ಸರ್ದಾರ್ ಪಟೇಲರು ಸದಾಕಾಲ ಸ್ಮರಣಿಯರು: ಮಾಜಿ ಶಾಸಕ ಸುಭಾಷ್ ಗುತ್ತೇದಾರ

ಕಲಬುರಗಿ:ಸೆ.17:ಕಲ್ಯಾಣ ಕಲ್ಯಾಣ ಕರ್ನಾಟಕ ಪ್ರದೇಶವನ್ನು ನಿಜಾಮರ ಕೈಯಿಂದ ಮುಕ್ತಿಗೊಳಿಸುವಲ್ಲಿ ಸರ್ದಾರ್ ವಲ್ಲಭಭಾಯಿ ಪಟೇಲರ ಪಾತ್ರ ಅತ್ಯಂತ ಮಹತ್ವವಾದುದ್ದು ಹೀಗಾಗಿ ಅವರು ಈ ಭಾಗದ ಜನರಿಗೆ ಸದಾಕಾಲ ಸ್ಮರಣೀಯರಾಗಿದ್ದಾರೆ ಎಂದು ಮಾಜಿ ಶಾಸಕ ಸುಭಾಷ್ ಆರ್ ಗುತ್ತೇದಾರ ಅಭಿಪ್ರಾಯಪಟ್ಟರು.
ರವಿವಾರ ಆಳಂದ ಪಟ್ಟಣದ ಎಸ್‍ಆರ್‍ಜಿ ಫೌಂಡೇಶನ್‍ನಲ್ಲಿ ಹಮ್ಮಿಕೊಂಡಿದ್ದ ಕಲ್ಯಾಣ ಕರ್ನಾಟಕ ವಿಮೋಚನಾ ದಿನಾಚರಣೆ ಕಾರ್ಯಕ್ರಮದಲ್ಲಿ ಸರ್ದಾರ ವಲ್ಲಭಭಾಯಿ ಪಟೇಲರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಮಾತನಾಡಿದರು.
ದೇಶ ಸ್ವಾತಂತ್ರ್ಯ ಪಡೆದರೂ ಕೆಲವು ಭಾಗಗಳಲ್ಲಿ ರಜಾಕರ ಹಾವಳಿ ವೀಪರಿತವಾಗಿತ್ತು ಅವರು ಬಲವಂತದ ಮತಾಂತರ, ಅತ್ಯಾಚಾರ, ಕೊಲೆ, ಸುಲಿಗೆ ದರೋಡೆಯಂತಹ ಪೈಶಾಚಿಕ ಕೃತ್ಯಗಳನ್ನು ಮಾಡುತ್ತಿದ್ದರು. ಕಲ್ಯಾಣ ಕರ್ನಾಟಕ ಭಾಗದಲ್ಲಿ ಬಹುಸಂಖ್ಯಾತ ಹಿಂದುಗಳಿದ್ದರೂ ನಮ್ಮನ್ನು ಆಳುವವರು ಅಲ್ಪಸಂಖ್ಯಾತ ರಾಜರುಗಳಾಗಿದ್ದರು ಅವರು ಈ ಭಾಗವನ್ನು ಸ್ವತಂತ್ರವಾಗಿ ಆಳಲು ನಿರ್ಧರಿಸಿದ್ದರು ಆದರೆ ಸರ್ದಾರ ಪಟೇಲರ ಕ್ಷೀಪ್ರ ಕ್ರಾಂತಿಯಿಂದ ನಿಜಾಮ ಶರಣಾಗಿ ಭಾರತದ ಒಕ್ಕೂಟದೊಳಗೆ ಸೇರಲು ಒಪ್ಪಿದ ಎಂದು ಹೇಳಿದರು.
