ಸಹಕಾರ ಮಹಾಮಂಡಳ ನಿರ್ದೇಶಕರಾಗಿ ನಾಗಮಾರಪಳ್ಳಿ ಅಯ್ಕೆ

ಬೀದರ:ಎ.1: ಡಿಸಿಸಿ ಬ್ಯಾಂಕ್ ಅಧ್ಯಕ್ಷ ಉಮಾಕಾಂತ ನಾಗಮಾರಪಳ್ಳಿ ಅವರು ಕರ್ನಾಟಕ ರಾಜ್ಯ ಸಹಕಾರ ಮಹಾ ಮಂಡಳದ ನಿರ್ದೇಶಕರಾಗಿ ಆಯ್ಕೆಯಾಗಿದ್ದಾರೆ.

ಐದು ವರ್ಷಗಳ ಅವಧಿಗೆ ನಡೆದ ಚುನಾವಣೆಯಲ್ಲಿ ಎಲ್ಲ 14 ನಿರ್ದೇಶಕ ಸ್ಥಾನಗಳಿಗೆ ಶಾಸಕ ಜಿ.ಟಿ. ದೇವೇಗೌಡ ನೇತೃತ್ವದ ತಂಡದ ಅಭ್ಯರ್ಥಿಗಳು ಆಯ್ಕೆಯಾಗಿದ್ದಾರೆ. ಕಲಬುರ್ಗಿ ವಿಭಾಗದಿಂದ ಉಮಾಕಾಂತ ನಾಗಮಾರಪಳ್ಳಿ ಸೇರಿ ಮೂವರು ಆಯ್ಕೆಯಾಗಿದ್ದಾರೆ.

ಉಮಾಕಾಂತ ಅವರು ಮೂರು ದಶಕಗಳಿಂದ ಸಹಕಾರ ಕ್ಷೇತ್ರದಲ್ಲಿ ಇದ್ದಾರೆ. ಜಿಲ್ಲಾ ಮಟ್ಟದಿಂದ ರಾಜ್ಯಮಟ್ಟದವರೆಗಿನ ವಿವಿಧ ಹುದ್ದೆಗಳನ್ನು ಅಚ್ಚುಕಟ್ಟಾಗಿ ನಿಭಾಯಿಸಿದ್ದಾರೆ.

ಎರಡನೇ ಅವಧಿಗೆ ಡಿಸಿಸಿ ಬ್ಯಾಂಕ್ ಅಧ್ಯಕ್ಷರಾಗಿರುವ ಅವರು, ಅಪೆಕ್ಸ್ ಬ್ಯಾಂಕ್, ಕರ್ನಾಟಕ ಸಹಕಾರ ವಸತಿ ಮಹಾಮಂಡಳ ಹಾಗೂ ಕರ್ನಾಟಕ ಸಹಕಾರ ಗ್ರಾಹಕರ ಮಹಾ ಮಂಡಳದ ನಿರ್ದೇಶಕರೂ ಆಗಿದ್ದಾರೆ.