ಸರ್ಕಾರದ ಮುಖ್ಯ ಕಾರ್ಯದರ್ಶಿಗಳ ಪ್ರವಾಸ

ಕಲಬುರಗಿ.ಮಾ.29:ಸರ್ಕಾರದ ಮುಖ್ಯ ಕಾರ್ಯದರ್ಶಿಗಳಾದ ಪಿ. ರವಿ ಕುಮಾರ್ ಅವರು ಬೆಂಗಳೂರಿನಿಂದ ವಿಮಾನದ ಮೂಲಕ ಮಂಗಳವಾರ ಮಾರ್ಚ್ 30 ರಂದು ಬೆಳಿಗ್ಗೆ 9.20 ಗಂಟೆಗೆ ಕಲಬುರಗಿಗೆ ಆಗಮಿಸುವರು.

ಅಂದು ಬೆಳಿಗ್ಗೆ 11 ರಿಂದ ಮಧ್ಯಾಹ್ನ 12.30 ಗಂಟೆಯವರೆಗೆ ಕೋವಿಡ್-19 ಹಾಗೂ ಕಂದಾಯ ಇಲಾಖೆಗೆ ಸಂಬಂಧಿಸಿದಂತೆ ಇತರೆ ವಿಷಯಗಳ ಕುರಿತು ಪರಿಶೀಲನೆ ನಡೆಸುವರು. ಅಂದು ಮಧ್ಯಾಹ್ನ 3 ಗಂಟೆಗೆ ಕೆ.ಕೆ.ಆರ್.ಡಿ.ಬಿ. ಹಾಗೂ ಇತರೆ ವಿಷಯಗಳ ಕುರಿತು ಪರಿಶೀಲನೆ ನಡೆಸುವರು. ನಂತರ ಕಲಬುರಗಿಯಲ್ಲಿ ವಾಸ್ತವ್ಯ ಮಾಡುವರು. ಬುಧವಾರ ಮಾರ್ಚ್ 31 ರಂದು ಕಲಬುರಗಿಯಿಂದ ಯಾದಗಿರಿಗೆ ಪ್ರಯಾಣ ಬೆಳೆಸಲಿದ್ದಾರೆ.