ಸರ್ಕಾರದ ಯೋಜನೆಗಳನ್ನು ಪ್ರತಿ ಮನೆ ಮನೆಗೆ ತಲುಪಿಸಿ

ಲಕ್ಷ್ಮೇಶ್ವರ,ಜು.21: ಪಟ್ಟಣದ ಬಾಳಿಹಳ್ಳಿಮಠ ಅವರ ಕಲ್ಯಾಣ ಮಂಟಪದಲ್ಲಿ ಬುಧವಾರ ಗದಗ ಜಿಲ್ಲಾ ಬಿಜೆಪಿ ಯುವ ಮೋರ್ಚಾದ ವಿಶೇಷ ಕಾರ್ಯಕಾರಿಣಿ ಜರುಗಿತು.
ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಪ್ರದೇಶ ಬಿಜೆಪಿ ಯುವ ಮೋರ್ಚಾದ ರಾಜ್ಯಾಧ್ಯಕ್ಷ ಡಾ. ಸಂದೀಪ್ ಕುಮಾರ್ ಅವರು ಕೇಂದ್ರ ಮತ್ತು ರಾಜ್ಯದಲ್ಲಿ ನರೇಂದ್ರ ಮೋದಿ ಮತ್ತು ಬೊಮ್ಮಾಯಿ ಅವರ ನೇತೃತ್ವದಲ್ಲಿ ಸರ್ಕಾರಗಳು ಅನೇಕ ಜನಪರ ಯೋಜನೆಗಳನ್ನು ಜಾರಿಗೆ ತಂದಿದೆ.
ಕೋವಿಡ್ಡನಂತಹ ಕಠಿಣ ಸಂದರ್ಭದಲ್ಲೂ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ದೇಶದ ಬಡ ಜನರಿಗಾಗಿ ಗರೀಬ್ ಕಲ್ಯಾಣ ಯೋಜನೆ ಮುಖಾಂತರ ಆಹಾರಧಾನ್ಯ ನೀಡುವ ಮೂಲಕ ವಿಶೇಷತೆಯನ್ನು ಜೊತೆಗೆ ಜಗತ್ತಿನಲ್ಲಿಯೇ ಮೊಟ್ಟ ಮೊದಲ ಬಾರಿಗೆ ಕೋವಿಡ್ ಲಸಿಕೆಯನ್ನು ದೇಶದ ಜನರಿಗೆ ನೀಡುವ ಮೂಲಕ ಜನರ ಪ್ರಾಣ ಉಳಿಸಿದ್ದಾರೆ.
ಕಾರ್ಯಕರ್ತರು ಎರಡು ಸರ್ಕಾರಗಳ ಯೋಜನೆಗಳನ್ನು ಪ್ರತಿ ಮನೆಮನೆಗೆ ತಲುಪಿಸಿ ಬೂತ್ ಮಟ್ಟದಲ್ಲಿ ವಿಶೇಷ ಸಭೆಗಳನ್ನು ನಡೆಸಿ ಸರ್ಕಾರದ ಕಾರ್ಯಕ್ರಮಗಳ ಅರಿವು ಮೂಡಿಸಬೇಕು ಮುಂಬರುವ ಚುನಾವಣೆಯಲ್ಲಿ ಕಾರ್ಯಕರ್ತರು ಪಕ್ಷ 150 ಸ್ಥಾನಗಳ ಗೆಲ್ಲಲು ಶ್ರಮಿಸಬೇಕು ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಶಾಸಕ ರಾಮಣ್ಣ ಲಮಾಣಿ, ಮಾಜಿ ಶಾಸಕ ಗಂಗಣ್ಣ ಮಹಾಂತ ಶೆಟ್ಟರ ಅವರು ಮಾತನಾಡಿ ಪಕ್ಷದ ಕಾರ್ಯಕರ್ತರು ಮುಂಬರುವ ಚುನಾವಣೆಯಲ್ಲಿ ಎಲ್ಲಾ ಹಂತದಲ್ಲೂ ಗೆಲುವು ಸಾಧಿಸುವಂತೆ ಶ್ರಮಿಸಬೇಕು. ಪಕ್ಷದ ಹಿರಿಯ ನಾಯಕರ ಮಾರ್ಗದರ್ಶನ ಪಡೆದುಕೊಂಡು ಕಾರ್ಯಕರ್ತರನ್ನು ಒಗ್ಗೂಡಿಸಿಕೊಂಡು ಯುವ ಕಾರ್ಯಕರ್ತರು ಹಳ್ಳಿ ಹಳ್ಳಿಗಳಲ್ಲಿ ಸರ್ಕಾರದ ಸಾಧನೆಗಳನ್ನು ಬಿಂಬಿಸಬೇಕು ಎಂದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಗದಗ ಜಿಲ್ಲಾ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಶಿವರಾಜಗೌಡ ಹಿರೇಮನಿ ಪಾಟೀಲ ವಹಿಸಿದ್ದರು.
ಕಾರ್ಯಕ್ರಮದಲ್ಲಿ ಗದಗ ಜಿಲ್ಲಾ ಬಿಜೆಪಿ ಅಧ್ಯಕ್ಷ ಮುತ್ತಣ್ಣ ಲಿಂಗನಗೌಡರ, ಪ್ರಧಾನ ಕಾರ್ಯದರ್ಶಿ ಸಿದ್ದರಾಮಪ್ಪ ಮೊರಬದ, ಪ್ರಧಾನ ಕಾರ್ಯದರ್ಶಿಗಳಾದ ಮಲ್ಲಿಕಾರ್ಜುನ ಬಾಳಿಕಾಯಿ, ಪ್ರಕಾಶ ಶೃಂಗೇರಿ, ಪವನ ಮೇಟಿ, ಸಿದ್ದೇಶ ಹೂಗಾರ, ಫಕೀರೇಶ ರಟ್ಟಿಹಳ್ಳಿ, ರಾಹುಲ ಅರಳಿ, ಲಕ್ಷ್ಮಣ ಲಮಾಣಿ, ನಾಗರಾಜ ಕುಲಕರ್ಣಿ, ಭೀಮ್ ಸಿಂಗ ರಾಥೋಡ, ಗಂಗಾಧರ ಮೆಣಸಿನಕಾಯಿ, ನವೀನ ಹಿರೇಮಠ, ಸುನಿಲ ಮಹಾಂತ ಶೆಟ್ಟರ, ವಿಜಯ ಹತ್ತಿ ಕಾಳ, ಮಹೇಶ ಲಮಾಣಿ, ಮಾರುತಿ ಸತ್ಯಮ್ಮನವರ ಸೇರಿದಂತೆ ಅನೇಕರಿದ್ದರು.