ಸರ್ಕಾರಿ ನೌಕರರ ಹೋರಾಟಕ್ಕೆ ಬೆಂಬಲ

ರಾಯಚೂರು,ಫೆ.೨೮- ರಾಜ್ಯ ಸರ್ಕಾರಿ ನೌಕರರ ನ್ಯಾಯಯುತವಾದ ಬೇಡಿಕೆಗಳಾದ ವೇತನ ಭತ್ಯೆ ಪರಿಷ್ಕರಣೆ ಹಾಗೂ ಹಳೆ ಪಿಂಚಣಿ ಯೋಜನೆಯನ್ನು ಜಾರಿಗೊಳಿಸುವ ಸಂಬಂಧ ಹೋರಾಟಕ್ಕೆ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಬೆಂಬಲ ಸೂಚಿಸಿದ್ದಾರೆ. ಜೆಡಿಎಸ್ ಪಕ್ಷದಿಂದ ಸಂಪೂರ್ಣ ಬೆಂಬಲವಿದೆ ಎನ್. ಶಿವಶಂಕರ ವಕೀಲರು ತಿಳಿಸಿದ್ದಾರೆ.
ನಮ್ಮ ರಾಜ್ಯದ ಸರ್ಕಾರಿ ನೌಕರರು ಇತರೆ ರಾಜ್ಯಗಳಿಗಿಂತ ಕಡಿಮೆ ಸಂಬಳದಲ್ಲಿ ದುಡಿಯುತ್ತಿದ್ದಾರೆ. ೭ನೇ ವೇತನ ಆಯೋಗದ ವರದಿಯಂತೆ ನಮ್ಮ ವೇತನ ಶೇ ೪೦ ರಷ್ಟು ಹೆಚ್ಚಿಸಬೇಕು. ಪಂಜಾಬ್, ರಾಜಸ್ಥಾನ, ಛತ್ತೀಸ್‌ಘಡ್, ಜಾರ್ಖಂಡ್, ಹಿಮಾಚಲ ಪ್ರದೇಶ ರಾಜ್ಯಗಳ ರೀತಿಯಲ್ಲಿ ನಮ್ಮಲ್ಲೂ ಸಹ ಒಪಿಎಸ್ ಜಾರಿ ಮಾಡಬೇಕು ಎಂಬ ಬೇಡಿಕೆ ಇದೆ ಇದು ನೌಕರರ ನ್ಯಾಯಯುತವಾದ ಹಾಗೂ ಸರಳ ಬೇಡಿಕೆಯಾಗಿದೆ. ನೌಕರರು ತಮ್ಮ ಬೇಡಿಕೆ ಹೋರಾಟದ ಕುರಿತು ಮನವಿಯನ್ನು ಸರ್ಕಾರಕ್ಕೆ ಸಲ್ಲಿಸಿದ್ದರು ಆದರೆ ಸಂಪೂರ್ಣ ನಿರ್ಲಕ್ಷ್ಯ ಮಾಡಲಾಗೆದೆ. ಸರ್ಕಾರ ವೇತನ ಆಯೋಗದ ಕುರಿತು ಬಜೆಟ್?ನಲ್ಲಿ ಘೋಷಣೆ ಮಾಡುವ ಕುರಿತ ನಿರೀಕ್ಷೆ ಇತ್ತು. ಆದರೆ ಅಲ್ಲಿ ಘೋಷಣೆ ಮಾಡದೆ ನೌಕರರಿಗೆ ನಿರಾಸೆಯನ್ನುಂಟು ಮಾಡಲಾಗಿದೆ