ವಿಮೋಚನಾ ಚಳುವಳಿಯಲ್ಲಿ ಆಳಂದ ತಾಲೂಕಿನ ಪಾತ್ರ ಅತ್ಯಂತ ಮಹತ್ವವಾದುದ್ದು ಈ ಭಾಗದ ಅನೇಕ ಸ್ವಾತಂತ್ರ್ಯ ಹೋರಾಟಗಾರರು ನಿಜಾಮರ ದಬ್ಬಾಳಿಕೆಯನ್ನು ಮೆಟ್ಟಿ ನಿಂತರು ಅಲ್ಲಲ್ಲಿ ಶಿಬಿರಗಳನ್ನು ನಡೆಸಿ ಜನರಲ್ಲಿ ವಿಮೋಚನೆಯ ಜಾಗೃತಿಯನ್ನು ಬಿತ್ತಿದರು. ಎ ವಿ ಪಾಟೀಲ, ಗುರು ಭೀಮರಾವ ಪಾಟೀಲ, ಭೈರಪ್ಪ ಪಾಟೀಲ, ದಿಗಂಬರರಾವ ಕಲ್ಮಣಕರ ಸೇರಿದಂತೆ ಅನೇಕರು ಚಳುವಳಿಯ ಮುಂದಾಳತ್ವ ವಹಿಸಿದ್ದರು ಎಂದು ನುಡಿದರು.
ಗ್ರಾಮಗಳಲ್ಲಿರುವ ಹಿಂದು ಸಮುದಾಯದ ಮೇಲೆ ದಾಳಿ ಮಾಡಿ ಜಮೀನುಗಳಲ್ಲಿಯ ಬೆಳೆ ನಾಶ ಮಾಡುವದು, ಮನೆಗಳನ್ನು ಹಾಗು ದೇವಸ್ಥಾನಗಳನ್ನು ಲೂಟಿ ಮಾಡುವದು, ಹೆಂಗಸರ ಮೇಲೆ ಅತ್ಯಾಚಾರಗೈದು ವಿರೂಪಗೊಳಿಸುವದು, ಮಕ್ಕಳು ಮುದುಕರೆನ್ನದೆ ಕಂಡವರನ್ನೆಲ್ಲ ಕತ್ತಿ, ಕೊಡಲಿ, ಬಂದೂಕುಗಳಿಂದ ಹಿಂಸಿಸಿ ಕೊಲ್ಲುವದು, ರಾಷ್ಟ್ರೀಯ ವಿದ್ಯಾಲಯಗಳ ಮೇಲೆ ದಾಳಿ ಮಾಡುವದು ಇವೆಲ್ಲ ಪ್ರಜಾ ಚಳುವಳಿಯನ್ನು ಹತ್ತಿಕ್ಕಲು ರಜಾಕಾರರು ಕಂಡುಕೊಂಡ ತಂತ್ರಗಳಾಗಿದ್ದವು ಎಂದು ಹೇಳಿದರು.
ಆ. 15ರಂದು ಭಾರತ ಸ್ವತಂತ್ರವಾಯಿತು. ಆದರೆ ಆಗ ಭಾರತದೊಡನೆ ವಿಲೀನವಾಗಲು ಬಯಸಿದ ತನ್ನ ಸಂಸ್ಥಾನದ ಬಹುಜನರ ಅಭಿಪ್ರಾಯವನ್ನು ವಿರೋಧಿಸಿದ ಹೈದರಾಬಾದಿನ ನಿಜಾಮ ಮೀರ್ ಉಸ್ಮಾನ್ ಅಲಿ, “ಡೆಕ್ಕನ್ ರೇಡಿಯೋ” (ಅಥವಾ “ನಿಜಾಮ್ ರೇಡಿಯೋ”) ಮೂಲಕ ಹೈದರಾಬಾದ ಸಂಸ್ಥಾನವನ್ನು ಸ್ವತಂತ್ರ ರಾಷ್ಟ್ರವೆಂದು ಘೋಷಿಸಿದ. ನಿರೀಕ್ಷೆಯಂತೆ ಪಾಕಿಸ್ತಾನವು ಹೈದರಾಬಾದ ಸ್ವತಂತ್ರ ರಾಷ್ಟ್ರವೆಂದು ಮಾನ್ಯ ಮಾಡಿದ ಮೊದಲ ದೇಶವಾಯಿತು. ಭಾರತಕ್ಕೆ ಸ್ವಾತಂತ್ರ್ಯ ದೊರೆಯುವ ಹಲವು ವರ್ಷಗಳು ಮೊದಲಿನಿಂದ, ನಿಜಾಮ್ “ಸೋಲರಿಯದ ಅಲ್ಲಾಹುವಿನ ಸೈನಿಕರು” ಎಂದು ಕರೆದು ಕೊಳ್ಳುತ್ತಿದ್ದ ತನ್ನ ಸೇನೆಗೆ ಮತ್ತು ನಿಜಾಂ ಪೆÇೀಲಿಸರಿಗೆ ಬ್ರಿಟಿಷರ ಸೇನಾಧಿಕಾರಿಗಳಿಂದ ತರಬೇತಿ ಶಿಬಿರಗಳನ್ನು ನಡೆಸಿದ್ದ ಮತ್ತು ಆಗ ಪ್ರಸಿದ್ಧವಾಗಿದ್ದ ಸಿಡ್ನಿ ಕಾಟನ್ ಬಂದೂಕುಗಳು ಮತ್ತು ಅಪಾರ ಪ್ರಮಾಣದ ಮದ್ದುಗುಂಡುಗಳನ್ನು ಸಂಗ್ರಹಿಸಿದ್ದ. ಆ ಕಾಲಲ್ಲಿ ವಿಶ್ವದ ಗಣನೀಯ ಶ್ರೀಮಂತರಲ್ಲಿ ಒಬ್ಬನಾಗಿದ್ದ ನಿಜಾಮ್ ಮೀರ್ ಉಸ್ಮಾನ್ ಅಲಿಗೆ, ಹೈದರಾಬಾದ ಸಂಸ್ಥಾನವನ್ನು ಸ್ವತಂತ್ರ ರಾಷ್ಟ್ರವೆಂದು ಘೋಷಿಸಲು ಬ್ರಿಟಿμï ಹಾಗು ಪಾಕಿಸ್ತಾನಿ ರಾಜಕಾರಣಿಗಳ ಪ್ರತ್ಯಕ್ಷ ಮತ್ತು ಪರೋಕ್ಷ ಬೆಂಬಲವಿತ್ತು ಎಂದು ತಿಳಿಸಿದರು.
ಸಂಸ್ಥೆಯ ಆಡಳಿತಾಧಿಕಾರಿ ಡಾ. ರಾಘವೇಂದ್ರ ಚಿಂಚನಸೂರ ಧ್ವಜಾರೋಹಣ ನೇರವೇರಿಸಿ ಮಾತನಾಡಿ, ಭಾರತದೊಡನೆ ವಿಲೀನಗೊಳ್ಳುವ ಉದ್ದೇಶದಿಂದ ಹೈದರಾಬಾದ ಪ್ರಜೆಗಳು ಗಾಂಧೀ ಪ್ರಣೀತ ಅಹಿಂಸಾತ್ಮಕ ಚಳುವಳಿ ಪ್ರಾರಂಭಿಸಿದ್ದರು. ಇದರ ನೇತೃತ್ವವನ್ನು ಸಂಸ್ಥಾನ ಕಾಂಗ್ರೆಸ್ ಮುಖಂಡರಾದ ಸ್ವಾಮಿ ರಾಮಾನಂದ ತೀರ್ಥರು ವಹಿಸಿದ್ದರು. ಈ ಚಳುವಳಿಯನ್ನು ಹತ್ತಿಕ್ಕಲು ನಿಜಾಮನು ತನ್ನ ಪೆÇೀಲೀಸ್ ಬಲವನ್ನು ಅತ್ಯಂತ ಕ್ರೂರವಾಗಿ ಉಪಯೋಗಿಸಿದನು. ಇದಲ್ಲದೆ, ತನ್ನ ವಿರೋಧಿಗಳನ್ನು ಸಂಪೂರ್ಣವಾಗಿ ನಾಶ ಮಾಡಲು ಕಾಸಿಂ ರಜವಿ ಎಂಬ ಭಯೋತ್ಪಾದಕನ ನೇತ್ರತ್ವದಲ್ಲಿ ರಜಾಕಾರ ಹೆಸರಿನ ಭಯೋತ್ಪಾದಕರ ಪಡೆಯನ್ನು ಕೂಡಾ ನಿಸ್ಸಹಾಯಕ ಪ್ರಜೆಗಳ ಮೇಲೆ ದಾಳಿಗಿಳಿಸಿದನು ಎಂದು ಇತಿಹಾಸ ವಿವರಿಸಿದರು.
