ಸರ್ಕಾರಿ ಶಾಲೆಗಳ ಉಳಿಸಲು ಬದ್ದ

ಹೊನ್ನಾಳಿ.ಏ.೨೦ :  ಅವಳಿ ತಾಲೂಕಿನ ಸರ್ಕಾರಿ ಶಾಲೆಗಳ ಸರ್ವಾಂಗೀಣಾ ಅಭಿವೃದ್ದಿಗೆ ನಾನು ಬದ್ದನಾಗಿದ್ದೇನೆಂದು ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ಹೇಳಿದರು..ತಾಲೂಕಿನ ಕುಂದೂರು,ಮುಕ್ತೇನಹಳ್ಳಿ ಸೇರಿದಂತೆ ವಿವಿಧ ಗ್ರಾಮಗಳಲ್ಲಿ ಲಕ್ಷಾಂತರ ರೂಪಾಯಿ ವೆಚ್ಚದಲ್ಲಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗಳ ಹೆಚ್ಚುವರಿ ಕೊಠಡಿಗಳಿಗೆ ಗುದ್ದಲಿಪೂಜೆ ನೆರವೇರಿಸಿ ಅವರು ಮಾತನಾಡಿದರು.ಸರ್ಕಾರಿ ಶಾಲೆಗಳನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ನಮ್ಮ ಸರ್ಕಾರ ಬದ್ದವಾಗಿದ್ದು, ಈ ಹಿನ್ನೆಲೆಯಲ್ಲಿ ಅವಳಿ ತಾಲೂಕಿನ ಸರ್ಕಾರಿ ಶಾಲೆಗಳ ಅಭಿವೃದ್ದಿಗೆ ಸರ್ಕಾರ ಲಕ್ಷಾಂತರ ರೂಪಾಯಿ ಹಣ ಬಿಡುಗಡೆ ಮಾಡಿರುವುದೇ ಇದಕ್ಕೆ ನಿದರ್ಶನ ಎಂದರು.ಈಗಾಗಲೇ ಅವಳಿ ತಾಲೂಕಿನಲ್ಲಿ ಸರ್ಕಾರ ಶಾಲೆಗಳಲ್ಲಿ ಹೆಚ್ಚುವರು ಹೊಸ ಕೊಠಡಿಗಳನ್ನು ನಿರ್ಮಾಣ ಮಾಡಲಾಗಿದ್ದು, ಇನ್ನು ಸಾಕಷ್ಟು ಸರ್ಕಾರಿ ಶಾಲೆಗಳಿಗೆ ಹೆಚ್ಚುವರಿ ಕೊಠಡಿಗಳನ್ನು ಕೇಳಿದ್ದು ಮುಂದಿನ ದಿನಗಳಲ್ಲಿ ಸರ್ಕಾರದಿಂದ ಹಣ ತಂದು ಅಲ್ಲಿಯೂ ಕೊಠಡಿ ನಿರ್ಮಾಣ ಮಾಡುವುದಾಗಿ ತಿಳಿಸಿದರು.ಅಭಿವೃದ್ದಿ ವಿಚಾರದಲ್ಲಿ ಎಂದೂ ನಾನು ಕಾಂಪ್ರಮೈಸ್ ಮಾಡಿಕೊಳ್ಳುವುದಿಲ್ಲಾ, ಅವಳಿ ತಾಲೂಕಿನ ಇಂತಹ ಕಾಮಗಾರಿ ಆಗ ಬೇಕೆಂದು ಪಟ್ಟು ಹಿಡಿದರೇ ಅದನ್ನು ಮಾಡಿಸಿಯೇ ಮಾಡಿಸುತ್ತೇನೆ ಎಂದ ಶಾಸಕರು ಇದಕ್ಕೆಲ್ಲಾ ಅವಳಿ ತಾಲೂಕಿನ ಜನರ ಆಶೀರ್ವಾಧವೇ ಕಾರಣ ಎಂದರು.ವಿವಿಧ ಗ್ರಾಮಗಳ ಸರ್ಕಾರಿ ಶಾಲೆಗಳಿಗೆ ಗುದ್ದಲಿಪೂಜೆ :ತಾಲೂಕಿನಲ್ಲಿ ಯಕ್ಕನಹಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 10.60 ಲಕ್ಷ ವೆಚ್ಚದಲ್ಲಿ ಒಂದು ಹೆಚ್ಚುವರಿ ಕೊಠಡಿ. ಬನ್ನಿಕೋಡು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 21.20 ಲಕ್ಷ ವೆಚ್ಚದಲ್ಲಿ ಎರಡು ಹೆಚ್ಚುವರಿ ಕೊಠಡಿ,ಮುಕ್ತೇನಹಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ 21.20 ಲಕ್ಷ ವೆಚ್ಚದಲ್ಲಿ ಎರಡು ಹೆಚ್ಚುವರಿ ಕೊಠಡಿ,ಕೂಲಂಬಿ-ಕುAದೂರು ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲೆ ವಿಭಾಗದಲ್ಲಿ 31.50 ಲಕ್ಷ ವೆಚ್ಚದಲ್ಲಿ ಎರಡು ಹೆಚ್ಚುವರಿ ಕೊಠಡಿಗೆ ಒಟ್ಟು ಒಂದು ಕೋಟಿಗೆ ಹೆಚ್ಚು ವೆಚ್ಚದಲ್ಲಿ ಹೆಚ್ಚುವರಿ ಶಾಲಾ ಕೊಠಡಿಗೆ ಗುದ್ದಲಿಪೂಜೆ ನೆರವೇರಿಸಿದ ಶಾಸಕರು, ಇದೇ ವೇಳೆ ಮುಕ್ತೇನಗಳ್ಳಿ ಗ್ರಾಮದಲ್ಲಿ 25 ಲಕ್ಷ ವೆಚ್ಚದಲ್ಲಿ ಕೂಲಂಬಿ ಗ್ರಾಮದಲ್ಲಿ 80 ಲಕ್ಷ ವೆಚ್ಚದಲ್ಲಿ ಸಿಸಿ ರಸ್ತೆ ಕಾಮಗಾರಿ ಉದ್ಘಾಟಿಸಿದರು.ಈ ಸಂದರ್ಭ ಜಿಲ್ಲಾ ಪಂಚಾಯಿತಿ ಸದಸ್ಯರಾದ ದೀಪಾ ಜಗದೀಶ್ ಸೇರಿದಂತೆ ಎಸ್.ಡಿ.ಎಂ.ಸಿ ಅಧ್ಯಕ್ಷರು, ಶಾಲೆಯ ಮುಖ್ಯೋಪಾಧ್ಯಾಯರು ಸೇರಿದಂತೆ ಗ್ರಾಮಸ್ಥರಿದ್ದರು..