ಸರ್ಕಾರಿ ಆಸ್ಪತ್ರೆಗೆ ಶಾಸಕ ಪರಣ್ಣ ಮುನವಳ್ಳಿ ಭೇಟಿ

ಗಂಗಾವತಿ ಮಾ.31: ಇಲ್ಲಿನ ಉಪ ವಿಭಾಗ ಆಸ್ಪತ್ರೆಯ ಕೋವಿಡ್ ಆಸ್ಪತ್ರೆ ಹಾಗೂ ಪರೀಕ್ಷೆ ಕೇಂದ್ರಕ್ಕೆ ಶಾಸಕ ಪರಣ್ಣ ಮುನವಳ್ಳಿ ಭೇಟಿ ನೀಡಿ ಪರಿಶೀಲಿಸಿದರು.
ಆಸ್ಪತ್ರೆಯ ಮುಖ್ಯ ವೈದ್ಯಾಧಿಕಾರಿ ಡಾ. ಈಶ್ವರ್ ಸವಡಿ ಇವರ ಉಪಸ್ಥಿತಿಯಲ್ಲಿ ಜಿಲ್ಲೆ ಮತ್ತು ತಾಲೂಕಿನಲ್ಲಿ ಕೋವಿಡ್ -19 ಎರಡನೇ ಅಲೆ ಪ್ರಾರಭವಾಗಿದ್ದು, ಈ ಹಿನ್ನೆಲೆ ಆಸ್ಪತ್ರೆಯ ವ್ಯವಸ್ಥೆ ರೋಗಿಗಳಿಗೆ ಆರೋಗ್ಯ ವ್ಯವಸ್ಥೆ ಮತ್ತು ಅನುಕೂಲಗಳ ಕುರಿತು ಮತ್ತು ಮುಂಜಾಗ್ರತೆ ತೆಗೆದುಕೊಳ್ಳುವ ಬಗ್ಗೆ ಆಸ್ಪತ್ರೆಯ ವೈದ್ಯರುಗಳ ಜೊತೆ ಸಭೆ ನಡೆಸಿದರು. ಈ ವೇಳೆ ಆರೋಗ್ಯ ಇಲಾಖೆಯ ಸಿಬ್ಬಂದಿ ಇದ್ದರು.