ಕಾಸಿಂ ರಜವಿ ಈಗ ಮಹಾರಾಷ್ಟ್ರ ರಾಜ್ಯದಲ್ಲಿರುವ ಲಾತೂರಿನಲ್ಲಿ ಒಬ್ಬ ಮಾಮೂಲಿ ವಕೀಲನಾಗಿದ್ದ. ಈತ ಉಗ್ರವಾದಿ ಸಂಘಟನೆ’ಇತಿಹಾದುಲ್ ಮುಸಲ್ಮಾನ್’ದ ಅಧ್ಯಕ್ಷನಾಗಿದ್ದ ಕೂಡಾ. ನಿಜಾಮನು ಹೈದರಾಬಾದ ಸಂಸ್ಥಾನವನ್ನು ಸ್ವತಂತ್ರ ರಾಷ್ಟ್ರವೆಂದು ಘೋಷಿಸಿದ ದಿನದಂದು, ಈ ರಜಾಕಾರರು, ವಿಶೇಷವಾಗಿ ಹೈದರಾಬಾದಿನಲ್ಲಿ ಸಾವಿರಾರು ಜನ ಅಮಾಯಕರ ಮೇಲೆ ದಾಳಿಯಿಟ್ಟು ಲೂಟಿ, ಅತ್ಯಾಚಾರ, ದೌರ್ಜನ್ಯ ನಡೆಸಿದರು. ಇಂದಿನ ತೆಲಂಗಾಣ ಪ್ರದೇಶ, ದಕ್ಷಿಣ ಮಹಾರಾಷ್ಟ್ರ ಮತ್ತು ಹೊಸಪೇಟೆಯ ಬಳಿಯಿರುವ ತುಂಗಭದ್ರಾ ತೀರದವರೆಗೆ ವಿಸ್ತರಿಸಿದ್ದ. ಹೈದರಾಬಾದ ಸಂಸ್ಥಾನದ ಜನ, 18 ಸೆಪ್ಟೆಂಬರ್ 1948 ಸಂಜೆ ಆರು ಗಂಟೆಯವರೆಗೆ ನಿರಂತರವಾಗಿ ಹಿಂಸೆ, ಕೊಲೆ, ಸುಲಿಗೆ ಮತ್ತು ದೌರ್ಜನ್ಯಕ್ಕೆ ಸಿಲುಕಿದರೂ, ಭಾರತದೊಡನೆ ಹೈದರಾಬಾದ ಸಂಸ್ಥಾನದ ವಿಲೀನಕ್ಕಾಗಿ ಹೋರಾಡಿದ್ದರು ಎಂದು ಮಾಹಿತಿ ನೀಡಿದರು.
ಕಾರ್ಯಕ್ರಮದಲ್ಲಿ ಪ್ರಾಚಾರ್ಯ ಕಲ್ಯಾಣಿ ಸಾವಳಗಿ, ಸಂಜಯ ಮೋರೆ, ನಾಗೇಂದ್ರ ಚಿಕ್ಕಳ್ಳಿ, ಶ್ರೀಧರ ಪಾಟೀಲ, ಜ್ಯೋತಿ ವಿಶಾಕ್ ಸೇರಿದಂತೆ ಸಂಸ್ಥೆಯ ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.