ಸರ್ಕಾರಿ ನೌಕರರು ಭ್ರಷ್ಟಾಚಾರ ಮುಕ್ತವಾಗಿ ಕರ್ತವ್ಯ ನಿರ್ವಹಿಸಿ

ಸಂಜೆವಾಣಿ ವಾರ್ತೆ
ಕೆ.ಆರ್.ಪೇಟೆ.ನ.09: ಸಾರ್ವಜನಿಕ ಸೇವೆಗೆ ಸೇರಿದ ಎಲ್ಲಾ ಸರ್ಕಾರಿ ನೌಕರರು ಕಡ್ಡಾಯವಾಗಿ ಭ್ರಷ್ಟಾಚಾರ ಮುಕ್ತವಾಗಿ ಕರ್ತವ್ಯ ನಿರ್ವಹಿಸಬೇಕು ಎಂದು ಲೋಕಾಯುಕ್ತ ಪೆÇಲಿಸ್ ವರಿಷ್ಟಾಧಿಕಾರಿ ವಿ.ಜೆ.ಸಜಿತ್ ಕರೆ ನೀಡಿದರು.
ಅವರು ಪಟ್ಟಣದ ಟಿಎಪಿಸಿಎಂಎಸ್ ಸಮುದಾಯಭವನದಲ್ಲಿ ಏರ್ಪಡಿಸಿದ್ದ ಭ್ರಷ್ಟಾಚಾರ ವಿರುದ್ದ ಜಾಗೃತಿ ಅರಿವು ಸಪ್ತಾಹ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು.
ಕರ್ನಾಟಕ ಲೋಕಾಯುಕ್ತವು ಭ್ರಷ್ಟಾಚಾರ ನಿರ್ಮೂಲನೆ, ಕಾನೂನುಗಳ ಬಗ್ಗೆ ಅರಿವು ಮೂಢಿಸುವ ಕೆಲಸಗಳನ್ನು ಮಾಡುತ್ತಿದ್ದು ಎಲ್ಲಾ ಇಲಾಖೆಗಳಲ್ಲಿಯೂ ಭ್ರಷ್ಟಾಚಾರ ತಾಂಡವವಾಡುತ್ತಿರುವುದಕ್ಕೆ ಸಂಬಂಧಿಸಿದಂತೆ ಪ್ರತಿದಿನ ನಮಗೆ ಸಾಕಷ್ಟು ದೂರುಗಳು ದಾಖಲಾಗುತ್ತಿವೆ. ಸರ್ಕಾರಿ ನೌಕರರರಿಗೆ ರೈತರ ತೆರಿಗೆ ಹಣದಿಂದ ವೇತನ ಮತ್ತು ಭತ್ಯೆಗಳನ್ನು ನೀಡುತ್ತಿದ್ದು ಅವರನ್ನು ಶೋಷಣೆ ಮಾಡುವುದು ಎಷ್ಟು ಸರಿ. ಆಡಳಿತ ಯಂತ್ರವನ್ನು ದುರುಪಯೋಗಪಡಿಸಿಕೊಂಡು ಸಾರ್ವಜನಿಕರಿಂದ ಹಣ ತೆಗೆದುಕೊಳ್ಳುವುದು ಅಪರಾಧವಾಗಿದ್ದು ಯಾವುದೇ ಕಾರಣಕ್ಕೂ ಸಾರ್ವಜನಿಕರಿಂದ ಯಾವುದೇ ರೀತಿಯ ಬೇಡಿಕೆಗಳನ್ನು ಇಡಬಾರದು, ಸಾರ್ವಜನಿಕರ ಕೆಲಸವನ್ನು ವಿಳಂಬ ಮಾಡುವುದೂ ಸಹ ಲಂಚಕ್ಕೆ ಬೇಡಿಕೆ ಇಟ್ಟಂತೆಯೇ ಆದ್ದರಿಂದ ಎಲ್ಲಾ ಸರ್ಕಾರಿ ಇಲಾಖೆಗಳಲ್ಲಿಯೂ ಪಾರದರ್ಶಕತೆ ಕಾಪಾಡಿಕೊಳ್ಳುವುದು ಅವಶ್ಯಕವಾಗಿದೆ ರೈತರ ಕೆಲಸಗಳನ್ನು ಮಾಡಿಕೊಡಲು ನಿಮ್ಮನ್ನು ನೇಮಿಸಲಾಗಿದ್ದು ಆ ಕೆಲಸಗಳನ್ನು ಪ್ರಾಮಾಣಿಕವಾಗಿ ಮಾಡುವುದು ನಿಮ್ಮ ಕರ್ತವ್ಯ. ಅನಾವಶ್ಯಕವಾಗಿ ರೈತರನ್ನು ಅಲೆದಾಡಿಸುವುದು, ಮಧ್ಯವರ್ತಿಗಳಿಂದ ವಸೂಲಿ ಮಾಡುವುದು ಲಂಚ ಪಡೆದಂತೆಯೇ ಎಂದು ತಿಳಿಸಿದರು.
