ಸಸ್ಪೆನ್ಸ್ ,ಥ್ರಿಲ್ಲರ್ ಮೋಕ್ಷ…

ಸಸ್ಪೆನ್ಸ್ ಥ್ರಿಲ್ಲರ್ ಕಥಾಹಂದರ ಹೊಂದಿರುವ ” ಮೋಕ್ಷ” ಚಿತ್ರದ ಟ್ರೈಲರ್ ಬಿಡುಗಡೆಯಾಗಿದೆ. ವಿಭಿನ್ನ ಕಥೆ ಒಳಗೊಂಡಿರುವ ಚಿತ್ರದ ಟ್ರೇಲರ್ ಅನ್ನು

ಪವರ್ ಸ್ಟಾರ್ ಪುನೀತ್ ರಾಜಕುಮಾರ್, ಕಿಚ್ಚ ಸುದೀಪ್, ನಿರ್ದೇಶಕರಾದ ಯೋಗರಾಜ್ ಭಟ್, ಸಿಂಪಲ್ ಸುನಿ ನಟ ರಿಶಿ‌ ಮುಂತಾದ ಗಣ್ಯರು ಈ ಮೆಚ್ಚುಗೆ ಸೂಚಿಸಿದ್ದಾರೆ.

ನಿರ್ಮಾಪಕ,ನಿರ್ದೇಶಕ ಸಮರ್ಥ್ ನಾಯಕ್, ಸಸ್ಪೆನ್ಸ್ ಥ್ರಿಲ್ಲರ್ ಕಥಾ ಹಂದರ ಹೊಂದಿರುವ ಚಿತ್ರ ತಾಂತ್ರಿಕವಾಗಿ ಅದ್ದೂರಿತನದಿಂದ ಮೂಡಿಬಂದಿದೆ. ಅದಕ್ಕೆ ಕಾರಣ ಚಿತ್ರದ ತಂತ್ರಜ್ಞರು. ಚಿತ್ರರಂಗದ ಗಣ್ಯರು ಹಾಗೂ ನೋಡುಗರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಏಪ್ರಿಲ್ 16 ಮೋಕ್ಷ ಬಿಡುಗಡೆಯಾಗಲಿದೆ ಎಂದರು.

ನಾಯಕ ಮೋಹನ್ ಧನರಾಜ್ ಅವರಿಗೆ ಇದು ಕನ್ನಡದಲ್ಲಿ ಚೊಚ್ಚಲ ಚಿತ್ರ. ಸಸ್ಪೆನ್ಸ್ ಚಿತ್ರವಾಗಿರುವುದರಿಂದ ಚಿತ್ರ ನೋಡಿದಮೇಲೆ ಕಥೆ ಏನು? ಎಂದು ತಿಳಿಯುವುದು. ನಮ್ಮ ಪ್ರಯತ್ನಕ್ಕೆ ನಿಮ್ಮ ಪ್ರೋತ್ಸಾಹವಿರಲಿ ಎಂದರು ಧನರಾಜ್.

ನಾಯಕಿ ಆರಾಧ್ಯ ಲಕ್ಷ್ಮಣ್ ಪಾತ್ರದ ಬಗ್ಗೆ ಮೆಚ್ಚುಗೆ ಮಾತುಗಳಾಡಿದರು. ತಾರಕ್ ಪೊನ್ನಪ್ಪ, ಮಾತನಾಡಿ ಚಿತ್ರವನ್ನು ಕರ್ನಾಟಕ ಹಾಗೂ ಗೋವಾದ ಸುಂದರಸ್ಥಳಗಳಲ್ಲಿ ಚಿತ್ರೀಕರಣ ಮಾಡಲಾಗಿದೆ‌ , ಈ ಚಿತ್ರದಲ್ಲಿ ಮಾಸ್ಕ್ ಮ್ಯಾನ್ ಎಂಬ ಪಾತ್ರವೊಂದಿದೆ. ಮಾಸ್ಕ್ ಮ್ಯಾನ್ ನಿಂದ ನಾಯಕ, ನಾಯಕಿ ಬಹಳ ತೊಂದರೆ ಅನುಭವಿಸುತ್ತಿರುತ್ತಾರೆ.

ಈ ವಿಷಯ ತಿಳಿದು ಪೊಲೀಸ್ ಅಧಿಕಾರಿ ಪಾತ್ರಧಾರಿಯಾದ ನಾನು ಏನು ಮಾಡುತ್ತೇನೆ ಎಂಬುದನ್ನು ಚಿತ್ರದಲ್ಲಿ ವೀಕ್ಷಿಸಿ ಎಂದರು. ಛಾಯಾಗ್ರಾಹಕ ಜೋಮ್ ಜೋಸಫ್ ತಮ್ಮ ಅಭಿಪ್ರಾಯ ಹಂಚಿಕೊಂಡರು.

ಜಯಂತ್ ಕಾಯ್ಕಿಣಿ, ಕುಮಾರ್ ದತ್ ಬರೆದಿರುವ ಎರಡು ಹಾಡುಗಳಿಗೆ ಕಿಶನ್ ಮೋಹನ್ ಹಾಗೂ ಸಚಿನ್ ಬಾಲು ಸಂಗೀತ ನೀಡಿದ್ದಾರೆ.