ಸರ್ಕಾರ ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ವಿಫಲ: ದೊಡ್ಡಗೌಡರ

ಚನ್ನಮ್ಮನ ಕಿತ್ತೂರ, ಮೇ 20: ಧಾರವಾಡ ಜಿಲ್ಲೆ ಹುಬ್ಬಳ್ಳಿ ನಗರದ ವೀರಾಪೂರ ಓಣಿಯ ನಿವಾಸಿ ಅಂಜಲಿ ಅಂಬಿಗೇರ ಕೊಲೆಯಾದ ಹಿನ್ನೆಲೆ ಮಾಜಿ ಶಾಸಕ ಮಹಾಂತೇಶ ದೊಡ್ಡಗೌಡರವರು ತಪ್ಪಿಸ್ಥರಿಗೆ ಕಠಿಣ ಕ್ರಮಕ್ಕೆ ಆಗ್ರಹಿಸಿದ್ದಾರೆ.
ಪಟ್ಟಣದ ಬಿಜೆಪಿ ಕಛೇರಿಯಲ್ಲಿ ಸುದ್ದಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕೊಲೆಯಾದ ಅಂಜಲಿ ಕುಟುಂಬಸ್ಥರ ಜೊತೆಗೆ ನಾವಿದ್ದೇವೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹಾಳಾಗಿದ್ದು ಕಾಂಗ್ರೇಸ್ ಸರ್ಕಾರ ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ವಿಫಲವಾಗುತ್ತಿದೆ.
ಕಾಂಗ್ರೆಸ್ ಸರ್ಕಾರದಲ್ಲಿ ಮಹಿಳೆಯರಿಗೆ ರಕ್ಷಣೆಯಿಲ್ಲದಂತಾಗಿದ್ದು ಈ ಕೂಡಲೇ ಇಲಾಖೆಗೆ ಸೂಕ್ತ ನಿರ್ದೇಶನ ನೀಡುವ ಮೂಲಕ ಕೊಲೆ ಆರೋಪಿಯನ್ನು ಕಠಿಣ ಶಿಕ್ಷೆಯೊಂದಿಗೆ ಗಲ್ಲಿಗೇರಿಸಬೇಕು.
ಅಲ್ಲದೇ ಇಂತಹ ಘಟಣೆಗಳು ಪುನರಾವರ್ತಿತ ಆಗುತ್ತಿರುವ ಹಿನ್ನೆಲೆಯಲ್ಲಿ ಕೊಲೆಗೈದ ಆರೋಪಿಗಳಿಗೆ ಕಠೀಣ ಶಿಕ್ಷೆ ವಿಧಿಸುವ ಮೂಲಕ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸ್ಥಾಪಿಸಲು ಒತ್ತಾಯಿಸಿದರು.