ಸರ್ಕಾರಿ ನೌಕರ ಸಂಘದಿಂದ ಪ್ರತಿಭಾ ಪುರಸ್ಕಾರ


ಸಂಜೆವಾಣಿ ನ್ಯೂಸ್
ತಿ.ನರಸೀಪುರ 05 :ರಾಜ್ಯ ಸರ್ಕಾರಿ ನೌಕರರ ಸಂಘ ಮತ್ತು ತಾಲೂಕು ನೌಕರರ ಸಂಘದ ಸಹಯೋಗದಲ್ಲಿ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ನಡೆಸಲಾಯಿತು.
ಪಟ್ಟಣದ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಎಸ್. ಎಸ್. ಎಲ್. ಸಿ ಮತ್ತು ಪಿಯುಸಿಯಲ್ಲಿ
ಅತೀ ಹೆಚ್ಚು ಅಂಕ ಗಳಿಸಿದ
37 ನೌಕರರ ಮಕ್ಕಳಿಗೆ ಪ್ರಮಾಣಪತ್ರ ಮತ್ತು ನಗದು ಬಹುಮಾನವನ್ನು ನೀಡಿ ಸನ್ಮಾನಿಸಲಾಯಿತು.ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಕ್ಷೇತ್ರ ಶಿಕ್ಷಣಾಧಿಕಾರಿ ಜಿ. ಶೋಭಾ ಮಾತನಾಡಿ,ವಿದ್ಯಾರ್ಥಿಗಳಿಗೆ ಪುರಸ್ಕಾರ ನೀಡುವುದರಿಂದ ಅವರ ವ್ಯಾಸಂಗಕ್ಕೆ ಉತ್ತೇಜನ ನೀಡಿದಂತಾಗುತ್ತದೆ.ಪ್ರತಿಭಾವಂತ ವಿದ್ಯಾರ್ಥಿಗಳನ್ನು ಪುರಸ್ಕರಿಸುವ ಕಾರ್ಯ ನಿರಂತರವಾಗಿ ನಡೆಯಬೇಕು.ಯಾವುದೇ ಮಕ್ಕಳು ಶಿಕ್ಷಣದಿಂದ ವಂಚಿತರಾಗಬಾರದು.ವಿದ್ಯಾರ್ಥಿಗಳು ಹೆಚ್ಚು ಹೆಚ್ಚು ಶಿಕ್ಷಣ ಪಡೆದಂತೆ ಗೌರವಾನ್ವಿತಸ್ಥಾನಮಾನ,ಪುರಸ್ಕಾರ ಮತ್ತು ಸಂಸ್ಕಾರ ದಕ್ಕುತ್ತದೆ.ಹಾಗಾಗಿ ಪೆÇೀಷಕರು ತಮ್ಮ ಮಕ್ಕಳಿಗೆ ಉನ್ನತ ಶಿಕ್ಷಣ ಕೊಡಿಸುವತ್ತ ಹೆಚ್ಚು ಗಮನಹರಿಸಬೇಕು ಎಂದರು.
ಸರ್ಕಾರಿ ನೌಕರ ಸಂಘದ ಜಿಲ್ಲಾಧ್ಯಕ್ಷ ಗೋವಿಂದರಾಜು ಮಾತನಾಡಿ,ರಾಜ್ಯ ಸರ್ಕಾರಿ ಸಂಘ ಅತ್ಯಂತ ಶಿಸ್ತುಬದ್ಧ ಸಂಘವಾಗಿದೆ. ಸಂಘದ ಹೋರಾಟದ ಫಲದಿಂದ 7ನೇ ವೇತನ ಆಯೋಗ, ಅರೋಗ್ಯ ವಿಮಾ ಯೋಜನೆಯನ್ನು ಪಡೆದುಕೊಂಡಿದ್ದೇವೆ.ಸರ್ಕಾರವೂ ಕೂಡ ಹೊಸ ಪಿಂಚಣಿ ವ್ಯವಸ್ಥೆಯನ್ನು ರದ್ದುಪಡಿಸಿ ಹಳೆಯ ಪಿಂಚಣಿ ವ್ಯವಸ್ಥೆಯನ್ನು ಜಾರಿ ಮಾಡುವ ಭರವಸೆ ನೀಡಿದೆ.ಸರ್ಕಾರಿ ನೌಕರರು ಅರೋಗ್ಯ ಜ್ಯೋತಿ ಸಂಜೀವಿನಿ ಯೋಜನೆಗೆ ತಮ್ಮ ಅವಲಂಬಿರನ್ನು ಸೇರಿಸಿ ಯೋಜನೆಯ ಪ್ರಯೋಜನ ಪಡೆದುಕೊಳ್ಳವಂತೆ ಸಲಹೆ ನೀಡಿದರು.

ಕಾರ್ಯಕ್ರಮದಲ್ಲಿ ತಾಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಎಂ.ವಿ.ಶಿವಶಂಕರಮೂರ್ತಿ,ತಾಲೂಕು ಕಸಾಪ ಅಧ್ಯಕ್ಷ ಕನ್ನಡ ಪುಟ್ಟಸ್ವಾಮಿ,ಜಿಲ್ಲಾ ಪ್ರಧಾನ ಕಾರ್ಯದರ್ಶಿ ರೇವಣ್ಣ, ಕಾರ್ಯಾಧ್ಯಕ್ಷ ಆನಂದ,ಸಂಘಟನಾ ಕಾರ್ಯದರ್ಶಿ ಸತೀಶ್,ತಾಲೂಕು ಸಂಘದ ಗೌರವ ಅಧ್ಯಕ್ಷ ನಾಗರಾಜು,ರಾಜ್ಯ ಕಾರ್ಯಕಾರಿಣಿ ಸದಸ್ಯ ಉಮೇಶ್,ಪ್ರಧಾನ ಕಾರ್ಯದರ್ಶಿ ಸುಬ್ರಮಣ್ಯ,ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಎಚ್.ಡಿ.ಮಾದಪ್ಪ,ಪುಟ್ಟರಾಜು, ಶ್ರೀಧರ್,ಚೆಲುವರಾಜು, ಮಹದೇವಸ್ವಾಮಿ,ರಾಜಣ್ಣ,ಮಹಾದೇವಯ್ಯ, ವೆಂಕಟರಾಮು,ರಾಜಶೇಖರ್, ಜೇಮ್ಸ್, ಗಜೇಂದ್ರ,ಕೆಂಡಗಣ್ಣಸ್ವಾಮಿ,ನರಸಮ್ಮ, ಶೋಭಾ,ಸೋಸಲೆ ನಾಗೇಶ್,ಪ್ರಭಾಕರ್ ಮತ್ತಿತರರು ಹಾಜರಿದ್ದರು