ಸಲಕರಣೆ ವಿತರಣೆ

(ಸಂಜೆವಾಣಿ ವಾರ್ತೆ)
ಚನ್ನಮ್ಮನ ಕಿತ್ತೂರು,ಸೆ 15: ಹೆಣ್ಣು ಮಕ್ಕಳು ಕಣ್ಣೀರಿಟ್ಟರೆ ಮನೆಗೆ ಒಳೆಯದಾಗುವುದಿಲ್ಲ, ರೈತ ಕಣ್ಣೀರಿಟ್ಟರೆ ದೇಶಕ್ಕೆ ಒಳ್ಳೆಯದಾಗುವುದಿಲ್ಲವೆಂದು ಬೆಳಗಾವಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಘಟಕದ ಕಾರ್ಯಕಾರಿ ಸಮಿತಿ ಸದಸ್ಯ ಸಂಜೀವಕುಮಾರ ತಿಲಗರ ಹೇಳಿದರು.
ತಾಲೂಕಿನ ಎಂ.ಕೆ.ಹುಬ್ಬಳ್ಳಿ ಪಟ್ಟಣದ ಖಾಸಗಿ ಶಾಲೆಯೊಂದರಲ್ಲಿ ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯವರು ಒಕ್ಕೂಟ ಪದಾಧಿಕಾರಿಗಳ ತರಬೇತಿ, ವಿಶೇಷ ಚೇತರಿಗೆ ಹಾಗೂ ವಯಸ್ಕರರಿಗೆ ಸಲಕರಣೆ ವಿತರಣಾ ಕಾರ್ಯಕ್ರಮವನ್ನು ಉದ್ಘಾಟಿಸಿ ದೀಪ ಪ್ರಜ್ವಲಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಸತ್ಕಾರ ಸ್ವೀಕರಿಸಿ ಮಾತನಾಡಿದ ಅವರು, ಮಕ್ಕಳಿಗೆ ಉತ್ತಮ ಶಿಕ್ಷಣ ದೊರೆಯಲಿಲ್ಲ ಎಂದರೆ ದೇಶದ ಅಭಿವೃದ್ಧಿಯಲ್ಲಿ ಕುಂಠಿತವಾಗುವುದು ಎಂದರು.
ಹೆಣ್ಣು ಮಕ್ಕಳು ಆರ್ಥಿಕವಾಗಿ ಸಧೃಡವಾಗಲು ಯೋಜನೆಯಿಂದÀ ಸ್ವ ಉದ್ಯೋಗ ಮಾಡಲು ಹಾಗೂ ಕೃಷಿ ಚಟುವಟಿಕೆಗೆ ಸಾಲ ನೀಡುತ್ತಿದ್ದಾರೆ. ಯೋಜನೆ ಸ್ವಸಹಾಯ ಗುಂಪುಗಳಲ್ಲಿ ಇರುವ ಮಕ್ಕಳ ವಿದ್ಯಾಭ್ಯಾಸಕ್ಕೆ ಶ್ರೀಮಂತ ಬಡವ ಎಂಬ ಭೇದಭಾವ ಮಾಡದೆ ಆ ವಿದ್ಯಾರ್ಥಿ ಪ್ರತಿಭಾವಂತವಾಗಿದ್ದರೆ, ಶಿಷ್ಯ ವೇತನ ನೀಡುವ ಮೂಲಕ ಪ್ರತಿ ಮನೆಯಲ್ಲಿ ದೀಪ ಹಚ್ಚುವ ಕಾರ್ಯವನ್ನು ಶ್ರೀಗಳು ಮಾಡುತ್ತಿದ್ದಾರೆ. ಇದರ ಸದುಪಯೋಗ ಪಡೆದುಕೊಳ್ಳಬೇಕೆಂದರು.
ಜಿಲ್ಲಾ ಜನಜಾಗೃತಿ ವೇದಿಕೆ ಸದಸ್ಯ ಅದೃಶ್ಯಾನಂದ ಗದ್ದಿಹಳ್ಳಿಶೆಟ್ಟಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ ಈ ಯೋಜನೆಯಿಂದ ಅನೇಕ ಜನಪರ ಕಾರ್ಯಕ್ರಮಗಳು ನಡೆಯುತ್ತಿವೆ. ಅವುಗಳ ಸದುಪಯೋಗವನ್ನು ಸರಿಯಾಗಿ ಮಾಡಿಕೊಂಡು ಆರ್ಥಿಕವಾಗಿ ಸಬಲರಾಗಿ ಹಾಗೂ ಯೋಜನೆಯಿಂದ ಪಡೆಯುವ ಸಾಲಗಳನ್ನು ಸರಿಯಾದ ಸಮಯಕ್ಕೆ ಭರಿಸಿ ಎಂದರು.
ತಾಲೂಕಾ ಯೋಜನಾಧಿಕಾರಿ ಸಂದೀಪ ಅವರು ಮಾತನಾಡಿ ಯೋಜನೆಯ ಸೌಲಭ್ಯಗಳನ್ನು ಪಡೆಯುವ ವಿಧಾನ ತಿಳಿಸಿ, ಒಕ್ಕೂಟದ ಪದಾಧಿಕಾರಿಗಳು ಸ್ವಸಹಾಯ ಗುಂಪುಗಳ ನಿರ್ವಹಣೆ ಯಾವ ರೀತಿ ಮಾಡಬೇಕು ಎಂದು ತರಬೇತಿ ನೀಡಿದರು. ವಿಶೇಷ ಚೇತನರಿಗೆ ಹಾಗೂ ವಯಸ್ಕರಿಗೆ ಜಲಮಂಗಲ ಯೋಜನೆಯಿಂದ ಮಂಜೂರಾದ ಸಲಕರಣೆಗಳನ್ನು ಸಾಂಕೇತಿಕವಾಗಿ ವಿತರಿಸಲಾಯಿತು.
ಈ ವೇಳೆ ಮಾಜಿ ಪಪಂ ಸದಸ್ಯರ ಬಾಳೇಶ ಪಾಗಾದ, ತಾಲೂಕಾ ಅಂತರಿಕ ಲೆಕ್ಕ ಪರಿಶೋಧಕ ಶಿವಕುಮಾರ, ವಲಯ ಮೇಲ್ವಿಚಾರಕ ಜನಾರ್ಧನ, ಒಕ್ಕೂಟದ ಅಧ್ಯಕ್ಷರು ಮತ್ತು ಎಲ್ಲಾ ಪದಾಧಿಕಾರಿಗಳು ಸೇವಾ ಪ್ರತಿನಿಧಿಗಳು ಉಪಸ್ಥಿತರಿದ್ದರು.