ಸರ್ಕಾರ ರಚನೆಗೆ ಹಕ್ಕು ಮಂಡನೆ

ಬೆಂಗಳೂರು,ಮೇ.೧೮-೧೩೫ ಸೀಟ್‌ಗಳನ್ನು ಪಡೆದು ರಾಜ್ಯದಲ್ಲಿ ಅಧಿಕಾರ ಆರಂಭಿಸಲು ಮುಂದಾಗಿದ್ದ ಕಾಂಗ್ರೆಸ್‌ಗೆ ಉಂಟಾಗಿದ್ದ ಮುಖ್ಯಮಂತ್ರಿ ಆಯ್ಕೆ ಕಗ್ಗಂಟು ಪರಿಹಾರಗೊಂಡ ಬೆನ್ನೆಲ್ಲೇ ಕಾಂಗ್ರೆಸ್ ಶಾಸಕ ಡಾ.ಜಿ ಪರಮೇಶ್ವರ್ ಸರ್ಕಾರದ ರಚನೆಗೆ ರಾಜ್ಯಪಾಲರನ್ನು ಭೇಟಿ ಮಾಡಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದರು.ಮುಂದಿನ ಎರಡು ದಿನಗಳಲ್ಲಿ ರಾಜ್ಯದಲ್ಲಿ ನೂತನ ಕಾಂಗ್ರೆಸ್ ಸರ್ಕಾರ ರಚನೆಯಾಗಲಿದೆ. ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ಅವರ ನಡುವೆ ಸಿಎಂ ಸ್ಥಾನಕ್ಕಾಗಿ ನಡೆದಿದ್ದ ಪೈಪೋಟಿಯನ್ನು ಕಾಂಗ್ರೆಸ್ ಹಿರಿಯ ನಾಯಕ ಹಾಗೂ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಶಮನಗೊಳಿಸಿದ ತಕ್ಷಣ ರಾಜ್ಯದಲ್ಲಿ ಸರ್ಕಾರ ರಚಿಸಲು ಅಧಿಕೃತವಾಗಿ ಅಗತ್ಯವಿರುವ ಎಲ್ಲಾ ನಿಯಮಗಳನ್ನು ಪೂರೈಸಲು ಕಾಂಗ್ರೆಸ್ ಮುಂದಾಗಿದೆ.ಡಾ.ಜಿ ಪರಮೇಶ್ವರ್ ಈ ಸಂಬಂಧ ರಾಜ್ಯಪಾಲರನ್ನು ಭೇಟಿ ಮಾಡಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ್ದಾರೆ.