿ ಪ್ರಕಾಶ ಕುಲಕರ್ಣಿ, ಸಮಾಜದ ಮುಖಂಡರಾದ ದಯಾಘನ್ ಧಾರವಾಡಕರ್, ವಿದ್ಯಾಸಾಗರ ಪಾಟೀಲ್, ಮುರಳೀಧರ ಭಟ್ ಪೂಜಾರಿ, ಎಂ.ಬಿ. ಶಾಸ್ತ್ರೀ, ಡಾ. ಜಿಡಗೇಕರ್, ಗುರುರಾಜ ಕುಲಕರ್ಣಿ, ಪ್ರಲ್ಹಾದ ಪೂಜಾರಿ ಸೇರಿದಂತೆ ಮತ್ತಿತರ ಉಪಸ್ಥಿತರಿದ್ದರು.