ಸರ್ಕಾರದ ಸೌಲಭ್ಯ ಉಪಯೋಗಿಸಿಕೊಂಡು ಸಾಮಾಜಿಕ ಉನ್ನತಿಗೆ ಶ್ರಮಿಸಿ-ಜಿಲ್ಲಾಧಿಕಾರಿ

ಗದಗ,ಜ2: ಸರಕಾರದ ಸೌಲಭ್ಯಗಳನ್ನು ಸದುಪಯೋಗಪಡಿಸಿಕೊಂಡು ವೈಯಕ್ತಿಕ ಉನ್ನತಿ ಸಾಧಿಸುವುದರ ಜೊತೆಗೆ ಸಾಮಾಜಿಕ ಉನ್ನತಿಗೆ ಶ್ರಮಿಸಬೇಕೆಂದು ಗದಗ ಜಿಲ್ಲಾಧಿಕಾರಿ ಎಂ.ಸುಂದರೇಶ್ ಬಾಬು ವಿದ್ಯಾರ್ಥಿಗಳಿಗೆ ಕರೆ ನೀಡಿದರು.
ನಗರದ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ 2020 ನೇ ಸಾಲಿನಲ್ಲಿ ಜರುಗಿದ ದ್ವಿತೀಯ ಪಿ.ಯು.ಸಿ. ವಾರ್ಷಿಕ ಪರೀಕ್ಷೆಯಲ್ಲಿ ಕಲಾ , ವಾಣಿಜ್ಯ ಮತ್ತು ವಿಜ್ಞಾನ ವಿಷಯಗಳಲ್ಲಿ ಗರಿಷ್ಟ ಅಂಕ ಗಳಿಸಿದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಒಟ್ಟು ಒಂಬತ್ತು ವಿದ್ಯಾರ್ಥಿಗಳಿಗೆ ಲ್ಯಾಪ್ ಟಾಪ್ ವಿತರಣೆ ಹಾಗೂ ಕಾಲೇಜುಗಳ ಪ್ರಾರಂಭೋತ್ಸವದ ಜಂಟಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಸಿ. ಜಯಪ್ಪ ಪ್ರಶಸ್ತಿ ಪುರಸ್ಕøತ ವಿದ್ಯಾರ್ಥಿಗಳನ್ನು ಅಭಿನಂದಿಸಿ ಅವರ ಭವಿಷ್ಯವು ಉಜ್ವಲವಾಗಲಿ ಹಾರೈಸಿದರು. ಎಲ್ಲ ಸುರಕ್ಷತಾ ಕ್ರಮಗಳೊಂದಿಗೆ ಕಾಲೇಜುಗಳಲ್ಲಿ ತರಗತಿಗಳು ಪ್ರಾರಂಭವಾಗುತ್ತಿದ್ದು ವಿದ್ಯಾರ್ಥಿಗಳು ಧನಾತ್ಮಕ ಮನೋಭಾವನೆಯೊಂದಿಗೆ ತರಗತಿಗಳಿಗೆ ಹಾಜರಾಗಬೇಕೆಂದು ಕರೆ ನೀಡಿದರು.
ನಗರದ ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಚಾರ್ಯ ಬಿ.ಜಿ. ಗಿರಿತಿಮ್ಮಣ್ಣವರ , ಮುಳಗುಂದದ ಸರ್ಕಾರಿ ಪದವಿ ಪೂರ್ವ ಕಆಲೇಜಿನ ಪ್ರಾಚಾರ್ಯ ಜಿ.ಎಸ್. ಶಿರಸಿ , ಮುಂಡರಗಿ ಸರ್ಕಾರದ ಪದವಿ ಪೂರ್ವ ಕಾಲೇಜಿನ ಪ್ರಾಚಾರ್ಯರಾದ ಹೆಬ್ಬಾಳ ಉಪನ್ಯಾಸಕ ಕೆ.ಪಿ.ಕಾಜಗಾರ , ಉಪನ್ಯಾಸಕರಾದ ಜೆ.ಎಮ್. ಮಠಪತಿ ಹಾಜರಿದ್ದರು.