ಸರ್ಕಾರದ ವಿರುದ್ಧ ಘೋಷಣೆ ಕೂಗಿ ಕಟ್ಟಡಕಾರ್ಮಿಕರ  ಪ್ರತಿಭಟನೆ.


ಸಂಜೆವಾಣಿ ವಾರ್ತೆ
ಕೂಡ್ಲಿಗಿ.ಸೆ. 22 :- ಮನೆ ಯೋಜನೆಯ ಹೆಸರಿನಲ್ಲಿ ಕಟ್ಟಡ ಕಾರ್ಮಿಕರ ಕಲ್ಯಾಣ ಮಂಡಳಿ ನಿಧಿ ಬಳಕೆ ಹೊಂಚು ಹಾಕುವ ಬಿಜೆಪಿ ಸರ್ಕಾರದ ವಿರುದ್ಧ ಹಾಗೂ ಇತರೆ ಬೇಡಿಕೆ ಈಡೇರಿಸಲು ಕಟ್ಟಡ ಕಾರ್ಮಿಕರ ಸಂಘಟನೆಯಾದ ಸಿಡಬ್ಲ್ಯೂಎಫ್ ಐ ಹಾಗೂ ಸಿಐಟಿಯು ನೇತೃತ್ವದಲ್ಲಿ  ರಾಜ್ಯಾಧ್ಯಂತ ಪ್ರತಿಭಟನೆ ನಡೆಯಲಿದ್ದು ಇಂದು ಕೂಡ್ಲಿಗಿಯಲ್ಲೂ ಪ್ರತಿಭಟನೆ  ಸಿಐಟಿಯು ಮುಖಂಡ ಗುನ್ನಳ್ಳಿ ರಾಘವೇಂದ್ರ ನೇತೃತ್ವದಲ್ಲಿ ಜರುಗಿ ಕಾರ್ಮಿಕ ಅಧಿಕಾರಿಗೆ ಮನವಿ ಸಲ್ಲಿಸಲಾಯಿತು.
ಒಂದು ಲಕ್ಷ ಮನೆಯೋಜನೆಗೆ ಕಟ್ಟಡ ಕಾರ್ಮಿಕರ ಕಲ್ಯಾಣ ಮಂಡಳಿ ನಿಧಿ ಬಳಸಲು ಹೊಂಚು ಹಾಕಿರುವ ಬಿಜೆಪಿ ಸರ್ಕಾರದ ಸಚಿವರು ಹಾಗೂ ಶಾಸಕರ ವಿರುದ್ಧ, ನಕಲಿ ಹಾಗೂ ವಸತಿ ಯೋಜನೆಯ ಫಲಾನುಭವಿಗಳನ್ನು ಕಲ್ಯಾಣ ಮಂಡಳಿಗೆ ನೊಂದಣಿ ಮಾಡುವ ಕಾರ್ಮಿಕ ಅಧಿಕಾರಿಗಳ ವಿರುದ್ಧ ಮತ್ತು ಹತ್ತಾರು ವರ್ಷಗಳಿಂದ ನೊಂದಣಿಯಾಗಿರುವ ನೈಜ ಕಟ್ಟಡ ಕಾರ್ಮಿಕರಿಗೆ ಮಾತ್ರವೇ ವಸತಿ ನಿರ್ಮಾಣಕ್ಕೆ ಬಡ್ಡಿರಹಿತ ಸಾಲ ನೀಡಲು ಆಗ್ರಹಿಸಿ ಸೆಪ್ಟೆಂಬರ್ 22ರಂದು ರಾಜ್ಯಾದ್ಯಾಂತ ಎಲ್ಲಾ ಜಿಲ್ಲಾ ಹಾಗೂ ತಾಲೂಕು ಕೇಂದ್ರಗಳ ಕಾರ್ಮಿಕ ಅಧಿಕಾರಿ ಹಾಗೂ ನಿರೀಕ್ಷಕರ ಕಚೇರಿ ಎದುರು ನೈಜ ಕಟ್ಟಡ ಕಾರ್ಮಿಕರಿಂದ ಪ್ರತಿಭಟನೆ ನಡೆಸುವಂತೆ ರಾಜ್ಯ ಕರೆಯ ಮೇರೆಗೆ  ಸುಮಾರು ಐವತ್ತಕ್ಕೂ ಹೆಚ್ಚು ಪುರುಷ ಹಾಗೂ ಮಹಿಳಾ ಕಟ್ಟಡ ಕಾರ್ಮಿಕರು  ಕೂಡ್ಲಿಗಿ ಪಟ್ಟಣದಲ್ಲಿ ಶ್ರೀ ಕೊತ್ತಾಲಾಂಜನೇಯ ಸ್ವಾಮಿ ದೇವಸ್ಥಾನದ ಹತ್ತಿರ ಇಂದು  ಬೆಳಿಗ್ಗೆ ಕಟ್ಟಡ ಕಾರ್ಮಿಕರು ಸೇರಿ ಪಟ್ಟಣದ ಪ್ರಮುಖ ರಸ್ತೆಯಲ್ಲಿ ಸಾಗಿ  ಸರ್ಕಾರದ ವಿರುದ್ಧ ಘೋಷಣೆ ಕೂಗುವ ಮೂಲಕ ಪ್ರತಿಭಟನೆ ನಡೆಸಿ  ಸಿಐಟಿಯು ಕಾರ್ಮಿಕ  ಮುಖಂಡ ಗುನ್ನಳ್ಳಿ ರಾಘವೇಂದ್ರ ಹಾಗೂ ಕಟ್ಟಡ ಕಾರ್ಮಿಕ ಮುಖಂಡರು ಸೇರಿ ಕಾರ್ಮಿಕ ಅಧಿಕಾರಿಗೆ ಮನವಿ ಸಲ್ಲಿಸಿದರು.

Attachments area