ಸರ್ಕಾರಿ ಕಚೇರಿ. ಶಾಲೆ, ಕಾಲೇಜುಗಳಿಗೆ ರಜೆ ನೀಡಿ

ವಿಜಯಪುರ:ಡಿ.29:ವಿಜಯಪುರದ ಜ್ಞಾನಯೋಗಾಶ್ರಮದಲ್ಲಿ ಜನವರಿ 1, 2ರಂದು ನಡೆಯಲಿರುವ ಗುರುನಮನ ಮಹೋತ್ಸವದಲ್ಲಿ ಜಿಲ್ಲೆಯ ಸರಕಾರಿ ನೌಕರರು ಹಾಗೂ ಶಾಲಾ ಮಕ್ಕಳು ಭಾಗವಹಿಸಲು ಅನುಕೂಲವಾಗುವಂತೆ ಜಿಲ್ಲೆಯ ಸರಕಾರಿ ಕಛೇರಿಗಳಿಗೆ ಹಾಗೂ ಶಾಲಾ ಕಾಲೇಜುಗಳಿಗೆ ಎರಡು ದಿನ ರಜೆ ಘೋಷಣೆ ಮಾಡಬೇಕೆಂದು ರಾಜ್ಯ ಸರ್ಕಾರಿ ನೌಕರರ ಸಂಘ ಜಿಲ್ಲಾ ಶಾಖೆ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದೆ.

ಈ ಸಂಬಂಧ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಅಧ್ಯಕ್ಷ ಸುರೇóಶ ಶೇಡಶ್ಯಾಳ ಅಧ್ಯಕ್ಷತೆಯಲ್ಲಿ ಜಿಲ್ಲಾಧಿಕಾರಿ. ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಮನವಿ ಸಲ್ಲಿಸಲಾ¬ತು. ಈ ಸಂದರ್ಭದಲ್ಲಿ ಜುಬೇರ ಕೆರೂರ, ವಿಜಯಕುಮಾರ ಹತ್ತಿ, ಗಂಗಾಧರ ಜೇವೂರ, ನಿಜು ಮೇಲಿನಕೇರಿ, ಬಶೀರ ನದಾಫ, ಎಸ್.ಎಚ್. ಹುಣಶಿಕಟ್ಟಿ, ನಿಂಗನಗೌಡ ಬಿರಾದಾರ, ಡಿ.ಕೆ. ತಾವಸೆ, ಎ.ಎಫ್. ಅರಳಿಮಟ್ಟಿ ಹಾಗೂ ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು.