ಸರ್ಕಾರಿ ಶಾಲಾ ಕಾಲೇಜುಗಳಿಗೆ ಮೂಲಭೂತ ಸೌಕರ್ಯಕ್ಕೆ ಆಗ್ರಹಿಸಿ ಪ್ರತಿಭಟನೆ

ರಾಯಚೂರು,ಜು.೨೯- ಜಿಲ್ಲೆಯ ಸರ್ಕಾರಿ ಶಾಲಾ ಕಾಲೇಜುಗಳಲ್ಲಿ ಮೂಲಭೂತ ಸೌಕರ್ಯಗಳಿಲ್ಲದೆ ವಿದ್ಯಾರ್ಥಿಗಳು ಸಾಕಷ್ಟು ಸಮಸ್ಯೆಯನ್ನು ಎದುರಿಸುತ್ತಿದ್ದು,ಕೂಡಲೇ ಮೂಲಭೂತ ಸೌಲಭ್ಯವನ್ನು ಒದಗಿಸಬೇಕು ಎಂದು ಒತ್ತಾಯಿಸಿ ಅಲ್ ಇಂಡಿಯಾ ಡೆಮಾಕ್ರೆಟಿಕ್ ಸ್ಟೂಡೆಂಟ್ ಆರ್ಗನೈಜೇಷನ್ ಮುಖಂಡರು ಪ್ರತಿಭಟನಾ ಮೆರವಣಿಗೆ ನಡೆಸಿದರು.
ನಗರದ ಡಾ. ಬಿ.ಆರ್.ಅಂಬೇಡ್ಕರ್ ವೃತ್ತದಿಂದ ಪ್ರಾರಂಭವಾದ ಪ್ರತಿಭಟನಾ ಮೆರವಣಿಗೆ ಬಸ್ ಸ್ಟಾಂಡ್,ನಗರಸಭೆ ಸೇರಿದಂತೆ ವಿವಿಧ ರಸ್ತೆಗಳ ಮೂಲಕ ಟಿಪ್ಪು ಸುಲ್ತಾನ್ ಉದ್ಯಾನವನವರೆಗೆ ಮೆರವಣಿಗೆ ನಡೆಯಿತು.ಸರ್ಕಾರಿ ಬಾಲಕರ ಪದವಿ ಪೂರ್ವ ಕಾಲೇಜಿನ ಕಟ್ಟಡವನ್ನು ಕೂಡಲೇ ನವೀಕರಣಗೊಳಿಸಬೇಕು.ಹೊಸ ಕಟ್ಟಡದ ವ್ಯವಸ್ಥೆ ಮಾಡಬೇಕು.ಮಹಿಳಾ ಪ್ರಥಮ ದರ್ಜೆ ಕಾಲೇಜಿನ ನೂತನ ಕಟ್ಟಡಕ್ಕೆ ಸರಿಯಾದ ಶೌಚಾಲಯ ಒದಗಿಸಬೇಕು. ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಗಳಲ್ಲಿ ಲೈಟ್,ಫ್ಯಾನ್,ಮುಖ್ಯವಾಗಿ ಶೌಚಾಲಯದ ವ್ಯವಸ್ಥೆ ಕೂಡಲೇ ಮಾಡಬೇಕು ಎಂದು ಒತ್ತಾಯಿಸಿದರು.
ಬೊಳಮದೊಡ್ಡಿ ರೋಡ್ ನಿಂದ ರೈಲು ನಿಲ್ದಾಣದವರೆಗೂ ನಿರಂತರವಾಗಿ ಬಸ್ ಗಳನ್ನು ಬಿಡುವ ವ್ಯವಸ್ಥೆ ಮಾಡಬೇಕು. ಜಿಲ್ಲೆಯ ಎಲ್ಲಾ ಹಳ್ಳಿಗಳಿಗೆ ಬಸ್ ಸೌಕರ್ಯವನ್ನು ಒದಗಿಸಿ,ಸರಿಯಾದ ಸಮಯ ಕಾಯ್ದುಕೊಳ್ಳುವಂತೆ ನೋಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿ ಒತ್ತಾಯಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷ ಹಯ್ಯಾಳಪ್ಪ, ಕಾರ್ಯದರ್ಶಿ ಅಜಯ್ ಕಾಮತ್, ಪೀರ್ ಸಾಬ್, ಹೇಮಂತ,ಬಸವರಾಜ,ಅಮೋಘ,ನಂಡಗೋಪಲ್,ವೀರೇಶ್ ಸೇರಿದಂತೆ ಇತರರು ಉಪಸ್ಥಿತರಿದ್ದರು