ಸರ್ಕಾರದ ಯೋಜನೆಗಳನ್ನು ಸದುಪಯೋಗಪಡಿಸಿಕೊಳ್ಳಿ-ಯಾದವಾಡ

ರಾಮದುರ್ಗ,ಸೆ16: ಶೈಕ್ಷಣಿಕ ಕ್ಷೇತ್ರದ ಸುಧಾರಣೆಗೆ ಸರ್ಕಾರ ಹಲವಾರು ಯೋಜನೆಗಳನ್ನು ಜಾರಿಗೆ ತಂದರೂ ಸಹಿತ ಖಾಸಗಿ ಶಿಕ್ಷಣ ಸಂಸ್ಥೆಗಳಂತೆ ಗುಣಮಟ್ಟದ ಶಿಕ್ಷಣ ನೀಡುವಲ್ಲಿ ಸರ್ಕಾರಿ ಶಾಲೆಗಳಲ್ಲಿ ದೊರೆಯದೆ ಇರುವುದು ವಿಷಾಧನೀಯ ಎಂದು ಶಾಸಕ ಮಹಾದೇವಪ್ಪ ಯಾದವಾಡ ಹೇಳಿದರು.
ಮಂಗಳವಾರ ಪಟ್ಟಣದ ನೇತಾಜಿ ಸುಭಾಸಚಂದ್ರಭೋಸ್ ಸರ್ಕಾರಿ ಪ್ರೌಢಶಾಲೆಯಲ್ಲಿ 2019-20ನೇ ಸಾಲಿನಲ್ಲಿ ಪ್ರವಾಹ ಪೀಡಿತ ಪ್ರದೇಶಗಳ ಸರ್ಕಾರಿ ಶಾಲೆಯ ವಿದ್ಯಾರ್ಥಿಗಳಿಗೆ ಶಿಕ್ಷಕ ಕಲ್ಯಾಣ ನಿಧಿಯಲ್ಲಿ ಉಚಿತ ಕಲಿಕೋಪಕರಣ ವಿತರಣೆ ಮಾಡಿ ಮಾತನಾಡಿದ ಅವರು, ನೆರೆ ಸಂತ್ರಸ್ತರ ಮಕ್ಕಳ ಶಿಕ್ಷಣಕ್ಕೆ ತೊಂದರೆಯಾಗಬಾರದು ಎಂದು ಸರ್ಕಾರ ಉಚಿತವಾಗಿ ನೀಡುತ್ತದೆ. ವಿದ್ಯಾರ್ಥಿಗಳು ಇದರು ಪ್ರಯೋಜನ ಪಡೆದು ಉತ್ತಮ ಶಿಕ್ಷಣ ಪಡೆಯಬೇಕೆಂದು ಹೇಳಿದರು.
ತಾಲೂಕಿನ ಕೆಲ ಶಾಲೆಗಳಲ್ಲಿ ಶಿಕ್ಷಕರು ಸರಿಯಾಗಿ ಕೆಲಸ ಮಾಡುತ್ತಿಲ್ಲ. ಕ್ಷೇತ್ರ ಶಿಕ್ಷಣಾಧಿಕಾರಿಗಳು ಸರಿಯಾಗಿ ಉಸ್ತುವಾರಿ ಮಾಡಿ ತಾಲೂಕಿನ ಶಿಕ್ಷಣ ಕ್ಷೇತ್ರದ ಸುಧಾರಣೆಗೆ ಪ್ರಾಮಾಣಿಕ ಪ್ರಯತ್ನ ಮಾಡಬೇಕು ಎಂದರು.
ಕ್ಷೇತ್ರ ಶಿಕ್ಷಾಧಿಕಾರಿ ಎಮ್ ಆರ್ ಅಲಾಸಿ ಪ್ರಾಸ್ತಾವಿಕವಾಗಿ ಮಾತನಾಡಿ ಶಿಕ್ಷಕರು ಸಮಯ ಪ್ರಜ್ಞೆಯಿಂದ ಕೆಲಸ ಮಾಡ ಸರ್ಕಾರದ ಯೋಜನೆಗಳನ್ನು ಮಕ್ಕಳಿಗೆ ಮುಟ್ಟಿಸುವ ಕೆಲಸ ಮಾಡಿದರೆ ಸರ್ಕಾರದ ಯೋಜನೆಗಳು ಸಮರ್ಪಕವಾಗಿ ಅನುಷ್ಠಾನಗೊಳ್ಳಲು ಸಾಧ್ಯವೆಂದು ಹೇಳಿದರು.
ದೈಹಿಕ ಶಿಕ್ಷಣಾಧಿಕಾರಿ ಪಿ. ಖ. ಕಾಲವಾಡ, ಮುಖೋಪಾದ್ಯಾಯರಾದ ಎಸ್. ಆರ್. ಕಂಟಿಕರ, ಎಮ್. ಪಿ. ರಡ್ಡೇರ, ಎಮ್. ಡಿ. ಮಂಕಾದಾರ, ವಾಯ್. ವಿ. ಮಳಲಿ ಹಾಗೂ ಶಿಕ್ಷಣ ಸಂಯೋಜಕ ಅನಂತಜೋಷಿ , ಶಿಕ್ಷಕ ಶೇಖ ನಿರೂಪಿಸಿದರು.