ಸರ್ಕಾರಿ ತಾಯಿ, ಮಕ್ಕಳ ಆಸ್ಪತ್ರೆಗೆ ಜಿಲ್ಲಾಧಿಕಾರಿ ದಿವಾಕರ್ ದಿಢೀರ್ ಭೇಟಿ


ಸಂಜೆವಾಣಿ ವಾರ್ತೆ
ವಿಜಯನಗರ:ಸಾ.16- ಹೊಸಪೇಟೆಯ ಸರ್ಕಾರಿ ತಾಯಿ ಮತ್ತು ಮಕ್ಕಳ ಆಸ್ಪತ್ರೆಗೆ ಶುಕ್ರವಾರ ಜಿಲ್ಲಾಧಿಕಾರಿ ಎಂ.ಎಸ್.ದಿವಾಕರ ದಿಢೀರ್ ಭೇಟಿ ನೀಡಿ, ಪರಿಶೀಲಿಸಿದ ರು.
ವಾರ್ಡಗಳಿಗೆ ತೆರಳಿ ಬಾಣಂತಿಯರು ಮಕ್ಕಳ ಆರೋಗ್ಯ ವಿಚಾರಿಸಿದ ಅವರು, ಆಸ್ಪತ್ರೆಯ ಸೇವೆಗಳ ಬಗ್ಗೆ ಮಾಹಿತಿ ಪಡೆದರು. ಮಕ್ಕಳ ತಜ್ಞರು ಮತ್ತು ಸ್ತ್ರೀ ರೋಗ ತಜ್ಞರೊಂದಿಗೆ ಸಮಾಲೋಚಿಸಿದರು. ಸೆಕ್ಯೂರಿಟಿ ಗಾರ್ಡ್ ನೇಮಿಸುವುದು ಸರಿದಂತೆ ಅಗತ್ಯ ಸಿಬ್ಬಂದಿ ನೇಮಕಾತಿ ಮಾಡಿಕೊಳ್ಳಲು ಸಭೆಯಲ್ಲಿ ನಡೆಸಿ ಅನುಮೋದನೆ ಪಡೆದುಕೊಳ್ಳಬೇಕು. ಆಸ್ಪತ್ರೆಯಲ್ಲಿ ಅಗತ್ಯ ಮೂಲಸೌಲಭ್ಯಗಳಿದ್ದು, 60 ಹಾಸಿಗೆಯಿಂದ 100 ಹಾಸಿಗೆಯ ಆಸ್ಪತ್ರೆಯನ್ನಾಗಿಸಿ, ಮಾಸಿಕ 500ಕ್ಕೂ ಹೆಚ್ಚು ಹೆರಿಗೆ ಮಾಡಲು ಕ್ರಮ ವಹಿಸಬೇಕು ಎಂದು ಜಿಲ್ಲಾ ಆರೊಗ್ಯಾಧಿಕಾರಿಗೆ ಸೂಚಿಸಿದರು.
ಇದಕ್ಕೂ ಮುನ್ನ ಸಿಬ್ಬಂದಿ ನೌಕರರ ಕೊರತೆಯಾಗಿದೆ. ಕೆಲವು ವಿಭಾಗಗಳಿಗೆ ಉಪಕರಣಗಳ ಕೊರತೆಗಳ ಬಗ್ಗೆ ಡಿಎಚ್‍ಒ ಡಾ.ಶಂಕರ್ ನಾಯ್ಕ ಗಮನ ಸೆಳೆದರು.
ಇದಕ್ಕೂ ಮುನ್ನನ ಆಸ್ಪತ್ರೆಯ ಹೊರಾಂಗಣದಲ್ಲಿ ಸಂಚರಿಸಿ ಸಿಸಿ ರಸ್ತೆ ಕಾಮಗಾರಿಯ ಬಗ್ಗೆ ಪರಿಶೀಲಿಸಿದ ಜಿಲ್ಲಾಧಿಕಾರಿ, ಈ ಕುರಿತು ವರದಿ ಸಲ್ಲಿಸುವಂತೆ ಅಧಿಕಾರಿಗಳಿಗೆ ನಿರ್ದೇಶಿಸಿದರು.
ಈ ವೇಳೆ ಆಸ್ಪತ್ರೆಯ ಆಡಳಿತಾಧಿಕಾರಿ ಡಾ.ಸಲೀಂ., ಅರವಳಿಕೆ ತಜ್ಞ ಡಾ.ನೂರಭಾಷಾ ಸೇರಿದಂತೆ ಇತರರು ಇದ್ದರು.