ಸರ್ಕಾರಿ ಅನುದಾನದ ಸದುಪಯೋಗ ಪಡೆದುಕೊಳ್ಳಲು ಕರೆ

ವಿಜಯಪುರ, ನ.10-ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಫಲಾನುಭವಿಗಳಿಗೆ 39 ಇಲಾಖೆಯಿಂದ ಬರುವ ಅನುದಾನವನ್ನು ಸದುಪಯೋಗ ಪಡೆದುಕೊಂಡು ಆರ್ಥಿಕವಾಗಿ ಸದೃಢವಾಗುವಂತೆ ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯದ ಪೋಲಿಸ್ ಉಪಾಧೀಕ್ಷಕರಾದ ಸುನೀಲ್ ಆರ್.ಕಾಂಬಳೆ ಕರೆ ನೀಡಿದರು.
ವಿಜಯಪುರದ ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯ ವತಿಯಿಂದ ಹಮ್ಮಿಕೊಂಡ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಜನರ ಅರ್ಜಿದಾರರ ದಿನಾಚರಣೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಈ ಸಂದರ್ಭದಲ್ಲಿ ಕುಂದು ಕೊರತೆಗಳನ್ನು ಆಲಿಸಿ, ಶೀಘ್ರ ಇತ್ಯರ್ಥ ಪಡಿಸುವುದಾಗಿ ಭರವಸೆ ನೀಡಿದರು.
ಈ ಸಂದರ್ಭದಲ್ಲಿ ಪೋಲಿಸ್ ಇನ್ಸಪೆಕ್ಟರ್ ಎಂ.ಎನ್.ಸಿಂಧೂರ, ಆರ್.ವ್ಹಿ.ಅಸಲಕರ, ಸೇರಿದಂತೆ ಘಟಕದ ಸಿಬ್ಬಂದಿಗಳು ಉಪಸ್ಥಿತರಿದ್ದರು.