ಸರ್ಕಾರದ ಯೋಜನೆಗಳು ಪ್ರತಿಯೊಬ್ಬ ಅರ್ಹ ಫಲಾನುಭವಿಗಳಿಗೆ ತಲುಪಲಿ

ಸಂಜೆವಾಣಿ ವಾರ್ತೆ

ಹರಪನಹಳ್ಳಿ. ಆ.೩೧; ತಾಲ್ಲೂಕಿನ ಅರಸೀಕೆರೆ ಗ್ರಾಮದ ಶ್ರೀ ಕೋಲ ಶಾಂತೇಶ್ವರ  ಮಠದ ಆವರಣದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಗ್ರಾಮ ಪಂಚಾಯಿತಿ ಅರಸೀಕೆರೆ ಸಹಯೋಗದಲ್ಲಿ ಗೃಹಲಕ್ಷ್ಮಿ ಯೋಜನೆ ಉದ್ಘಾಟನೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.ಮುಖ್ಯ ಅತಿಥಿಗಳಾಗಿ ಗ್ರಾಮದ ಮುಖಂಡರಾದ ಎ.ಹೆಚ್. ಪಂಪಣ್ಣ ಮಾತನಾಡಿ- ಕಾಂಗ್ರೆಸ್ ಸರ್ಕಾರ ಬರುವುದಕ್ಕಿಂತ ಮುಂಚೆ 5 ಗ್ಯಾರಂಟಿಗಳನ್ನು ಅನುಷ್ಠಾನಗೊಳಿಸುತ್ತೇವೆಂದು ಭರವಸೆ ನೀಡಿದ್ದರು.  ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆದಿದೆ,5 ಗ್ಯಾರಂಟಿಗಳಲ್ಲಿ 4 ಗ್ಯಾರಂಟಿಗಳಾದ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ,10 ಕೆಜಿ ಅಕ್ಕಿ ಬದಲು 5 ಕೆಜಿ ಗೆ ಹಣ ಬಿಡುಗಡೆ ಮಾಡಿದ್ದಾರೆ,200 ಯುನಿಟ್ ವಿದ್ಯುತ್ ಉಚಿತ, ಕುಟುಂಬದ ಪ್ರತಿಯೊಬ್ಬ ಯಜಮಾನಿಗೆ 2000 ರೂಪಾಯಿ ಹಣ ಬಿಡುಗಡೆಗೆ ಚಾಲನೆ ನೀಡಿದ್ದಾರೆ. ಮುಂದಿನ ದಿನಗಳಲ್ಲಿ ಪದವೀಧರರಿಗೆ 3000 ರೂಪಾಯಿ ಹಣ ಬಿಡುಗಡೆ ಮಾಡುವುದೊಂದೇ ಬಾಕಿಯಿದೆ, ಅದೂ ಕೂಡ ಮುಂದಿನ ದಿನಗಳಲ್ಲಿ ನೀಡಲಿದ್ದಾರೆ.ಮಹಿಳೆಯರ ಸಬಲೀಕರಣಕ್ಕೆ ಕಾಂಗ್ರೆಸ್ ಸರ್ಕಾರ ನುಡಿದಂತೆ 5 ಗ್ಯಾರಂಟಿಗಳನ್ನು ನೀಡಿದ್ದಾರೆ, ಆದ್ದರಿಂದ ಪ್ರತಿಯೊಬ್ಬ ಅರ್ಹ ಫಲಾನುಭವಿಗಳು ಇದರ ಪ್ರಯೋಜನವನ್ನು ಪಡೆದು ಕೊಳ್ಳಬೇಕೆಂದು ಹೇಳಿದರು.ಈ ಸಂದರ್ಭದಲ್ಲಿ ವೀಡಿಯೋ ಕಾನ್ಫರೆನ್ಸ್ ಮೂಲಕ ಎಲ್ಲಾ ಅರ್ಹ ಫಲಾನುಭವಿಗಳು ವೀಕ್ಷಣೆ ಮಾಡಿದರು.ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಎ. ಇನಾಯತ್ ಉಲ್ಲಾ ಉದ್ಘಾಟಿಸಿದರು.ಸರ್ಕಾರದ ಯೋಜನೆಗಳ ಬಗ್ಗೆ ಗ್ರಾಮದ ಮುಖಂಡರಾದ ಶೆಡ್ಡೇರ್ ಆನಂದಪ್ಪ, ಹೆಚ್.ನಾಗರಾಜಪ್ಪ,ಐ. ಸಲಾಂ ಸಾಹೇಬ್, ಹಾಗೂ ಅದಾಮ್ ಸಾಹೇಬ್ ಮತ್ತಿತರರಿದ್ದರು.