ಸವಿತಾ ಮಹರ್ಷಿ ಜಯಂತಿ ಆಚರಣೆ ಅಚ್ಚುಕಟ್ಟಾಗಿರಲಿ: ಡಾ.ಕೆ.ಆರ್ ದುರುಗೇಶ

ಸವಿತಾ ಮಹರ್ಷಿ ಜಯಂತಿ ಆಚರಣೆ ಕುರಿತು ಪೂರ್ವಭಾವಿ ಸಭೆ
ರಾಯಚೂರು,ಜ.೨೧- ಜಿಲ್ಲಾಡಳಿತದ ವತಿಯಿಂದ ಸವಿತಾ ಮಹರ್ಷಿ ಜಯಂತಿಯನ್ನು ಜ.೨೮ರಂದು ಆಚರಣೆ ಮಾಡಲಾಗುತ್ತಿದ್ದು, ಜಯಂತಿ ಆಚರಣೆ ಅಚ್ಚುಕಟ್ಟಾಗಿರಲಿ ಎಂದು ಅಪರ ಜಿಲ್ಲಾಧಿಕಾರಿ ಡಾ.ಕೆ.ಆರ್ ದುರುಗೇಶ ಹೇಳಿದರು.
ಅವರು ಜ.೨೦ರ(ಶುಕ್ರವಾರ) ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಸವಿತಾ ಮಹಿರ್ಷಿ ಜಯಂತಿ ಆಚರಣೆ ಕುರಿತು ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಕಳೆದ ಎರಡು ವರ್ಷಗಳಿಂದ ಕೋವಿಡ್ ಕಾರಣದಿಂದಾಗಿ ಸವಿತಾ ಮಹರ್ಷಿ ಜಯಂತಿ ಆಚರಣೆಯನ್ನು ಸರಳವಾಗಿ ಮಾಡಲಾಗಿತ್ತು. ಈ ಬಾರಿಯ ಸವಿತಾ ಮಹರ್ಷಿ ಜಯಂತಿಯನ್ನು ಜ.೨೮ರಂದು ಸವಿತಾ ಮಹರ್ಷಿ ಭಾವಚಿತ್ರವನ್ನು ಬೆಳಿಗ್ಗೆ ೦೮:೦೦ ಗಂಟೆಗೆ ನಗರದ ಮಹತ್ಮಾ ಗಾಂಧಿ ವೃತ್ತದಿಂದ ಕನ್ನಡ ಭವನದ ವರೆಗೆ ಕಲಾ ತಂಡಗಳೊಂದಿಗೆ ಮೆರವಣಿಗೆ ಮಾಡಲಾಗುವುದು ನಂತರ ಕನ್ನಡ ಭವನದಲ್ಲಿ ಬೆಳಿಗ್ಗೆ ೧೦:೩೦ಕ್ಕೆ ವೇದಿಕೆ ಕಾರ್ಯಕ್ರಮ ಜರುಗಿಸಲಾಗುವುದು ಎಂದು ಹೇಳಿದರು.
ಸವಿತಾ ಮಹರ್ಷಿ ಜಯಂತಿ ಕುರಿತು ಉಪನ್ಯಾಸ ಕಾರ್ಯಕ್ರಮವನ್ನು ಹಮ್ಮಿಕೊಳ್ಳಬೇಕು. ಸ್ಥಳೀಯ ಹಾಗೂ ಹೊಸ ಉಪನ್ಯಾಸಕರಿಗೆ ಅವಕಾಶ ನೀಡಬೇಕು, ಶಿಷ್ಟಾಚಾರದಂತೆ ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ನಡೆಸುವಂತೆ ಸೂಚನೆ ನೀಡಿದರು.
ಕಡ್ಡಾಯವಾಗಿ ಗ್ರಾ,.ಪಂ ವ್ಯಾಪ್ತಿಯಿಂದ ಜಿಲ್ಲಾ ಮಟ್ಟದ ಎಲ್ಲಾ ಇಲಾಖೆಯ ಅಧಿಕಾರಿಗಳು ಹಾಗೂ ಶಾಲಾ ಕಾಲೇಜುಗಳಲ್ಲಿ ಕಡ್ಡಾಯವಾಗಿ ಸವಿತಾ ಮಹರ್ಷಿ ಜಯಂತಿಯನ್ನು ಆಚರಣೆ ಮಾಡಬೇಕು ಎಂದರು.
ಈ ಸಂದರ್ಭದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಮಂಗಳಾ ನಾಯಕ, ಜಿಲ್ಲಾ ದೈಹಿಕ ಶಿಕ್ಷಣ ಅಧಿಕಾರಿ ಪರಶುರಾಮ, ನಗರಸಭೆ ಅಧಿಕಾರಿ ಶಖೀಲ್, ಸಮಾಜದ ಮುಖಂಡರಾದ ರಾಘವೇಂದ್ರ, ವಿಜಯಭಾಸ್ಕರ್, ಗೋವಿಂದ, ಭೀಮೇಶ, ಗೋಪಾಲ, ನಾಗರಾಜ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.