ಸಾಂಸ್ಕೃತಿಕ ಚಟುವಟಿಕೆ, ಕಲಾಪ್ರಕಾರಗಳು ಜೀವನಕ್ಕೆ ಸ್ಪೂರ್ತಿ-ಡಾ. ಜೈರಾಜ್ ಚಿಕ್ಕಪಾಟೀಲ

ಸಂಜೆವಾಣಿ ವಾರ್ತೆ

ದಾವಣಗೆರೆ-ಜ.೧೮; ಮಾನವನ ಜೀವನ ಕೇವಲ ದುಡಿಮೆಗೆ ಸೀಮಿತವಾಗದೇ ಸಾಮಾಜಿಕ ಕಾಳಜೀಯ ಸಾಂಸ್ಕೃತಿಕ ಚಟುವಟಿಕೆಗಳು, ಲಲಿತ ಕಲಾಪ್ರಕಾರಗಳು ನಮ್ಮ ಜೀವನಕ್ಕೆ ಸ್ಪೂರ್ತಿ. ವಿದ್ಯಾರ್ಥಿಗಳು ಶಿಕ್ಷಣದ ಜತೆಯಲ್ಲಿ ಕಲೆ, ಸಾಹಿತ್ಯ, ಸಂಗೀತ, ಸಂಸ್ಕೃತಿ ಸಂಸ್ಕಾರಗಳನ್ನು ಅಳವಡಿಸಿ ಕೊಂಡಾಗ ಶಿಕ್ಷಣಕ್ಕೆ ಪರಿಪೂರ್ಣತೆ ಬರುತ್ತದೆ. ಸ್ಪರ್ಧೆಗಳಲ್ಲಿ ಸೋತಾಗ ಕುಗ್ಗದೇ, ಗೆದ್ದಾಗ ಹಿಗ್ಗದೇ ಸಮಚಿತ್ತತೆಯ ಮನೋಭಾವದೊಂದಿಗೆಅನುಸರಿಸಬೇಕಾಗಿದೆ. ಸೋಲು ಗೆಲುವಿನ ಮೆಟ್ಟಿಲು, ಕಳೆದ ಮೂರುವರೆ ದಶಕಗಳಿಂದ ಕಠಿಣ ಪರಿಶ್ರಮದ ಕ್ರಿಯಾಶೀಲ ಸಾಂಸ್ಕೃತಿಕ ಚಟುವಟಿಕೆಗಳ ಕಲಾಕುಂಚ ಸಾಂಸ್ಕೃತಿಕ ಸಂಸ್ಥೆಯ ಸಾಧನೆ ಶ್ಲಾಘನೀಯ ಎಂದು ದೃಶ್ಯ ಕಲಾ ಮಹಾವಿದ್ಯಾಲಯದ ಪ್ರಾಚಾರ್ಯರಾದ ಡಾ. ಜೈರಾಜ್ ಚಿಕ್ಕಪಾಟೀಲರವರು ತಮ್ಮ ಅನುಸಿಕೆ ಹಂಚಿಕೊAಡರು.ದಾವಣಗೆರೆಯ ಕಲಾಕುಂಚ ಸಾಂಸ್ಕೃತಿಕ ಸಂಸ್ಥೆಯ 34ನೇ ವರ್ಷದ ವಾರ್ಷಿಕೋತ್ಸವ ಮತ್ತು ಸಂಸ್ಥೆಯ ಸಂಸ್ಥಾಪನಾ ದಿನಾಚರಣೆಯ ಸಮಾರಂಭವನ್ನು ನಗರದ ದೃಶ್ಯಕಲಾ ಮಹಾವಿದ್ಯಾಲಯ ಸಭಾಂಗಣದಲ್ಲಿ ನಿನ್ನೆ ದಿನ ಉದ್ಘಾಟಿಸಿ ಅವರು ಮಾತನಾಡಿದರು. ಸಮಾರಂಭದ ಅಧ್ಯಕ್ಷತೆ ವಹಿಸಿ ಕಲಾಕುಂಚದ ಅಧ್ಯಕ್ಷರಾದ ಕೆ.ಹೆಚ್.ಮಂಜುನಾಥ್ ಮಾತನಾಡಿ, ಸಂಕುಚಿತ ಭಾವನೆಬಿಟ್ಟು ವಿಶಾಲವಾದ ಮನೋಭಾವನೆ ರೂಢಿಸಿಕೊಂಡರೆ ಸಂಘಟನೆ ಬೆಳೆಯುತ್ತಾ ಹೋಗುತ್ತದೆ. ವಾಣಿಜ್ಯ ನಗರಿ ದಾವಣಗೆರೆನ್ನು ಸಾಂಸ್ಕೃತಿಕ ನಗರಿಯಾಗಿ ಪರಿವರ್ತಿಸತ್ತಿರುವ ಸಂಸ್ಥೆಯ ನಿರಂತರ ಚಟುವಟಿಕೆಗಳ ಇತರೆ ಸಂಸ್ಥೆಗಳಿಗೆ ಮಾದರಿ ಎಂದರು.ವಿವಿಧ ಉಚಿತ ಸ್ಪರ್ಧೆಗಳ ತೀರ್ಪುಗಾರರು ಮತ್ತು ಮುಖ್ಯ ಅತಿಥಿಗಳಾಗಿ ವೇದಿಕೆಯಲ್ಲಿ ಉಪಸ್ಥಿತರಿದ್ದ ಶಿಲ್ಪಚಿತ್ರಕಲಾವಿದರಾದ ಚಂದ್ರಶೇಖರ ಎಸ್.ಸಂಗಾ ಮಾತನಾಡಿ, ಮಕ್ಕಳಲ್ಲಿ ಅಡಗಿರುವ ಸೂಕ್ತ ಕಲಾಪ್ರತಿಭೆಗಳಿಗೆ ಮುಕ್ತವಾದ ವೇದಿಕೆ ಕಲ್ಪಿಸುತ್ತಿರುವ ಈ ಕಲಾಕುಂಚದ ಕಾರ್ಯ ಶ್ಲಾಘನೀಯ ಎಂದರು.ಈ ಸಮಾರಂಭದ ಪ್ರಯುಕ್ತ ಹಮ್ಮಿಕೊಳ್ಳಲಾದ ಸ್ಥಳದಲ್ಲೇ ಉಚಿತ ಚಿತ್ರ ಬರೆಯುವ ಸ್ಪರ್ಧೆ ಮತ್ತು ಧ್ಯಾನ ಶಿಬಿರದಲ್ಲಿ ಪಾಲ್ಗೊಂಡ ಶಿಬಿರಾರ್ಥಿಗಳಿಗೆ ಅಭಿನಂದನಾ ಪತ್ರ, ಬಹುಮಾನ ವಿತರಿಸಲಾಯಿತು. ನೂತನವಾಗಿ ಸಂಸ್ಥೆಗೆ ಸೇರ್ಪಡೆಯಾದ ಸದಸ್ಯರಿಗೆ ಕನ್ನಡತಾಯಿ ಭುವನೇಶ್ವರಿ ಸ್ಮರಣಿಕೆ ನೀಡಿ ವೇದಿಕೆಯಲ್ಲಿ ಗೌರವಿಸಲಾಯಿತು.