ಸಹಿ ಸಂಗ್ರಹ ಅಭಿಯಾನ

ನರಗುಂದ,ಏ24 : ಯುವ ಮತದಾರರಲ್ಲಿ ಕಡ್ಡಾಯ ಮತದಾನ ಜಾಗೃತಿ ಮೂಡಿಸಲು ತಾಲೂಕು ಸ್ವೀಪ್ ಸಮಿತಿ ವತಿಯಿಂದ ನಗರದ ಸರ್ಕಾರಿ ಎಂಜಿನಿಯರಿಂಗ್ ಕಾಲೇಜಿನಲ್ಲಿ ಯುವ ಮತದಾರರಲ್ಲಿ ಕಡ್ಡಾಯ ಮತದಾನ ಬಗ್ಗೆ ಜಾಗೃತಿ ಮೂಡಿಸುವ ಸಲುವಾಗಿ ವಿದ್ಯಾರ್ಥಿಗಳಿಗೆ ಸಹಿ ಸಂಗ್ರಹ ಅಭಿಯಾನ ಆಯೋಜಿಸಲಾಯಿತು. ಸಹಿ ಸಂಗ್ರಹ ಅಭಿಯಾನದಲ್ಲಿ ಭಾಗಿಯಾದ ಯುವ ಮತದಾರರು ಕಡ್ಡಾಯವಾಗಿ ಮತದಾನ ದಿನ ಮತದಾನ ಮಾಡುವ ಕುರಿತು ಸಂಕಲ್ಪ ಮಾಡಿ ಸಹಿ ಸಂಗ್ರಹ ಅಭಿಯಾನದಲ್ಲಿ ರುಜು ಹಾಕಿದರು.
ತಾಲೂಕು ಸ್ವೀಪ್ ಸಮಿತಿ ವತಿಯಿಂದ ನಗರದ ಸರ್ಕಾರಿ ಎಂಜಿನಿಯರಿಂಗ್ ಕಾಲೇಜಿನಲ್ಲಿ ಯುವ ಮತದಾರರಲ್ಲಿ ಕಡ್ಡಾಯ ಮತದಾನ ಬಗ್ಗೆ ಜಾಗೃತಿ ಮೂಡಿಸುವ ಸಲುವಾಗಿ ಯುವ ಮತದಾರರ ಸಹಿ ಸಂಗ್ರಹ ಅಭಿಯಾನದಲ್ಲಿ ಆಯೋಜಿಸಲಾಗಿತ್ತು.
ಅಭಿಯಾನದಲ್ಲಿ ನರಗುಂದ ವಿಧಾನಸಭೆ ಸಹಾಯಕ ಚುನಾವಣೆ ಅಧಿಕಾರಿ ಡಾ.ಹಂಪಣ್ಣ ಸಜ್ಜನ ಮಾತನಾಡಿ, ಸಂವಿಧಾನ ನೀಡಿರುವ ಮತದಾನ ಹಕ್ಕನ್ನು ಚಲಾಯಿಸಿದೆ ಜನಪ್ರತಿನಿಧಿಗಳನ್ನು ಸೌಲಭ್ಯ ಒದಗಿಸಿ ಅಂತ ಕೇಳುವುದಕ್ಕಿಂತ ಮತ ಚಲಾಯಿಸಿ ಸೌಲಭ್ಯ ಕೇಳವುದು ಉತ್ತಮ ಮತದಾರನ ನಡೆಯಾಗಿದೆ. ಸಮಾಜದಲ್ಲಿ ವಿವಿಧ ಸೌಲಭ್ಯಗಳಿಗಾಗಿ ಜನಪ್ರತಿನಿಧಿಗಳನ್ನು ಪ್ರಶ್ನಿಸುವ ಮತದಾರರ ಸಂಖ್ಯೆ ದೊಡ್ಡದಿದೆ. ಹಲವು ಮತದಾರರು ಮತದಾನ ದಿನ ಮತ ಚಲಾಯಿಸಿದೇ ಚುನಾವಣೆ ಬಳಿಕ ಜನಪ್ರತಿನಿಧಿಗಳನ್ನು ಪ್ರಶ್ನಿಸುವ ಸಂಪ್ರದಾಯ ಹೊಂದಿರುವುದು ಸರಿಯಲ್ಲ. ಮತದಾನ ದಿನ ಯೋಗ್ಯ ಅಭ್ಯರ್ಥಿಗೆ ಮತ ಹಾಕಿ ಜನಪ್ರತಿನಿಧಿಗಳನ್ನು ಸೌಲಭ್ಯಗಳಿಗಾಗಿ ಪ್ರಶ್ನಿಸುವುದು ಉತ್ತಮ ಮತದಾರನ ಲಕ್ಷಣವಾಗಿದೆ ಅಂತ ಅಭಿಪ್ರಾಯಪಟ್ಟರು.

