ಸವಿತಾ ಸಮಾಜ ಯುವಕ ಸಂಘದಿಂದ ಸಚಿವ ಡಾ. ಪಾಟೀಲರಿಗೆ ಮನವಿ

ಕಲಬುರಗಿ,ಜು,02: ಕಲಬುರಗಿ ಜಿಲ್ಲಾ ಸವಿತಾ ಸಮಾಜ ಯುವಕ ಸಂಘದ ಜಿಲ್ಲಾಧ್ಯಕ್ಷರಾದ ಆನಂದ ವಾರಿಕ ಅವರ ನೇತೃತ್ವದಲ್ಲಿ ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃಧ್ಧಿ ಖಾತೆ ಸಚಿವರಾದ ಡಾ ಶರಣಪ್ರಕಾಶ ಪಾಟೀಲ ಅವರಿಗೆ
ಪೂರ್ಣ ಬಹುಮತದೊಂದಿಗೆ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಪಕ್ಷ ಅತಿ ಹಿಂದುಳಿದ ವರ್ಗಗಳ ನಿಗಮಗಳಿಗೆ ಹೆಚ್ಚಿನ ಅನುದಾನ ಬಿಡುಗಡೆ ಮಾಡಿ ಶೈಕ್ಷಣಿಕವಾಗಿ ಉಧ್ಯೋಗಿಕವಾಗಿ ಆರ್ಥಿಕವಾಗಿ ಸಾಮಾಜಿಕವಾಗಿ ರಾಜಕೀಯವಾಗಿ ಅತಿ ಹಿಂದುಳಿದ ಸಮುದಾಯಗಳ ಅಭಿವೃದ್ಧಿಗಾಗಿ ಆಯಾ ಸಮುದಾಯಗಳ ಅಭಿವೃದ್ಧಿ ನಿಗಮ ಮಂಡಳಿ ರಚಿಸಲಾಗಿದೆ
ಕಳೆದ ಸರ್ಕಾರದ ಅವಧಿಯಲ್ಲಿ ಅತಿ ಹಿಂದುಳಿದ ಸವಿತಾ ಸಮಾಜ ಅಭಿವೃದ್ಧಿ ನಿಗಮಕ್ಕೆ ಅಭಿವೃದ್ಧಿಗೆ ಪೂರಕವಾದ ಅನುದಾನ ಬಿಡುಗಡೆಯಾಗಿಲ್ಲ ರಾಜ್ಯಾದ್ಯಂತ ಹದಿನೈದು ಲಕ್ಷಕ್ಕಿಂತ ಹೆಚ್ಚಿನ ಜನಸಂಖ್ಯೆ ಹೊಂದಿರುವ ಸವಿತಾ ಸಮಾಜ ಅಭಿವೃದ್ಧಿ ನಿಗಮ ಮಂಡಳಿಗೆ ಜುಲೈ 7 ರಂದು ನಡೆಯಲಿರುವ ಬಜೆಟ್ ನಲ್ಲಿ ಹೆಚ್ಚಿನ ಅನುದಾನ ಬಿಡುಗಡೆ ಮಾಡುಬೇಕು ಪಕ್ಷ ಅಧಿಕಾರಕ್ಕೆ ಬಂದಿದೆ ಪಕ್ಷಕ್ಕೆ ಶೃಮಿಸಿದ ಕಾರ್ಯಕರ್ತರಿಗೆ ಸ್ಥಳೀಯ ಸಂಸ್ಥೆಗಳಾದ ಮಹಾನಗರ ಪಾಲಿಕೆ ನಗರಸಭೆ ಪುರಸಭೆ ಪಟ್ಟಣ ಪಂಚಾಯಿತಿ ಹಾಗೂ ಇತರೆ ನಿಗಮಗಳಲ್ಲಿ ನಾಮನಿರ್ದೇಶನ ಸ್ಥಾನ ಮಾನ ನೀಡಿ ರಾಜಕೀಯವಾಗಿ ಅತಿ ಹಿಂದುಳಿದ ಸಮುದಾಯದಕ್ಕೆ ರಾಜಕೀಯ ಸ್ಥಾನಮಾನ ನೀಡಬೇಕು ಹಾಗೂ ಸರ್ಕಾರ ಅತಿ ಹಿಂದುಳಿದ ವರ್ಗಗಳ ಸಮುದಾಯಗಳ ಅಭಿವೃದ್ಧಿಗೆ ಶೃಮಿಸಬೇಕು ಎಂದು ಕಲಬುರಗಿ ಜಿಲ್ಲಾ ಸವಿತಾ ಸಮಾಜ ಯುವಕ ಸಂಘದ ವತಿಯಿಂದ ಸಚಿವರಿಗೆ ಅಭಿನಂದಿಸಿ ಮನವಿ ಸಲ್ಲಿಸಲಾಯಿತು ಇದೆ ಸಂದರ್ಭದಲ್ಲಿ ಮಾಜಿ ಮಹಾಪೌರರಾದ ಶರಣು ಮೋದಿ ನೌಕರರ ಸಂಘದ ಗೌರವಾಧ್ಯಕ್ಷರಾದ ರಾಜೇಂದ್ರ ಅಸ್ಟೀಕರ ಯುವಕ ಸಂಘದ ಕಾರ್ಯಾಧ್ಯಕ್ಷರಾದ ವಿದ್ಯಾಸಾಗರ ಹಾಬಾಳ ಪ್ರಧಾನ ಕಾರ್ಯದರ್ಶಿಗಳಾದ ಬಸವರಾಜ ಕೆರಿಅಂಬಲಗಾ ಅಂಬರೀಷ್ ಇಟಗಾ ಉಪಸ್ಥಿತರಿದ್ದರು.