ಸರಳವಾಗಿ ಶ್ರೀ ಶಿವಯೋಗಿ ಸಿದ್ದರಾಮೇಶ್ವರ ಜಯಂತಿ ಆಚರಣೆಗೆ ನಿರ್ಧಾರ

ಕಲಬುರಗಿ.ಜ.11:ಕೋವಿಡ್-19 ಹಿನ್ನೆಲೆಯಲ್ಲಿ ಇದೇ ಜನವರಿ 14 ರಂದು ಶ್ರೀ ಶಿವಯೋಗಿ ಸಿದ್ದರಾಮೇಶ್ವರ ಅವರ ಜಯಂತಿಯನ್ನು ಸರಳವಾಗಿ ಆಚರಿಸಲು ಅಪರ ಜಿಲ್ಲಾಧಿಕಾರಿ ಡಾ.ಶಂಕರ ವಣಿಕ್ಯಾಳ ಅವರ ಅಧ್ಯಕ್ಷತೆಯಲ್ಲಿ ಜರುಗಿದ ಪೂರ್ವಭಾವಿ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಯಿತು.
ಸೋಮವಾರ ಜಿಲ್ಲಾಧಿಕಾರಿ ಸಭಾಂಗಣದಲ್ಲಿ ಜರುಗಿದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿ, ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆಯಿಂದ ಶಿವಯೋಗಿ ಸಿದ್ದರಾಮೇಶ್ವರರ ಜಯಂತಿಯನ್ನು ಇದೇ ಜನವರಿ 14 ರಂದು ಬೆಳೆಗ್ಗೆ 9.30 ಗಂಟೆಗೆ ಜಿಲ್ಲಾಧಿಕಾರಿ ಸಭಾಂಗಣದಲ್ಲಿ ಸಿದ್ದರಾಮೇಶ್ವರವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಸರಳವಾಗಿ ಆಚರಿಸಲಾಗುತ್ತದೆ ಎಂದರು.
ಈ ಜಯಂತಿ ಸಂದರ್ಭದಲ್ಲಿ ಮೆರವಣಿಗೆಗೆ ಅವಕಾಶ ಇರುವುದಿಲ್ಲ. ಸಮಾಜದ ಮುಖಂಡರ ಸಮ್ಮುಖದಲ್ಲಿ ಕೋವಿಡ್-19 ಸುರಕ್ಷತಾ ಕ್ರಮದೊಂದಿಗೆ ಸರಳವಾಗಿ ಆಚರಿಸಬೇಕು. ಎಲ್ಲರೂ ಕಡ್ಡಾಯವಾಗಿ ಮಾಸ್ಕ ಧರಿಸಬೇಕು ಹಾಗೂ ಸ್ಯಾನಿಟೈಜರ್ ಉಪಯೋಗಿಸಬೇಕು.
ಸಭೆಯಲ್ಲಿ ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕ ದತ್ತಪ್ಪ ಸಾಗನೂರ, ಸಮಾಜದ ಮುಖಂಡರು ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.