ಸರ್ಕಾರಿ ಪದವಿ ಪೂರ್ವ ಅತಿಥಿ ಉಪನ್ಯಾಸಕರ ಸಮಸ್ಯೆಗಳ ನಿವಾರಣೆಗೆ ಮನವಿ


(ಸಂಜೆವಾಣಿ ಪ್ರತಿನಿಧಿಯಿಂದ)
ಬಳ್ಳಾರಿ, ಸೆ.01: ಸರ್ಕಾರಿ ಪದವಿ ಪೂರ್ವ ಅತಿಥಿ ಉಪನ್ಯಾಸಕರ ಸಮಸ್ಯೆಗಳ ನಿವಾರಣೆಗೆ ಸರ್ಕಾರಿ ಪದವಿಪೂರ್ವ ಅತಿಥಿ ಉಪನ್ಯಾಸಕರ ಸಂಘದವರು ಬಳ್ಳಾರಿ ನಗರ ಶಾಸಕ ನಾರಾ ಭರತ್ ರೆಡ್ಡಿಯನ್ನು ಭೇಟಿ ಮಾಡಿ ಮನವಿ ಸಲ್ಲಿಸಿದರು. ಮನವಿಯಲ್ಲಿ ಗೌರವಧನ ಹೆಚ್ಚಳ, ಸೇವಾ ಭತ್ರತೆ, ಮತ್ತಿತರ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿದ್ದಾರೆ.
ನಾರಾ ಭರತ ರೆಡ್ಡಿಯವರು, ಅತಿಥಿ ಉಪನ್ಯಾಸಕರ ಬೇಡಿಕೆಗಳಿಗೆ ಸ್ಪಂದಿಸಿ, ಸನ್ಮಾನ್ಯ ಶಿಕ್ಷಣ ಮಂತ್ರಿಗಳ ಜೊತೆ ಮಾತನಾಡಿ, ಈ ಸಮಸ್ಯೆಗಳನ್ನು ಬಗೆಹರಿಸಲು ಪ್ರಯತ್ನಿಸುತ್ತೇನೆ ಎಂದು  ಸಕಾರಾತ್ಮಕವಾಗಿ ಪ್ರತಿಕ್ರಿಯಿಸಿದರು. ಬೇಡಿಕೆ ಈಡೇರುವ ಭರವಸೆಯನ್ನು ಕೂಡ ನೀಡಿದರು.
ಶಾಸಕರ ಭೇಟಿ ಸಂದರ್ಭದಲ್ಲಿ ಸಂಘಟನೆಯ ರಾಜ್ಯ ಜಂಟಿ ಕಾರ್ಯದರ್ಶಿ ನಾಗರತ್ನ, ಸಂಚಾಲಕ ಮಲ್ಲಿಕಾರ್ಜುನ, ಮತ್ತಿತರರು ಉಪಸ್ಥಿತರಿದ್ದರು.