ಸಹಕಾರ ಸಂಘದ ಅಧ್ಯಕ್ಷರಾದ ಸಚಿವ ಆನಂದ್ ಸಿಂಗ್,

ಬಳ್ಳಾರಿ ನ 12 : ಜಿಲ್ಲೆಯ ಹೊಸಪೇಟೆ ತಾಲೂಕು ವ್ಯವಸಾಯ ಉತ್ಪನ್ನ ಮಾರಾಟ ಸಹಕಾರ ಸಂಘದ ಐದು ವರ್ಷಗಳ ಆಡಳಿತ ಮಂಡಳಿಯ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಇಂದು ನಡೆದ ಚುನಾವಣೆಯಲ್ಲಿ ಅರಣ್ಯ, ಜಿಲ್ಲಾ ಉಸ್ತುವಾರಿ ಸಚಿವ ಆನಂದ್ ಸಿಂಗ್ ಅಧ್ಯಕ್ಷರಾಗಿ ಹಾಗೂ ಉಪಾಧ್ಯಕ್ಷರಾಗಿ ಬಂಡೆ ರಂಗಪ್ಪ ಅವರು ಅವಿರೋಧ ಆಯ್ಕೆಯಾಗಿದ್ದಾರೆ.
ಆಡಳಿತ ಮಂಡಳಿಯ ಚುನಾವಣೆ ನ.04ರಂದು ನಡೆದಿದ್ದು, ಇಂದು ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಚುನಾವಣೆ ನಡೆಯಿತು.ತಹಶೀಲ್ದಾರರಾದ ಹೆಚ್.ವಿಶ್ವನಾಥ್ ಅವರು ಸಂಘದ ಚುನಾವಣಾಧಿಕಾರಿಗಳಾಗಿದ್ದರು.
ಬಳ್ಳಾರಿ ಜಿಲ್ಲಾ ಕೇಂದ್ರ ಸಹಕಾರಿ( ಬಿಡಿಸಿಸಿ) ಬ್ಯಾಂಕ್ ಮೇಲೆ ಕಣ್ಣಿಟ್ಟಿರುವವ ಕಾರಣ ಸಚಿವ ಆನಂದ್ ಸಿಂಗ್ ಅವರು ಮುಂದೆ ಬಿಡಿಸಿ ಬ್ಯಾಂಕ್ ಗೆ ನಿರ್ದೇಶಕರಾಗಲು ಈ ಸಂಘವನ್ನು ವೇದಿಕೆಯನ್ನಾಗಿ ಮಾಡಿಕೊಂಡಿದ್ದಾರೆ ಎನ್ನುತ್ತಿದೆ ಅವರ ಬೆಂಬಲಿಗ ಬಳಗ.