ಸರ್ ಎಂ.ವಿ.ಕಾರ್ಯ ಶ್ಲ್ಯಾಘನೀಯ

ಬಾಗಲಕೋಟೆ,ಸೆ.16 : ಕನ್ನಡ ನಾಡಿನ ಹೆಮ್ಮೆಯ ಪುತ್ರ ವಿಶ್ವ, ವಿಶ್ವವಿಖ್ಯಾತ ಇಂಜನೀಯರ್ ಭಾರತ ರತ್ನ ಪುರಸ್ಕøತ ಸರ್.ಎಂ.ವಿಶ್ವೇಶ್ವರಯ್ಯನವರು ಎಂದು ಜಿಲ್ಲಾ ಕಾಂಗ್ರೆಸ್ ಸಮಿತಿ ಮಾಧ್ಯಮ ವಕ್ತಾರ ನಾಗರಾಜ ಹದ್ಲಿ ಹೇಳಿದರು.
ನಗರದ ಕಾಂಗ್ರೆಸ್ ಕಛೇರಿಯಲ್ಲಿಂದು ಸರಳವಾಗಿ ಸರ್ ಎಂ.ವಿಶ್ವೇಶ್ವರಯ್ಯನವರ 160ನೇ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು ಇಂದು ದೇಶಾದ್ಯಂತ ಇಂಜನೀಯರ್‍ಗಳ ದಿನವನ್ನಾಗಿ ಆಚರಿಸಲಾಗುತ್ತಿದೆ. ಇವರು ಕಟ್ಟಿದ ಕೃಷ್ಣರಾಜ ಸಾಗರ ಡ್ಯಾಂ ರಾಜ್ಯದ ದಕ್ಷಿಣ ಭಾಗದ ಜಿಲ್ಲೆಗಳ ಪಾಲಿಗೆ ವರದಾನವಾಗಿದೆ. ಇವರ ವ್ಯಕ್ತಿತ್ವ, ವಿಚಾರಶೀಲತೆ, ದೂರದೃಷ್ಟಿಯುಳ್ಳ ಚಿಂತನೆ, ಸಾಮಾಜಿಕ ಕಳಕಳಿ ಇಂದಿನ ಯುವ ಪೀಳಿಗೆಗೆ ಸದಾ ಮಾದರಿಯಾಗಿದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷೆ ರಕ್ಷಿತಾ ಭರತಕುಮಾರ ಈಟಿ, ಜಿಲ್ಲಾ ಕಾಂಗ್ರೆಸ್ ಎಸ್.ಸಿ.ವಿಭಾಗದ ಅಧ್ಯಕ್ಷ ರಾಜು ಮನ್ನಿಕೇರಿ, ಜಿಲ್ಲಾ ಸೇವಾದಳದ ಸಂಚಾಲಕ ಎನ್.ಬಿ.ಗಸ್ತಿ, ಗ್ರಾಮೀಣ ಘಟಕದ ಅಧ್ಯಕ್ಷ ಎಸ್.ಎನ್.ರಾಂಪೂರ, ಜಿಲ್ಲಾ ಕಾಂಗ್ರೆಸ್ ಕಚೇರಿ ಕಾರ್ಯದರ್ಶಿ ಆನಂದ ಶಿಲ್ಪಿ, ಮಹಿಳಾ ಘಟಕದ ತಾಲುಕು ಅಧ್ಯಕ್ಷೆ ಶ್ರೀಮತಿ ರೇಣುಕಾ ನ್ಯಾಮಗೌಡರ, ಮಂಜುಳಾ ಭೂಸಾರೆ, ಜಯಶ್ರೀ ಗುಳಬಾಳ, ಎಸ್ಸಿ ಘಟಕದ ಜಿಲ್ಲಾ ಕಾರ್ಯದರ್ಶಿ ಶ್ರವಣ ಖಾತೇದಾರ, ಗ್ಯಾನಪ್ಪ ಚಲವಾದಿ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದು ಸರ್ ಎಂ.ವಿಶ್ವೇಶ್ವರಯ್ಯನವರ ಭಾವ ಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಗೌರವ ಸೂಚಿಸಿದರು.==