ಪಾವಗಡ, ಜು. ೧೭- ತಾಲ್ಲೂಕಿನ ವೈ.ಎನ್.ಹೊಸಕೋಟೆ ಹೋಬಳಿಯ ಜೆ.ಅಚ್ಚಮ್ಮನಹಳ್ಳಿ ಗ್ರಾಮದಲ್ಲಿ ಸರ್ವೆ ನಂ ೨೬ ರಲ್ಲಿ ಒತ್ತುವರಿ ಆಗಿದೆ ಎಂದು ಲೋಕಾಯುಕ್ತ ಕಚೇರಿಯಿಂದ ಬಂದ ವರದಿ ಹಿನ್ನೆಲೆಯಲ್ಲಿ ಮಧುಗಿರಿ ಉಪವಿಭಾಗಾಧಿಕಾರಿ ರಿಷಿ ಆನಂದ್ ಭೇಟಿ ನೀಡಿ ಪರಿಶೀಲಿಸಿದರು.
ನಂತರ ಮಾತನಾಡಿದ ಅವರು, ಜೆ.ಅಚ್ಚಮ್ಮನಹಳ್ಳಿ ಗ್ರಾಮದ ಸರ್ಕಾರಿ ಸರ್ವೆ ನಂ. ೨೬ರಲ್ಲಿ ಒತ್ತುವರಿಯಾಗಿದೆ ಎಂದು ಲೋಕಯುಕ್ತ ಕಚೇರಿಯಲ್ಲಿ ದೂರು ದಾಖಲಾಗಿದ್ದು ಇದರ ಬಗ್ಗೆ ಉಪಲೋಕಾಯುಕ್ತರು ವರದಿ ಕೇಳಿದ್ದಾರೆ. ಹಾಗಾಗಿ ಭೇಟಿ ನೀಡಿ ಪರಿಶೀಲಿಸಿ, ಈ ಸಂಬಂಧ ತಹಶೀಲ್ದಾರ್ ಮತ್ತು ಸ್ಥಳೀಯ ಕಂದಾಯ ಅಧಿಕಾರಿಗಳು ಹಾಗೂ ಗ್ರಾಮ ಪಂಚಾಯ್ತಿ ಅಭಿವೃದ್ಧಿ ಅಧಿಕಾರಿಗಳಿಗೆ ವರದಿ ನೀಡುವಂತೆ ತಿಳಿಸಿದ್ದೇನೆ ಎಂದರು.
ಈ ಸಂದರ್ಭದಲ್ಲಿ ತಹಶೀಲ್ದಾರ್ ಸುಜಾತ, ಕಂದಾಯ ನಿರೀಕ್ಷಕ ಕಿರಣ್‌ಕುಮಾರ್, ಗ್ರಾಮ ಲೆಕ್ಕಾಧಿಕಾರಿಗಳಾದ ಅಮ್ಜದ್ ಖಾನ್, ಪುನೀತ್‌ಕುಮಾರ್, ದಿಲವರ್, ದಿಲೀಪ್‌ಕುಮಾರ್, ರಘುವೀರ್, ಪಂಚಾಯತಿ ಅಭಿವೃದ್ಧಿ ಅಧಿಕಾರಿದ ಚಂದ್ರಶೇಖರಯ್ಯ ಮತ್ತಿತರರು ಉಪಸ್ಥಿತರಿದ್ದರು.