ಸರಳವಾಗಿ ಶ್ರೀ ಶಿವಯೋಗಿ ಸಿದ್ದರಾಮೇಶ್ವರ ಜಯಂತಿ ಆಚರಣೆ

ರಾಯಚೂರು,ಜ.೧೨- ಶ್ರೀ ಶಿವಯೋಗಿ ಸಿದ್ಧರಾಮೇಶ್ವರ ರವರ ೮೪೯ ಜಯಂತಿ ಆಚರಣೆ ಕಾರ್ಯಮವನ್ನು ನಗರದ ಶ್ರೀ ಶಿವಯೋಗಿ ಸಿದ್ಧರಾಮೇಶ್ವರ ವೃತದಲ್ಲಿ ವಿವಿಧ ಗಣ್ಯರು ಶ್ರೀ ಶಿವಯೋಗಿ ಸಿದ್ದರಾಮೇಶ್ವರ ಅವರ ಮೂರ್ತಿಗೆ ಮಾಲಾರ್ಪಣೆ ಮಾಡುವುದರ ಮೂಲಕ ಸರಳವಾಗಿ ಆಚರಿಸಲಾಯಿತು.
ಈ ಸಂದರ್ಭದಲ್ಲಿ ಗ್ರಾಮೀಣ ಕ್ಷೇತ್ರದ ಶಾಸಕ, ಬಶೀರುದ್ದೀನ್, ಎ.ವಸಂತಕುಮಾರ, ನಗರಸಭೆ ಅಧ್ಯಕ್ಷ ಈ.ವಿನಯಕುಮಾರ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ವೈ.ಗೋಪಾಲ ರೆಡ್ಡಿ, ಎಂ.ಪವನಕುಮಾರ್, ನಗರಸಭೆ ಸದಸ್ಯ ಮಹೇಂದ್ರ, ತಹಸೀಲ್ದಾರ ಡಾ.ಹಂಪಣ್ಣ, ಕನ್ನಡ ಮತ್ತು ಸಂಸ್ಕೃತ ಇಲಾಖೆಯ ಸಹಾಯಕ ನಿದೇಶಕಿ, ರಾಜ್ಯ ಭೋವಿ ವಡ್ಡರ ಸಂಘದ ಜಿಲ್ಲಾಧ್ಯಕ್ಷ ಲಕ್ಷ್ಮಣ, ಉಪಾಧ್ಯಕ್ಷ ಆಂಜನೇಯ ಗಾಣಧಾಳ, ಪ್ರಧಾನ ಕಾರ್ಯದರ್ಶಿ ಯಲ್ಲಪ್ಪ, ಖಜಾಂಚಿ ವಿರೇಶ ಸಿ.ಕೆ., ಶಶಿಕಲಾ ಭಿಮರಾಯ ಸೇರಿದಂತೆ ಹಲವರು ಉಪಸ್ಥಿತರಿದ್ದರು.