ಸಹಕಾರ ಸಂಘಗಳ ಮೂಲಕ ಆರ್ಥಿಕ ಸಬಲೀಕರಣ

ಸುಳ್ಯ ಸಿ.ಎ. ಬ್ಯಾಂಕ್ ನಲ್ಲಿ ತಾಲೂಕು ಮಟ್ಟದ ಸಹಕಾರ ಸಪ್ತಾಹ ಉದ್ಘಾಟನೆ
ಸುಳ್ಯ, ನ.೧೮- ಸಹಕಾರಿ ಕ್ಷೇತ್ರಗಳ ಬೆಳವಣಿಗೆಗೆ ಸರಕಾರ ಗಮನ ಹರಿಸಬೇಕು. ಈ ಕ್ಷೇತ್ರದಲ್ಲಿರುವ ಲೋಪದೋಷಗಳ ಬಗ್ಗೆ ಚಿಂತನೆ ನಡೆಸುವ ಮೂಲಕ ಆರ್ಥಿಕ ಸಬಲೀಕರಣಕ್ಕೆ ಒತ್ತು ನೀಡಬೇಕು ಎಂದು ಸುಳ್ಯ ಶಾಸಕ ಎಸ್.ಅಂಗಾರ ಹೇಳಿದರು.
ಸುಳ್ಯ ತಾಲೂಕು ಸಹಕಾರ ಯೂನಿಯನ್, ಸುಳ್ಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ, ಕರ್ನಾಟಕ ರಾಜ್ಯ ಸಹಕಾರ ಮಹಾ ಮಂಡಳ ಬೆಂಗಳೂರು, ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಮಂಗಳೂರು, ದ.ಕ. ಜಿಲ್ಲಾ ಸಹಕಾರಿ ಯೂನಿಯನ್ ಮಂಗಳೂರು ಇವುಗಳ ಸಂಯುಕ್ತ ಆಶ್ರಯದಲ್ಲಿ ಸುಳ್ಯ ಸಿ.ಎ. ಬ್ಯಾಂಕ್ ಸಭಾಂಗಣದಲ್ಲಿ ನಡೆದ ೬೭ ನೇ ಅಖಿಲ ಭಾರತ ಸಹಕಾರ ಸಪ್ತಾಹ ಉದ್ಘಾಟಿಸಿ ಮಾತನಾಡಿ ಸಹಕಾರಿ ಕ್ಷೇತ್ರ ಬೆಳವಣಿಗೆ ಆದರೆ ಗ್ರಾಮೀಣ ಭಾಗಗಳು ಆರ್ಥಿಕ ಸಬಲೀಕರಣಗೊಳ್ಳುತ್ತದೆ. ಸಹಕಾರಿ ಸಂಘಗಳಲ್ಲಿ ಇರುವ ಸಮಸ್ಯೆಗಳನ್ನು ನಿವಾರಿಸಿ ತನ್ನ ಸ್ವಂತ ಕಾಲ ಮೇಲೆ ನಿಲ್ಲಬೇಕು. ನೆಟ್‌ವರ್ಕ್ ಸಮಸ್ಯೆಗಳ ಮಧ್ಯೆಯು ತಾಂತ್ರಿಕತೆಯನ್ನು ಬಳಸಿಕೊಂಡು ಆರ್ಥಿಕ ಸಬಲೀಕರಣಗೊಳ್ಳಬೇಕು ಎಂದು ಹೇಳಿದರು.
ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಪ್ರಸಾದ್ ಕೌಶಲ್ ಶೆಟ್ಟಿ ಸಹಕರ ಸಪ್ತಾಹ ಧ್ವಜಾರೋಹಣ ಗೈದರು. ಸಭಾ ಕಾರ್ಯಕ್ರಮದಲ್ಲಿ ಸಹಕಾರಿ ಯೂನಿಯನ್ ತಾಲೂಕು ಅಧ್ಯಕ್ಷ ರಮೇಶ್ ದೇಲಂಪಾಡಿ ಅಧ್ಯಕ್ಷತೆ ವಹಿಸಿದ್ದರು. ತಾ.ಪಂ. ಅಧ್ಯಕ್ಷ ಚನಿಯ ಕಲ್ತಡ್ಕ, ಸಹಕಾರ ಸಂಘಗಳ ಸಹಾಯಕ ಉಪನಿಬಂಧಕ ರಾಜು, ಜಿಲ್ಲಾ ಸಹಕಾರಿ ಯೂನಿಯನ್ ನಿರ್ದೇಶಕ ಮಹೇಶ್ ಜಿ, ತಾಲೂಕು ಯೂನಿಯನ್ ಉಪಾಧ್ಯಕ್ಷ ವೆಂಕಟೇಶ ಹೆಚ್.ಎಲ್., ಕಾರ್ಯದರ್ಶಿ ವೆಂಕಟ್ರಮಣ ಮುಳ್ಯ, ಕೋಶಾಧಿಕಾರಿ ಭಾಗೀರಥಿ ಮುರುಳ್ಯ, ಅರಂತೋಡು-ತೊಡಿಕಾನ ಸಹಕಾರ ಸಂಘದ ಅಧ್ಯಕ್ಷ ಸಂತೋಷ್ ಕುತ್ತಮೊಟ್ಟೆ, ತಾಲೂಕು ಸಹಕಾರಿ ಯೂನಿಯನ್ ನಿರ್ದೇಶಕರಾದ ರಾಮಕೃಷ್ಣ ರೈ ಪೇರಾಲು ಗುತ್ತು, ಶಾರದಾ ಡಿ ಶೆಟ್ಟಿ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸಂಘದ ಅಧ್ಯಕ್ಷ ನೇಮಿರಾಜ್ ಪಲ್ಲೋಡಿ, ಸುಳ್ಯ ಸಿ.ಎ. ಬ್ಯಾಂಕ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸುದರ್ಶನ ಸೂರ್ತಿಲ ವೇದಿಕೆಯಲ್ಲಿದ್ದರು.
ಕು. ಮುಮ್ತಾಜ್ ನೇಲ್ಯಡ್ಕ ಪ್ರಾರ್ಥಿಸಿದರು. ಕು. ಶ್ರೇಷ್ಠ ಆಳ್ವ ನಾಡಗೀತೆ ಹಾಡಿದರು. ಸುಳ್ಯ ಸಿ.ಎ. ಬ್ಯಾಂಕ್ ಅಧ್ಯಕ್ಷ ಹರೀಶ್ ಬೂಡುಪನ್ನೆ ಸ್ವಾಗತಿಸಿ, ಪುರುಷೋತ್ತಮ ಶೆಟ್ಟಿ ನಿರೂಪಿಸಿದರು.