ಸರ್ಕಾರಿ ಕಿರಿಯ ತಾಂತ್ರಿಕ ಶಾಲೆಯ ವಾರ್ಷಿಕೋತ್ಸವ

ಕಲಬುರಗಿ:ಫೆ.14:ಕಲಬುರಗಿ ಸರ್ಕಾರಿ ಕಿರಿಯ ತಾಂತ್ರಿಕ ಶಾಲೆಯಲ್ಲಿ ಶನಿವಾರ ಹಮ್ಮಿಕೊಳ್ಳಲಾಗಿದ್ದ ಸರ್ಕಾರಿ ಕಿರಿಯ ತಾಂತ್ರಿಕ ಶಾಲೆಯ ವಾರ್ಷಿಕೋತ್ಸವ ಸಮಾರಂಭವನ್ನು ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಉದ್ಘಾಟಿಸಿದರು.

ನಂತರ ಅವರು ಮಾತನಾಡಿ, ಈ ಸರ್ಕಾರಿ ಕಿರಿಯ ತಾಂತ್ರಿಕ ಶಾಲೆಯ ಒಂದು ವಿಶಿಷ್ಟ ಶಾಲೆಯಾಗಿದ್ದು, ತಾಂತ್ರಿಕ ಶಿಕ್ಷಣದ ಬುನಾದಿಯಾಗಿದೆ. ಸರ್ಕಾರಿ ಶಾಲೆಗಳಲ್ಲಿ ಮೂಲಭೂತ ಸೌಕರ್ಯ ಒದಗಿಸಲು ಈ ಸರ್ಕಾರವು ಸಾಕಷ್ಟು ಶ್ರಮಿಸುತ್ತಿದೆ. ಈ ಶಾಲೆಯಲ್ಲಿ ಉನ್ನತ ಶಿಕ್ಷಣ ಪಡೆದ ಪ್ರತಿಭಾನ್ವಿತ ಶಿಕ್ಷಕರಿದ್ದು, ತಾವು ಸಹ ಸರ್ಕಾರಿ ಶಾಲೆಯಲ್ಲಿ ಅಭ್ಯಾಸ ಮಾಡಿರುವುದಾಗಿ ತಮ್ಮ ಶಾಲಾ ದಿನಗಳನ್ನು ಮೆಲುಕು ಹಾಕಿದರು.

ಕಲಬುರಗಿ ಸರ್ಕಾರಿ ಕಿರಿಯ ತಾಂತ್ರಿಕ ಶಾಲೆಯ ಪ್ರಾಂಶುಪಾಲರಾದ ಡಾ ಕೆ. ಗಿರಿಮಲ್ಲ ಅವರು ಕಾರ್ಯಕ್ರಮದ ಅಧ್ಯಕ್ಷತೆವಹಿಸಿದರು. ಕಾರ್ಯಕ್ರಮದಲ್ಲಿ ಶಾಲೆಯ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಇದೇ ಸಂದರ್ಭದಲ್ಲಿ ಶಾಲಾ ಮಕ್ಕಳಿಂದ ಮನರಂಜನಾ ಸಾಂಸ್ಕøತಿಕ ಕಾರ್ಯಕ್ರಮಗಳು ಜರುಗಿತು.