ಸಂಜೆವಾಣಿ ವಾರ್ತೆ
ದಾವಣಗೆರೆ. ಜು.೨೬ : ನಾವೆಲ್ಲಾ ಬಹುತೇಕ ಸರ್ಕಾರಿ ಶಾಲೆಗಳಲ್ಲಿಯೇ ಓದಿರುವುದು. ಸರ್ಕಾರಿ ಶಾಲೆಗಳಲ್ಲಿ ಸಿಗುವ ಸಂಸ್ಕಾರ, ಆಚಾರ ವಿಚಾರ ಇಂದು ನಮ್ಮನ್ನ ದೊಡ್ಡವರನ್ನಾಗಿ ಮಾಡಿದೆ ಎಂದು ಶಾಸಕ ಬಸವರಾಜು ವಿ ಶಿವಗಂಗಾ ತಿಳಿಸಿದರು. ಚನ್ನಗಿರಿ ತಾಲ್ಲೂಕಿನ ಮೆದಿಕೆರೆ ಗ್ರಾಮದಲ್ಲಿ ಸರ್ಕಾರಿ ಶಾಲೆ ಕೊಠಡಿ ನಿರ್ಮಾಣದ ಗುದ್ದಲಿ ಪೂಜೆ ನೆರವೇರಿಸಿದ ಅವರು ಸರ್ಕಾರಿ ಶಾಲೆಗಳನ್ನ ಮಾದರಿ ಶಾಲೆಗಳನ್ನಾಗಿ ಮಾಡುತ್ತೇವೆ. ಮಕ್ಕಳಿಗೆ ಉತ್ತಮ ಶಿಕ್ಷಣ ಜೊತೆಗೆ ಮೂಲಭೂತ ಎಲ್ಲಾ ಸೌಕರ್ಯ ಕಲ್ಪಿಸುತ್ತೇವೆ ಎಂದರು. ತಾಲ್ಲೂಕಿನಲ್ಲಿ ಸರ್ಕಾರಿ ಶಾಲೆಯ ಹಳೆ ಕೊಠಡಿಗಳ ಬದಲು ಹೊಸ ಕೊಠಡಿ ನಿರ್ಮಾಣ ಮಾಡಲು ಕ್ರಮ ಕೈಗೊಳ್ಳುತ್ತೇವೆ ಸರ್ಕಾರಕ್ಕೆ ಈಗಾಗಲೇ ಮನವಿ ಮಾಡಿದ್ದು ಹೆಚ್ಚು ಅನುದಾನ ತಂದು ಅಭಿವೃದ್ಧಿ ಕಾರ್ಯ ಮಾಡುತ್ತೇವೆ ಎಂದರು. ಸರ್ಕಾರಿ ಶಾಲೆಗಳಲ್ಲಿ ಮಕ್ಕಳಿಗೆ ಉತ್ತಮ ಗುಣಮಟ್ಟದ ಶಿಕ್ಷಣ ನೀಡಲು ಆದ್ಯತೆ ನೀಡಲಾಗುತ್ತಿದೆ. ನಿಮ್ಮ ಗ್ರಾಮದಲ್ಲಿ ಯಾವುದೇ ಸಮಸ್ಯೆ ಇದ್ದರು ನೇರವಾಗಿ ನನ್ನ ಗಮಕ್ಕೆ ತಂದರೆ ಸಮಸ್ಯೆ ಬಗೆಹರಿಸುವೆ ಎಂದರು. ಈ ಸಂದರ್ಭದಲ್ಲಿ ಬಿಇಒ ಶಾಲಾ ಶಿಕ್ಷಕರು ಸೇರಿದಂತೆ ಗ್ರಾಮದ ಮುಖಂಡರು ಉಪಸ್ಥಿತರಿದ್ದರು.