ಸರ್ಕಾರಗಳ ಯೋಜನೆಗಳ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಿ : ಉಮೇಶ್ ಸಜ್ಜನ್

ಕಂಪ್ಲಿ ಮಾ 21 : ಪಟ್ಟಣದ ಎಪಿಎಂಸಿ ಆವರಣದಲ್ಲಿ ಶನಿವಾರದಂದು ಬಿಜೆಪಿ ಕಂಪ್ಲಿ ಮಂಡಲ ವತಿಯಿಂದ ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾ ಮಂಡಲ ಕಾರ್ಯಾಕಾರಿಣಿ ಸಭೆ ಹಮ್ಮಿಕೊಳ್ಳಲಾಗಿತ್ತು.
ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾ ರಾಜ್ಯ ಕಾರ್ಯದರ್ಶಿ ಉಮೇಶ್ ಸಜ್ಜನ್ ಮಾತನಾಡಿ, ಹಿಂದುಳಿದ ವರ್ಗಗಳ ಕಲ್ಯಾಣಕ್ಕಾಗಿ ಕೇಂದ್ರ ಹಾಗು ರಾಜ್ಯ ಸರ್ಕಾರಗಳೆರಡು ಅನೇಕ ಯೋಜನೆಗಳನ್ನು ಅನುಷ್ಠಾನಕ್ಕೆ ತಂದಿವೆ. ಪೂರ್ಣ ಪ್ರಮಾಣದಲ್ಲಿ ಅಂತಹ ಯೋಜನೆಗಳ ಪ್ರಯೋಜನ ಪಡೆದುಕೊಳ್ಳುವ ನಿಟ್ಟಿನಲ್ಲಿ ಪಕ್ಷದ ಕಾರ್ಯಕರ್ತರು ಸಾರ್ವಜನಿಕರಲ್ಲಿ ಅರಿವು ಮೂಡಿಸಬೇಕು ಎಂದರು.
ಓಬಿಸಿ ಜಿಲ್ಲಾ ಮೋರ್ಚಾ ಅಧ್ಯಕ್ಷ ಅಯ್ಯಾಳಿ ತಿಮ್ಮಪ್ಪ ಮಾತನಾಡಿ, ಸರ್ಕಾರದ ಸಾಧನೆಗಳ ಮೂಲಕ ಪಕ್ಷವನ್ನು ಸದೃಢವಾಗಿ ಕಟ್ಟುವಲ್ಲಿ ಕಾರ್ಯಕರ್ತರು, ಪದಾಧಿಕಾರಿಗಳು ಶ್ರಮಿಸಬೇಕೆಂದರು.
ಬಳಿಕ ಬಿಜೆಪಿ ಕಂಪ್ಲಿ ಮಂಡಲ ಅಧ್ಯಕ್ಷ ಅಳ್ಳಳ್ಳಿ ವೀರೇಶ ಮಾತನಾಡಿ ಪಕ್ಷದ ವಿವಿಧ ಮೋರ್ಚಾಗಳು ಸರ್ಕಾರದ ಎಲ್ಲಾ ಯೋಜನೆಗಳನ್ನು ಸಾರ್ವಜನಿಕರಿಗೆ ತಲುಪಿಸುವಲ್ಲಿ ಹಾಗೂ ಪಕ್ಷವನ್ನು ಸಂಘಟಿಸುವಲ್ಲಿ ಅವಿರತ ಶ್ರಮಿಸಬೇಕು ಎಂದು ಕರೆ ನೀಡಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಓಬಿಸಿ ಮೋರ್ಚಾ ಉಪಾಧ್ಯಕ್ಷ ಪಿ.ಬ್ರಹ್ಮಯ್ಯ, ಮಂಡಲ ಪ್ರಧಾನ ಕಾರ್ಯದರ್ಶಿ ಜಿ.ಸುಧಾಕರ್, ನಗರ ಘಟಕದ ಅಧ್ಯಕ್ಷ ಕೋಡಿದಲ್ ರಾಜು, ಮಂಡಲ ಓಬಿಸಿ ಅಧ್ಯಕ್ಷ ಕೆ.ಭಾಸ್ಕರ್‍ರೆಡ್ಡಿ, ನರಸಪ್ಪ ಯಾದವ್, ಫಕ್ಕೀರಪ್ಪ, ಮುಖಂಡರಾದ ಟಿ.ವಿ.ಸುದರ್ಶನರೆಡ್ಡಿ, ಕಡೆಮನೆ ಪಂಪಾಪತಿ, ಬಿ.ಸಿದ್ದಪ್ಪ, ಜಿ.ಲಿಂಗನಗೌಡ, ಶ್ರೀಧರಶೆಟ್ಟಿ, ಮರಿಯಪ್ಪನಾಯಕ, ವಿರುಪಣ್ಣ, ಕೆ.ಹೊನ್ನೂರ್‍ಸಾಬ್, ಕೆ.ವಸಂತಕುಮಾರ್ ಸೇರಿದಂತೆ ವಿವಿಧ ಮೋರ್ಚಾಗಳ ಪದಾಧಿಕಾರಿಗಳು, ಮುಖಂಡರು, ಪಕ್ಷದ ಕಾರ್ಯಕರ್ತರು ಭಾಗವಹಿಸಿದ್ದರು.