ಇದೇವೇಳೆ ಲೋಕಾಯುಕ್ತ ಇನ್ಸಪೆಕ್ಟರ್ ಬಿ.ಪಿ.ಬ್ಯಾಟರಾಯಗೌಡ ಸರ್ಕಾರಿ ಅಧಿಕಾರಿಗಳಿಗೆ ಸಮಾಜದಲ್ಲಿ ಆರ್ಥಿಕ, ಸಾಮಾಜಿಕ, ರಾಜಕಿಯ ಅಭಿವೃದ್ದಿಗೆ ಭ್ರಷ್ಟಾಚಾರವು ಪ್ರಮುಖ ಅಡಚಣೆಯಾಗಿದ್ದು ಇದನ್ನು ನಿರ್ಮೂಲನೆ ಮಾಡಲು ಸರ್ಕಾರ, ಮತ್ತು ನಾಗರೀಕರು ಒಟ್ಟಾಗಿ ಕೆಲಸ ಮಾಡಬೇಕಿದೆ. ಪ್ರತೀ ನಾಗರೀಕನು ಜಾಗೃತನಾಗಿದ್ದು ಪ್ರಾಮಾಣಿಕತೆ ಮತ್ತು ನಿಷ್ಠೆಗೆ ಬದ್ದನಾಗಿ ಭ್ರಷ್ಟಾಚಾರದ ವಿರುದ್ದ ಹೋರಾಟವನ್ನು ಬೆಂಬಲಿಸಬೇಕೆಂದು ನಾನು ಅರಿತಿದ್ದೇನೆ. ಜೀವನದ ಎಲ್ಲಾ ಕ್ಷೇತ್ರಗಳಲ್ಲಿ ಪ್ರಾಮಾಣಿಕತೆ ಮತ್ತು ಕಾನೂನಿನ ನಿಯಮಗಳನ್ನು ಅನುಸರಿಸುತ್ತೇನೆ, ಲಂಚವನ್ನು ಪಡೆಯುವುದಿಲ್ಲ, ಮತ್ತು ನೀಡುವುದಿಲ್ಲ, ಎಲ್ಲಾ ಕಾರ್ಯಗಳನ್ನು ಪ್ರಾಮಾಣಿಕವಾಗಿ ನಿರ್ವಹಿಸುತ್ತೇನೆ, ಸಾರ್ವಜನಿಕ ಹಿತಾಸಕ್ತಿಯಲ್ಲಿ ಕಾರ್ಯನಿರ್ವಹಿಸುತ್ತೇನೆ. ಯಾವುದೇ ಭ್ರಷ್ಟಾಚಾರದ ಘಟನೆಗಳು ಕಂಡಲ್ಲಿ ಸೂಕ್ತ ಸಂಸ್ಥೆಗೆ ವರದಿ ಮಾಡುತ್ತೇನೆ ಎಂದು ಪ್ರತಿಜಾÐವಿಧಿ ಬೋಧಿಸಿದರು.
ಕಾರ್ಯಕ್ರಮದಲ್ಲಿ ಲೋಕಾಯುಕ್ತ ಇನ್ಸಪೆಕ್ಟರ್ ಪ್ರಕಾಶ್, ಮೋಹನ್ ರೆಡ್ಡಿ, ಮತ್ತು ಸಿಬ್ಬಂದಿ ವರ್ಗ, ತಹಶೀಲ್ದಾರ್ ನಿಸರ್ಗಪ್ರಿಯ, ಇಓ ಸತಿಶ್, ಬಿಇಓ ಸೀತಾರಾಮು, ಪಶುಸಂಗೋಪನಾ ಇಲಾಖೆಯ ಸಹಾಯಕ ನಿರ್ದೇಶಕ ಡಾ.ಹೆಚ್.ಎಸ್.ದೇವರಾಜು, ಬಿಸಿಎಂ ಅಧಿಕಾರಿ ಎಂ.ಎನ್.ವೆಂಕಟೇಶ್ ಸಮಾಜಕಲ್ಯಾಣಾಧಿಕಾರಿ ದಿವಾಕರ್ ಸೇರಿದಂತೆ ತಾಲ್ಲೂಕು ಹಂತದ ಅಧಿಕಾರಿಗಳು ಹಾಜರಿದ್ದರು.