ಸರ್ಕಾರಿ ನೌಕರರಿಗೆ ಶೇ.4 ತುಟ್ಟಿಭತ್ಯೆ ಹೆಚ್ಚಳ: ಸಂಪುಟ ನಿರ್ಧಾರ: 12,815 ಕೋಟಿ ರೂ ಹೊರೆ

ನವದೆಹಲಿ,ಮಾ.24- ಕೇಂದ್ರ ಸರ್ಕಾರ 1 ಕೋಟಿಗೂ ಅಧಿಕ ಸರ್ಕಾರ೮ ಉದ್ಯೋಗಿಗಳ ತುಟ್ಟಿಭತ್ಯೆಯನ್ನು ಶೇ.4 ರಷ್ಡು ಹೆಚ್ಚಳ ಮಾಡಲು ಕೇಂದ್ರ ಸಚಿವ ಸಂಪುಟ ನಿರ್ಧರಿಸಿದೆ.

ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಕೇಂದ್ರ ವಾರ್ತಾ ಮತ್ತು ಪ್ರಸಾರ ಖಾತೆ ಸಚಿಚ ಅನುರಾಗ್ ಸಿಂಗ್ ಠಾಕೂರ್ ತಿಳಿಸಿದ್ದಾರೆ.

ಕೇಂದ್ರ ಸರ್ಕಾರಿ ನೌಕರರಿಗೆ ಶೇ. 4 ರಷ್ಡು ಡಿಎ ಹೆಚ್ಚಳ ಮಾಡಿರುವ ಹಿನ್ನೆಲೆಯಲ್ಲಿತುಟ್ಟಿಭತ್ಯೆ ಒಟ್ಟು ಶೇಕಡಾ 38 ರಿಂದ ಶೇಕಡಾ 42 ಕ್ಕೆ ಏರಿಕೆಯಾಗಿದೆ ಎಂದು ಹೇಳಿದ್ದಾರಡ.

ತುಟ್ಟಿಭತ್ಯೆ ಅಥವಾ ಡಿಎ ಹೆಚ್ಚಳಕ್ಕೆ ಕೇಂದ್ರ ಸರ್ಕಾರ ಹೆಚ್ಚುವರಿಯಾಗಿ 12,815 ಖರ್ಚು ಮಾಡಲಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

ಏರುತ್ತಿರುವ ಬೆಲೆಗಳನ್ನು ಸರಿದೂಗಿಸಲು ಕೇಂದ್ರ ಸರ್ಕಾರ ತನ್ನ ಉದ್ಯೋಗಿಗಳಿಗೆ ಮತ್ತು ಪಿಂಚಣಿದಾರರಿಗೆ ಡಿಎ ನೀಡುತ್ತದೆ. ಕೈಗಾರಿಕಾ ಕಾರ್ಮಿಕರ ಅಥವಾ ಇತ್ತೀಚಿನ ಗ್ರಾಹಕ ಬೆಲೆ ಸೂಚ್ಯಂಕವನ್ನು ಆಧರಿಸಿ ಇದನ್ನು ಲೆಕ್ಕಹಾಕಿ ಡಿಎ ಶೇ.4 ರಷ್ಟು ಹೆಚ್ಚಳ ಮಾಡುವ ನಿರ್ಧಾರ ಕೈಗೊಳ್ಳಲಾಗಿದೆ ಎಂದಿದ್ದಾರೆ.