ಸಹೋದರರ ಹತ್ಯೆಗೆ ಬಿಷ್ಣೋಯಿ ಸ್ಫೂರ್ತಿ

ಪ್ರಯಾಗರಾಜ್,ಏ.೧೮- ದರೋಡೆಕೋರ-ರಾಜಕಾರಣಿ ಅತಿಕ್ ಅಹ್ಮದ್ ಮತ್ತು ಆತನ ಸಹೋದರ ಅಶ್ರಫ್ ಅವರನ್ನು ಗುಂಡಿಕ್ಕಿ ಕೊಂದ ಮೂವರು ವ್ಯಕ್ತಿಗಳು ಜೈಲಿನಲ್ಲಿರುವ ದರೋಡೆಕೋರ ಲಾರೆನ್ಸ್ ಬಿಷ್ಣೋಯ್ ಅವರಿಂದ ಸ್ಫೂರ್ತಿ ಪಡೆದಿದ್ದಾರೆ ಎಂದು ಉನ್ನತ ಮೂಲಗಳು ತಿಳಿಸಿವೆ.
ಗ್ಯಾಂಗ್‌ಸ್ಟರ್ ಸಹೋದರನ್ನು ಕೊಂದ ಮೂವರು ಹಂತಕರನ್ನು ಲವ್ಲೇಶ್ ತಿವಾರಿ, ಸನ್ನಿ ಸಿಂಗ್ ಮತ್ತು ಅರುಣ್ ಮೌರ್ಯ ಎಂದು ಪೊಲೀಸರು ಗುರುತಿಸಿದ್ದಾರೆ. ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ವೈದ್ಯಕೀಯ ತಪಾಸಣೆಗೆ ಕರೆದೊಯ್ಯುವ ಮಾರ್ಗ ಮಧ್ಯೆ ಸುದ್ದಿಗಾರರೊಂದಿಗೆ ಅತಿಕ್ ಅಹ್ಮದ್ ಮತ್ತು ಆತನ ಸಹೋದರ ಅಶ್ರಫ್ ಮಾತನಾಡುತ್ತಿದ್ದಾಗ ಪತ್ರಕರ್ತರಂತೆ ಕಾಣಿಸಿಕೊಂಡ ಮೂವರು ಹಂತಕರನ್ನು ಅಹ್ಮದ್ ಮತ್ತು ಅವರ ಸಹೋದರನ ಮೇಲೆ ಗುಂಡು ಹಾರಿಸಿದ್ದರು. ಇದರ ಪರಿಣಾಮ ಸಹೋದರರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದರು.
ಅಗತ್ಯ ಸಿದ್ದತೆ: ಗ್ಯಾಂಗ್ ಸ್ಟರ್ ಅತಿಕ್ ಅಹ್ಮದ್ ಮತ್ತು ಆತನ ಸಹೋದರ ಅಶ್ರಫ್ ಸಹೋಧರರನ್ನು ಕೊಲ್ಲಲು ಮೂರು ಮಂದಿ ಅಗತ್ಯ ಸಿದ್ದತೆ ಮಾಡಿಕೊಂಡಿದ್ದರು. ತಾವೂ ಕೂಡ ಡಾನ್ ಆಗಿ ಬೆಳಯಬೇಕು ಎನ್ನವುದೇ ಅವರ ಉದ್ದೇಶವಾಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.