ಸಾಂಕ್ರಾಮಿಕ ರೋಗಗಳ ಮುಕ್ತ ಜಿಲ್ಲೆಗೆ ಎಡಿಸಿ ಕರೆ

ಮಧುಮೇಹ ಜಾಗೃತಿ ಅರಿವು ಜಾಥಾ ಕಾರ್ಯಕ್ರಮಕ್ಕೆ ಚಾಲನೆ
ರಾಯಚೂರು.ನ.೧೪- ಜಿಲ್ಲೆಯಲ್ಲಿ ದಿನನಿತ್ಯದ ನಮ್ಮ ಆಹಾರ ಪದ್ಧತಿ ಹಾಗೂ ಜೀವನಶೈಲಿಯ ಬದಲಾವಣೆಗಳಿಂದ ಮಧುಮೇಹ ಸಮಸ್ಯೆ ನಿರಂತರವಾಗಿ ಹೆಚ್ಚುತ್ತಿದೆ ಎಂದು ಅಪಾರ ಜಿಲ್ಲಾಧಿಕಾರಿ ಡಾ. ದುರುಗೇಶ ಹೇಳಿದರು.
ಅವರಿಂದು ನಗರದ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಜಿಲ್ಲಾ ಅರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಲಯನ್ಸ್ ಕ್ಲಬ್ ವತಿಯಿಂದ ಆಯೋಜಿಸಿದ ವಿಶ್ವ ಮಧುಮೇಹ ದಿನಾಚರಣೆಯ ಅಂಗವಾಗಿ ಜನ ಜಾಗೃತಿ ಅರಿವು ಜಾಥಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಮುಖ್ಯವಾಗಿ ಸದೃಢ ಮಾನಸಿಕ ಹಾಗೂ ದೈಹಿಕ ಆರೋಗ್ಯ ರಕ್ಷಣೆಯೇ ಎಲ್ಲರ ಮೊದಲ ಆದ್ಯತೆಯಾಗಬೇಕಿದೆ. ಉತ್ತಮ ಜೀವನ ನಡೆಸಲು ನಿತ್ಯ ಯೋಗಸನಾ ಮತ್ತು ದೂಚ್ಚಟ ಸೇವೆನೆಯಿಂದ ಮುಕ್ತರಾಗಬೇಕು ಎಂದರು.ಯುವಜನತೆ ಆರೋಗ್ಯ ಜಾಗೃತಿ ಹೊಂದಬೇಕು. ದಿನನಿತ್ಯ ಮಕ್ಕಳಿಗೆ ಪೌಷ್ಟಿಕ ಆಹಾರ ನೀಡಬೇಕು. ಮಧುಮೇಹ ಕಾಯಿಲೆ ಬರದಂತೆ ಮುನ್ನಚ್ಚರಿಕೆ ಕ್ರಮವಹಿಸಬೇಕು. ನ್ಯಾಮೋನಿಯ ಕಾಯಿಲೆ ಬಗ್ಗೆ ಈಗಾಗಲೇ ಗ್ರಾಮ ಪಂಚಾಯತ್ ಮಟ್ಟದಲ್ಲಿ ಜಾಗೃತಿ ಅರಿವು ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದರು.ಸಾಂಕ್ರಾಮಿಕ ರೋಗಗಳನ್ನು ತಡೆಗಟ್ಟಿ ಸಾಂಕ್ರಾಮಿಕ ರೋಗಗಳ ಮುಕ್ತ ಜಿಲ್ಲೆಯನ್ನಾಗಿ ಮಾಡಲು ಎಲ್ಲರೂ ಸಹಕರಿಸಬೇಕು ಎಂದರು.
ಈ ಸಂದರ್ಭದಲ್ಲಿ ಅರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿ ಡಾ. ಸುರೇಂದ್ರ ಬಾಬು, ಜಿ. ಮಲ್ಲಿಕಾರ್ಜುನ, ರಾಜೇಂದ್ರ ಶಿವಳೆ, ಡಾ. ಗಣೇಶ, ಡಾ. ನಂದಿತಾ ಹಾಗೂ ಆಶಾಕಾರ್ಯಕರ್ತರು ಸೇರಿದಂತೆ ವಿದ್ಯಾರ್ಥಿಗಳಿಗೆ ಇದ್ದರು.