ಸಹಕಾರಿ ವ್ಯವಸಾಯಿಕ ಸೊಸೈಟಿಯಿಂದನಿರ್ವಹಣೆ ಬೂತ್ ಹಸ್ತಾಂತರ


ಪಡುಬಿದ್ರಿ, ನ.೧೭- ೬೯ನೇ ಅಖಿಲ ಭಾರತ ಸಹಕಾರ ಸಪ್ತಾಹ ಕಾರ್ಯಕ್ರಮ ಅಂಗವಾಗಿ ಪಡುಬಿದ್ರಿ ಸಹಕಾರಿ ವ್ಯವಸಾಯಿಕ ಸೊಸೈಟಿ ವತಿಯಿಂದ ಪಡುಬಿದ್ರಿ ಆರಕ್ಷಕ ಠಾಣೆಗೆ ಕೊಡಮಾಡಿದ ಧ್ವನಿವರ್ಧಕ ಹಾಗೂ ಸಂಚಾರ ನಿರ್ವಹಣೆ ಬೂತ್‌ನ್ನು ಬುಧವಾರ ಹಸ್ತಾಂತರಿಸಲಾಯಿತು.  ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಬಿ.ಜಯಕರ ಶೆಟ್ಟಿ ಇಂದ್ರಾಳಿ ಪಡುಬಿದ್ರಿ ಪೊಲೀಸ್ ಠಾಣೆಗೆ ನೀಡಿದ ಧ್ವನಿವರ್ಧಕವನ್ನು ಕಾರ್ಕಳ ಉಪವಿಭಾಗದ ಡಿವೈಎಸ್‌ಪಿ ವಿಜಯಪ್ರಸಾದ್ ಹಾಗೂ ಕಾಪು ವೃತ್ತ ನಿರೀಕ್ಷಕ ಪೂವಯ್ಯ ಕೆ.ಸಿ., ಪಡುಬಿದ್ರಿ ಠಾಣಾಧಿಕಾರಿ ಪುರುಷೋತ್ತಮ್ ಅವರಿಗೆ ಹಸ್ತಾಂತರಿಸಲಾಯಿತು. ಬಳಿಕ ಮಾತನಾಡಿದ ಬಿ.ಜಯಕರ ಶೆಟ್ಟಿ ಇಂದ್ರಾಳಿ, ವಾಹನ ದಟ್ಟಣೆಯನ್ನು ನಿಯಂತ್ರಿಸಿ ಸಾರ್ವಜನಿಕರು ವಾಹನಗಳ ಸುಗಮ ಸಂಚಾರಕ್ಕೆ ವ್ಯವಸ್ಥೆ ಕಲ್ಪಿಸುವ ಪೊಲೀಸರ ಕಾರ್ಯದಲ್ಲಿ ಸಹಕಾರಿ ಸಂಸ್ಥೆ ನೆರವಾಗುವ ಮೂಲಕ ಉತ್ತಮ ಕೆಲಸ ಮಾಡಿದೆ. ಕೆರೆಯ ನೀರನ್ನು ಕೆರೆಗೆ ಚೆಲ್ಲಿ ಎಂಬಂತೆ ದುಡಿಮೆ ಲಾಭಾಂಶದ ಒಂದಂಶವನ್ನು ಸಮಾಜಮುಖಿ ಕೆಲಸಗಳಿಗೆ ನೀಡುವ ಮಹತ್ಕಾರ್ಯವನ್ನು ಸಹಕಾರಿ ಸಂಸ್ಥೆಗಳು ಮಾಡುತ್ತಿವೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. ಪಡುಬಿದ್ರಿ ಸಹಕಾರಿ ವ್ಯವಸಾಯಿಕ ಸೊಸೈಟಿ  ಅಧ್ಯಕ್ಷ ವೈ ಸುಧೀರ್ ಕುಮಾರ್, ಉಪಾಧ್ಯಕ್ಷ ಗುರುರಾಜ ಪೂಜಾರಿ, ಮುಖ್ಯಕಾರ್ಯನಿರ್ವಹಣಾಧಿಕಾರಿ ನಿಶ್ಮಿತಾ ಪಿ.ಎಚ್. ನಿರ್ದೇಶಕರಾದ ಗಿರೀಶ್ ಪಲಿಮಾರು, ವಾಸುದೇವ ಪಲಿಮಾರು, ವೈ.ಜಿ.ರಸೂಲ್, ಯಶವಂತ್, ಶಿವರಾಮ ಶೆಟ್ಟಿ, ಸುಚರಿತಾ ಎಲ್ ಅಮೀನ್, ಸ್ಟ್ಯಾನಿ ಕ್ವಾಡ್ರಸ್, ರಾಜಾರಾಮ್, ಮಾಧವ ಆಚಾರ್ಯ ಮತ್ತಿತರರು ಉಪಸ್ಥಿತರಿದ್ದರು.