ಸರ್ಕಾರದ ನೂತನ ಮುಖ್ಯಕಾರ್ಯದರ್ಶಿಯಾಗಿ ಪಿ.ರವಿಕುಮಾರ್ ನೇಮಕ

ಬೆಂಗಳೂರು, ಡಿ.30- ರಾಜ್ಯದ ನೂತನ ಮುಖ್ಯ ಕಾರ್ಯದರ್ಶಿಯಾಗಿ ಹಿರಿಯ ಐಎಎಸ್​ ಅಧಿಕಾರಿ ಪಿ.ರವಿಕುಮಾರ್ ಅವರನ್ನು ನೇಮಕ ಮಾಡಲಾಗಿದೆ.

ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ.ಎಂ. ವಿಜಯಭಾಸ್ಕರ್ ಅವರು ನಾಳೆ (ಡಿ.31) ನಿವೃತ್ತಿ ಹೊಂದಲಿದ್ದು, ಅವರಿಂದ ತೆರವಾಗಲಿರುವ ಸ್ಥಾನಕ್ಕೆ ರವಿಕುಮಾರ್ ಅವರನ್ನು ನೂತನ ಸಿಎಸ್ ಆಗಿ ಸರ್ಕಾರ ನೇಮಕ ಮಾಡಿದೆ ಎಂದು ಪ್ರಕಟಣೆ ತಿಳಿಸಿದೆ. ‌