ಸರಳವಾಗಿ ಸಿದ್ಧಾರಾಮೆಶ್ವರ ಜಯಂತಿ ಆಚರಣೆ

ರಾಯಚೂರು.ಜ.೧೫, ಕೋವಿಡ್-೧೯ರ ಹಿನ್ನೆಲೆಯಲ್ಲಿ ಸಿದ್ಧರಾಮೇಶ್ವರ ಜಯಂತಿಯನ್ನು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ನಗರಸಭೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ವತಿಯಿಂದ ನಗರದ ಆಶಾಪುರು ರಸ್ತೆಯಲ್ಲಿರುವ ಸಿದ್ಧರಾಮೇಶ್ವರ ಪುತ್ಥಳಿಗೆ ಜಿಲ್ಲಾಧಿಕಾರಿ ಡಾ.ಅವಿನಾಶ್ ರಾಜೇಂದ್ರ ಮೆನನ್ ಅವರು ಪುಷ್ಪಾರ್ಚನೆ ಮಾಡುವ ಮೂಲಕ ಸರಳವಾಗಿ ಜಯಂತಿಯನ್ನು ಆಚರಣೆ ಮಾಡಲಾಯಿತು.
ಈ ಸಂದರ್ಭದಲ್ಲಿ ರಾಯಚೂರು ತಾಲೂಕು ತಹಶೀಲ್ದಾರ್ ಡಾ. ಹಂಪಣ್ಣ ಸಜ್ಜನ್, ನಗರಸಭೆಯ ಪೌರಾಯುಕ್ತ ಕೆ.ಮುನಿಸ್ವಾಮಿ. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಮಂಗಳಾ ವಿ. ನಾಯಕ, ಭೋವಿ ಸಮಾಜದ ಜಿಲ್ಲಾಧ್ಯಕ್ಷರಾದ ಲಕ್ಷ್ಮಣ್,
ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ಶಿಕ್ಷಣ ವಿಭಾಗದ ಜಿಲ್ಲಾ ಸಂಚಾಲಕ ಡಾ. ದಂಡಪ್ಪ ಬಿರಾದಾರ್ ಸೇರಿದಂತೆ ಇತರರು ಇದ್ದರು.