ತಾಲೂಕು ಪಂಚಾಯತ ಕಾರ್ಯನಿರ್ವಾಹಕ ಅಧಿಕಾರಿಗಳು ಸೋಮಶೇಖರ್ ಬಿರಾದಾರ ಮಾತನಾಡಿ, ಸಮಾಜದ ಎಲ್ಲ ಕ್ಷೇತ್ರಗಳಲ್ಲೂ ಸ್ವೀಪ್ ಸಮಿತಿ ವತಿಯಿಂದ ಕಡ್ಡಾಯ ಮತದಾನ ಜಾಗೃತಿ ಮೂಡಿಸಲಾಗುತ್ತಿದೆ. ಯುವ ಮತದಾರರಲ್ಲಿ ಮತದಾನ ಜಾಗೃತಿ ಮೂಡಿಸಲು ಸಹಿ ಸಂಗ್ರಹ ಅಭಿಯಾನದಂತ ಕಾರ್ಯಕ್ರಮಗಳು ವಿದ್ಯಾರ್ಥಿಗಳ ಜವಾಬ್ದಾರಿಯನ್ನು ಹೆಚ್ಚಿಸುವ ಕೆಲಸ ಮಾಡುತ್ತದೆ. ಮೊದಲ ಬಾರಿಗೆ ಮತದಾನ ಮಾಡುತ್ತಿರುವ ವಿದ್ಯಾರ್ಥಿಗಳು ಯಾವುದೇ ಆಮಿಷಕ್ಕೆ ಒಳಗಾಗದೇ ದೇಶಕ್ಕೆ ಕೀರ್ತೀ ತರುವ ಸಂಸದರನ್ನು ಆ0iÉ?ಕುಗೊಳಿಸಲು ಮುಂದಾಗಿ ಅಂತ ಹೇಳಿದರು.
ನರಗುಂದ ತಹಶೀಲ್ದಾರ ಶ್ರೀಶೈಲ ತಳವಾರ ಮಾತನಾಡಿ, ಆಧುನೀಕ ತಂತ್ರಜ್ಞಾನ ಯುಗದಲ್ಲಿರುವ ಎಂಜಿನಿಯರಿಂಗ್ ವಿದ್ಯಾರ್ಥಿಗಳು ಮತದಾನ ಪ್ರಕ್ರಿ0iÉ?? ಬಗ್ಗೆ ತಿಳಿದುಕೊಂಡಿರಬೇಕು. ಮತಯಂತ್ರಗಳ ಕಾರ್ಯಕ್ಷಮತೆ ಮತ್ತು ಗೌಪ್ಯತೆ ಹಾಗೂ ಚುನಾವಣೆ ನಡೆಯುವ ಪ್ರತಿ ಹಂತಗಳನ್ನು ತಿಳಿದಿರಬೇಕು. ಜೊತೆಗೆ ಕೇವಲ ಮಾಹಿತಿಯನ್ನು ತಿಳಿದುಕೊಳ್ಳದೇ ಸುತ್ತಮುತ್ತಲಿನ ಜನರಿಗೂ ಪಾರದರ್ಶಕ ಚುನಾವಣೆ ಪ್ರಕ್ರಿ0iÉ? ಬಗ್ಗೆ ವಿದ್ಯಾರ್ಥಿಗಳು ತಿಳಿಸುವಂತ ಕಾರ್ಯ ಮಾಡಬೇಕು ಎಂದರು.
ಅಭಿಯಾನದಲ್ಲಿ ಭಾಗವಹಿಸಿದ್ದ 250 ಕ್ಕೂ ಅಧಿಕ ಯುವ ಮತದಾರ ಎಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಕಾಲೇಜಿನ ಎನ್.ಎಸ್.ಎಸ್ ಸಂಯೋಜಕ ಬಸವರಾಜ ಹೊಸಕೋಟಿ, ಅವರು ಕಡ್ಡಾಯ ಮತದಾನದ ಪ್ರತಿಜ್ಞಾವಿಧಿ ಬೋಧಿಸಿದರು.
ಯುವ ಮತದಾರರ ಸಹಿ ಸಂಗ್ರಹ ಅಭಿಯಾನದಲ್ಲಿ ಸರ್ಕಾರಿ ಎಂಜಿನಿಯರಿಂಗ್ ಕಾಲೇಜಿನ ಪ್ರಾಚಾರ್ಯರು ಸಿದ್ದನಗೌಡ ಪಾಟೀಲ್, ಎಂಜಿನಿಯರಿಂಗ್ ವಿದ್ಯಾರ್ಥಿಗಳು ಹಾಗೂ ತಾಲೂಕು ಪಂಚಾಯತ ಸಿಬ್ಬಂದಿ ವರ್ಗ ಹಾಜರಿದ್ದರು.
ತಾಲೂಕು ಪಂಚಾಯತ ಸಿಬ್ಬಂದಿ ಪ್ರದೀಪ್ ಕದಮ್ ನಿರೂಪಿಸಿ ವಂದಿಸಿದರು.