ಸರ್ಕಾರದ ಯೋಜನೆಗಳನ್ನು ಮುಂದಿಟ್ಟು ಮತಯಾಚನೆ:ಶ್ರೀಧರ್ ರೆಡ್ಡಿ

ಬೆಂಗಳೂರು,ಮೇ.೫-ಕೇಂದ್ರದಲ್ಲಿ ೯ ವರ್ಷಗಳ ಕಾಲ ಅಧಿಕಾರ ನಡೆಸುತ್ತಿರುವ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ರಾಜ್ಯದ ಜನತೆಗೆ ಹಾಗೂ ದೇಶದ ಜನರಿಗೆ ಹಲವಾರು ಯೋಜನೆಗಳನ್ನು ಜಾರಿಗೆ ತಂದಿದ್ದು, ಈ ಯೋಜನೆಗಳನ್ನು ಮುಂದಿಟ್ಟುಕೊಂಡು ಮತಯಾಚನೆ ಮಾಡಲಾಗುತ್ತಿದೆ ಎಂದು ಬಿಟಿಎಂ ಲೇಔಟ್ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೆ.ಆರ್ ಶ್ರೀಧರ್ ರೆಡ್ಡಿ ತಿಳಿಸಿದರು.
ಇಂದು ಕ್ಷೇತ್ರದ ವಿವಿಧ ಕಡೆ ಮನೆ ಮನೆಗೆ ತೆರಳಿ ಮತಯಾಚನೆ ಮಾಡಿ ಮಾತನಾಡಿದ ಅವರು, ೪ ವರ್ಷಗಳ ಕಾಲ ರಾಜ್ಯದಲ್ಲಿ ಅಧಿಕಾರ ನಡೆಸಿದ ಬಿಜೆಪಿ ಸರ್ಕಾರ ಹಲವು ಯೋಜನೆಗಳನ್ನು ಜಾರಿ ಮಾಡಿದ್ದು, ಇವು ಕೂಡ ನನಗೆ ಶ್ರೀರಕ್ಷೆಯಾಗಲಿದೆ ಎಂದು ಹೇಳಿದರು.
ರಾಜ್ಯದಲ್ಲಿ ಮತ್ತೊಮ್ಮೆ ಬಿಜೆಪಿ ಸರ್ಕಾರವನ್ನು ಅಧಿಕಾರಕ್ಕೆ ತರಬೇಕೆಂದು ಕ್ಷೇತ್ರದ ಮತದಾರರಲ್ಲಿ ಮನವಿ ಮಾಡಿದರು.
ಪ್ರಚಾರದ ವೇಳೆ ಬಿಜೆಪಿ ಪಕ್ಷದ ಹಲವಾರು ಮುಖಂಡರು ನೂರಾರು ಬಿಜೆಪಿ ಕಾರ್ಯಕರ್ತರು ಭಾಗವಹಿಸಿದ್ದರು.

ಬಿಟಿಎಂ ಲೇಔಟ್ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೆ.ಆರ್. ಶ್ರೀಧರ್‌ರೆಡ್ಡಿರವರು ಕ್ಷೇತ್ರದ ವಿವಿಧ ಕಡೆ ಪಾದಯಾತ್ರೆ ನಡೆಸಿ ಮತಯಾಚನೆ ಮಾಡಿದರು. ಪಕ್ಷದ ಹಲವಾರು ಮುಖಂಡರು, ಬಿಜೆಪಿಯ ನೂರಾರು ಕಾರ್ಯಕರ್ತರು ಭಾಗವಹಿಸಿದ್ದರು.